ಪುನೀತ್
ಕಾನೂನುಬಾಹಿರ ಚಟುವಟಿಕೆ ತಡೆಗೆ ಕ್ರಮ; ಮಾಲೀಕರಿಂದ ಸಿಗದ ಸ್ಪಂದ
ಮಡಿಕೇರಿ: ಅನಧಿಕೃತ ಹೋಂ ಸ್ಟೇಗಳಲ್ಲಿ ಆಗಾಗ್ಗೆ ವರದಿಯಾಗುವ ಕಾನೂನುಬಾಹಿರ ಚಟುವಟಿಕೆಗಳು ಈ ಉದ್ಯಮದ ಮೇಲೆ ಕಪ್ಪು ಚುಕ್ಕೆಯಂತೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಹೋಂ ಸ್ಟೇಗಳ ಕಡ್ಡಾಯ ನೋಂದಣಿಗೆ ಜಿಲ್ಲಾಡಳಿತ ಸೂಚಿಸಿದ್ದರೂ ನಿರೀಕ್ಷಿತ ರೀತಿಯಲ್ಲಿ ಪ್ರತಿಕ್ರಿಯೆ ಸಿಗುತ್ತಿಲ್ಲ.
ಏ.೫ರಂದು ಮಡಿಕೇರಿಯ ಅನಧಿಕೃತ ಹೋಂಸ್ಟೇ ಒಂದರಲ್ಲಿ ತಂಗಿದ್ದ ತಾಯಿ ಮತ್ತು ಮಗಳಿಗೆ ಅಲ್ಲಿಯ ಕೇರ್ ಟೇಕರ್ ಮಧ್ಯರಾತ್ರಿಯಲ್ಲಿ ಕಿರುಕುಳ ನೀಡಿದ್ದ ವಿಷಯ ಸುದ್ದಿ ಆಗಿತ್ತು. ಈ ಘಟನೆ ಜಿಲ್ಲೆಯ ಹೋಂ ಸ್ಟೇಗಳಲ್ಲಿನ ಸುರಕ್ಷತೆಯನ್ನೇ ಪ್ರಶ್ನೆ ಮಾಡುವಂತೆ ಇದ್ದ ಕಾರಣ ಕೂಡಲೇ ಕಾರ್ಯಪ್ರವೃತ್ತವಾದ ಪೊಲೀಸ್ ಇಲಾಖೆ ಆರೋಪಿ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಂದು ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು ಎನ್ನುವ ಕಟ್ಟು ನಿಟ್ಟಿನ ಸೂಚನೆಯನ್ನು ಹೋಂ ಸ್ಟೇ ನಿರ್ವಾಹಕರಿಗೆ ರವಾನಿಸಿತ್ತು.
ಕಳೆದ ವರ್ಷ ಮಂಗಳೂರಿನಿಂದ ಪ್ರವಾಸಕ್ಕಾಗಿ ಮಡಿಕೇರಿ ಆಗಮಿಸಿದ್ದ ೧೪ ಮಂದಿ ಪ್ರವಾಸಿಗರು ಮಧ್ಯವರ್ತಿ ಮೂಲಕ ಸಮೀಪದ ಮಕ್ಕಂದೂರು ಬಳಿಯ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಈ ವೇಳೆ ಈ ಹೋಂ ಸ್ಟೇಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿದ ಕೂಡಲೇ ದಾಳಿ ನಡೆಸಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ೧೪ ಮಂದಿಯನ್ನು ಪೊಲೀಸರು ಬಂಧಿಸಿದ್ದಲ್ಲದೆ, ೪೧೪ ಗ್ರಾಂ ಗಾಂಜಾ ಮತ್ತು ೯ ಎಲ್‌ಎಸ್‌ಡಿ ನಿಷೇಧಿತ ಮಾದಕ ವಸ್ತುಗಳನ್ನೂ ವಶಪಡಿಸಿ ಕೊಂಡು ಮಧ್ಯವರ್ತಿ, ಹೋಂ ಸ್ಟೇ ಮಾಲೀಕನನ್ನು ಬಂಧಿಸಿದ್ದರು.
ಕೊಡಗಿನಲ್ಲಿ ಯಾವ ಊರಿಗೆ ಹೋದರೂ ಹೋಂ ಸ್ಟೇಗಳು ಸಾಮಾನ್ಯ ಎಂಬಂತಾಗಿದೆ. ಪ್ರವಾಸೋದ್ಯಮ ಇಲಾಖೆ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಸುಮಾರು ೩,೫೦೦ ಹೋಂ ಸ್ಟೇಗಳಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಈ ಸಂಖ್ಯೆ ಇನ್ನೂ ಹೆಚ್ಚು ಇರುವ ಸಾಧ್ಯತೆಗಳಿವೆ. ಪ್ರವಾಸೋದ್ಯಮ ಇಲಾಖೆಯಲ್ಲಿ ಈವರೆಗೂ ೨,೨೬೯ ಹೋಂ ಸ್ಟೇಗಳು ನೋಂದಣಿ ಮಾಡಿಕೊಂಡಿವೆ. ಪ್ರವಾಸಿಗರ ಸಂಖ್ಯೆ ಇಳಿಮುಖ ಆಗಿದ್ದ ಕಾರಣಕ್ಕೆ ಕೊರೊನಾ ಕಾಲದಲ್ಲಿ ಶೇ.೬೦ರಷ್ಟು ಹೋಂ ಸ್ಟೇಗಳು ಬಾಗಿಲು ಮುಚ್ಚಿದ್ದವು. ಇದೀಗ ಪ್ರವಾಸೋದ್ಯಮ ಚೇತರಿಸಿಕೊಂಡಿರು ವುದರಿಂದ ಹೋಂ ಸ್ಟೇಗಳು ಮತ್ತೆ ಎಲ್ಲೆಂದರಲ್ಲಿ ತಲೆ ಎತ್ತುತ್ತಿವೆ.
ಹೋಂ ಸ್ಟೇಗಳನ್ನು ಶಿಸ್ತುಬದ್ಧ ವ್ಯವಸ್ಥೆ ಅಡಿಯಲ್ಲಿ ಕಾರ್ಯಾಚರಿಸುವಂತೆ ಮಾಡಲು ಜಿಲ್ಲಾಡಳಿತ ಮೊದಲಿನಿಂದಲೂ ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡ ನಂತರವಷ್ಟೇ ಪ್ರವಾಸಿಗರ ಆತಿಥ್ಯಕ್ಕೆ ಮುಂದಾಗಬೇಕು. ಇಲ್ಲದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹಲವು ಬಾರಿ ಎಚ್ಚರಿಕೆ ನೀಡಲಾಗಿದೆ. ಆದರೂ ಯಾವುದೇ ಪ್ರಯೋಜನ ಆಗಿಲ್ಲ. ನೋಂದಣಿ ವ್ಯವಸ್ಥೆ ಸರಳವಾಗಿದ್ದರೂ ಅನಽಕೃತ ಹೋಂ ಸ್ಟೇಗಳ ನೋಂದಣಿಗೆ ಹೆಚ್ಚು ಆಸಕ್ತಿ ಕಂಡು ಬರುತ್ತಿಲ್ಲ.
ಸಹಾಯವಾಣಿ ಮಾಹಿತಿ ಇಲ್ಲದೆ ಅನಧಿಕೃತ ವಾಗಿ ನಡೆಸುತ್ತಿರುವಂಥ ಹೋಂ ಸ್ಟೇಗಳ ಬಗ್ಗೆ ಪ್ರವಾಸೋದ್ಯಮ ಇಲಾಖೆಗೆ ಪತ್ರ ಮುಖೇನ ಅಥವಾ ಫೋನ್ ಮೂಲಕ ಮಾಹಿತಿ ನೀಡಬಹುದಾಗಿದೆ.
ಕಚೇರಿ ವಿಳಾಸ: ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ೫೭೧೨೦೧ ದೂರವಾಣಿ ಸಂಖ್ಯೆ: ೦೮೨೭೨-೨೦೦೫೧೯ ಸಂಪರ್ಕಿಸಬಹುದು.
” ಮಡಿಕೇರಿಯ ಹೋಂ ಸ್ಟೇ ಒಂದರಲ್ಲಿ ಏ.೫ರಂದು ನಡೆದಿರುವ ಘಟನೆ ಖಂಡನೀಯ. ಈ ಘಟನೆ ಕೊಡಗಿನ ಹೋಂ ಸ್ಟೇಗೆ ಒಂದು ಕಪ್ಪು ಚುಕ್ಕಿ ತರುವಂತಾಗಿದೆ. ಈ ಹೋಂ ಸ್ಟೇ ಕೂರ್ಗ್ ಹೋಂ ಸ್ಟೇ ಅಸೋಸಿಯೇಷನ್ನ ಸದಸ್ಯತ್ವ ಪಡೆದಿರುವುದಿಲ್ಲ. ಕೆಲವು ದಿನಗಳ ಹಿಂದೆ ಹಂಪಿಯಲ್ಲಿ ಪ್ರವಾಸಿಗರ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಽಸಿದಂತೆ ಪ್ರವಾಸೋದ್ಯಮ ಇಲಾಖೆ ಹಾಗೂ ಪೊಲೀಸ್ ಇಲಾಖೆ ಮೂಲಕ ಕೊಡಗಿನ ಎಲ್ಲಾ ಹೋಂ ಸ್ಟೇ ಮಾಲೀಕರನ್ನು ಕರೆಸಿ ಇಂತಹ ಘಟನೆಗಳು ಮರುಕಳಿಸದಂತೆ ಹಾಗೂ ಹೋಂ ಸ್ಟೇಗಳಲ್ಲಿ ತಂಗುವಪ್ರವಾಸಿಗರಿಗೆ ಸೂಕ್ತ ಭದ್ರತೆ ನೀಡುವಂತೆ ಸಲಹೆ ಸೂಚನೆಗಳನ್ನು ನೀಡಲಾಗಿತ್ತು.”
ಮೊಂತಿ ಗಣೇಶ್, ಅಧ್ಯಕ್ಷೆ, ಕೂರ್ಗ್ ಹೋಂಸ್ಟೇ ಅಸೋಸಿಯೇಷನ್
” ಕೊಡಗು ಜಿಲ್ಲೆಯಲ್ಲಿ ಅಂದಾಜು ೩,೫೦೦ ಹೋಂ ಸ್ಟೇಗಳಿರಬಹುದು ಎಂದು ಅಂದಾಜಿಸಲಾಗಿದೆ. ಈ ಪೈಕಿ ಪ್ರವಾಸೋದ್ಯಮ ಇಲಾಖೆಯಲ್ಲಿ ಈವರೆಗೂ ೨,೨೬೯ ಹೋ ಂಸ್ಟೇಗಳು ನೋಂದಣಿ ಮಾಡಿಕೊಂಡಿವೆ. ತಿಂಗಳಿಗೆ ೩೦-೫೦ ಹೊಸ ಹೋಂ ಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಯಾಗದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ ಸ್ಟೇಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ”
-ಅನಿತಾ ಭಾಸ್ಕರ್, ಉಪನಿರ್ದೇಶಕಿ, ಪ್ರವಾಸೋದ್ಯಮ ಇಲಾಖೆ, ಕೊಡಗು
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…
ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್‌ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ…
ಬೆಂಗಳೂರು : ಮಾರ್ಕ್ʼ ಸಿನಿಮಾದ ಪ್ರೀ-ರಿಲೀಸ್ ಈವೆಂಟ್‌ನಲ್ಲಿ ಕಿಚ್ಚ ಸುದೀಪ್ ಹೇಳಿದ ಮಾತೊಂದು ಸೋಶಿಯಲ್ ಮೀಡಿಯಾದಲ್ಲಿ ಚರ್ಚೆಗೆ ಕಾರಣವಾಗಿದ್ದು, ಈ…
ಚಾಮರಾಜನಗರ : ಅನ್ನದಾತರಾಗಿರುವ ರೈತರ ಬಗ್ಗೆ ಆತ್ಮೀಯ ಕಾಳಜಿಯಿದ್ದು, ಅವರ ಹಿತ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ಪ್ರಾಮಾಣಿಕ ಕೆಲಸವನ್ನು ಮಾಡುತ್ತಿದೆ…
ಬೆಂಗಳೂರು : ಸರ್ಕಾರಿ ಆಯುರ್ವೇದ ವೈದ್ಯಕೀಯ ಕಾಲೇಜು ಅಧಿಕೃತ ಅಧಿಸೂಚನೆಯ ಮೂಲಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು…