Andolana originals

ಕೊಡಗು ಜಿಲ್ಲೆಯಲ್ಲಿ ಹೋಂ ಸ್ಟೇ ನೋಂದಣಿಗೆ ನಿರಾಸಕ್ತಿ

ಪುನೀತ್

ಕಾನೂನುಬಾಹಿರ ಚಟುವಟಿಕೆ ತಡೆಗೆ ಕ್ರಮ; ಮಾಲೀಕರಿಂದ ಸಿಗದ ಸ್ಪಂದ

ಮಡಿಕೇರಿ: ಅನಧಿಕೃತ ಹೋಂ ಸ್ಟೇಗಳಲ್ಲಿ ಆಗಾಗ್ಗೆ ವರದಿಯಾಗುವ ಕಾನೂನುಬಾಹಿರ ಚಟುವಟಿಕೆಗಳು ಈ ಉದ್ಯಮದ ಮೇಲೆ ಕಪ್ಪು ಚುಕ್ಕೆಯಂತೆ ಕಂಡುಬರುತ್ತಿರುವ ಹಿನ್ನೆಲೆಯಲ್ಲಿ ಹೋಂ ಸ್ಟೇಗಳ ಕಡ್ಡಾಯ ನೋಂದಣಿಗೆ ಜಿಲ್ಲಾಡಳಿತ ಸೂಚಿಸಿದ್ದರೂ ನಿರೀಕ್ಷಿತ ರೀತಿಯಲ್ಲಿ ಪ್ರತಿಕ್ರಿಯೆ ಸಿಗುತ್ತಿಲ್ಲ.

ಏ.೫ರಂದು ಮಡಿಕೇರಿಯ ಅನಧಿಕೃತ ಹೋಂಸ್ಟೇ ಒಂದರಲ್ಲಿ ತಂಗಿದ್ದ ತಾಯಿ ಮತ್ತು ಮಗಳಿಗೆ ಅಲ್ಲಿಯ ಕೇರ್ ಟೇಕರ್ ಮಧ್ಯರಾತ್ರಿಯಲ್ಲಿ ಕಿರುಕುಳ ನೀಡಿದ್ದ ವಿಷಯ ಸುದ್ದಿ ಆಗಿತ್ತು. ಈ ಘಟನೆ ಜಿಲ್ಲೆಯ ಹೋಂ ಸ್ಟೇಗಳಲ್ಲಿನ ಸುರಕ್ಷತೆಯನ್ನೇ ಪ್ರಶ್ನೆ ಮಾಡುವಂತೆ ಇದ್ದ ಕಾರಣ ಕೂಡಲೇ ಕಾರ್ಯಪ್ರವೃತ್ತವಾದ ಪೊಲೀಸ್ ಇಲಾಖೆ ಆರೋಪಿ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಂದು ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು ಎನ್ನುವ ಕಟ್ಟು ನಿಟ್ಟಿನ ಸೂಚನೆಯನ್ನು ಹೋಂ ಸ್ಟೇ ನಿರ್ವಾಹಕರಿಗೆ ರವಾನಿಸಿತ್ತು.

ಕಳೆದ ವರ್ಷ ಮಂಗಳೂರಿನಿಂದ ಪ್ರವಾಸಕ್ಕಾಗಿ ಮಡಿಕೇರಿ ಆಗಮಿಸಿದ್ದ ೧೪ ಮಂದಿ ಪ್ರವಾಸಿಗರು ಮಧ್ಯವರ್ತಿ ಮೂಲಕ ಸಮೀಪದ ಮಕ್ಕಂದೂರು ಬಳಿಯ ಹೋಂ ಸ್ಟೇ ಒಂದರಲ್ಲಿ ತಂಗಿದ್ದರು. ಈ ವೇಳೆ ಈ ಹೋಂ ಸ್ಟೇಯಲ್ಲಿ ಮಾದಕ ವಸ್ತುಗಳ ಮಾರಾಟ ಮತ್ತು ಬಳಕೆ ಮಾಡುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿದ ಕೂಡಲೇ ದಾಳಿ ನಡೆಸಿ ಅಕ್ರಮ ಚಟುವಟಿಕೆಯಲ್ಲಿ ತೊಡಗಿಕೊಂಡಿದ್ದ ೧೪ ಮಂದಿಯನ್ನು ಪೊಲೀಸರು ಬಂಧಿಸಿದ್ದಲ್ಲದೆ, ೪೧೪ ಗ್ರಾಂ ಗಾಂಜಾ ಮತ್ತು ೯ ಎಲ್‌ಎಸ್‌ಡಿ ನಿಷೇಧಿತ ಮಾದಕ ವಸ್ತುಗಳನ್ನೂ ವಶಪಡಿಸಿ ಕೊಂಡು ಮಧ್ಯವರ್ತಿ, ಹೋಂ ಸ್ಟೇ ಮಾಲೀಕನನ್ನು ಬಂಧಿಸಿದ್ದರು.

ಕೊಡಗಿನಲ್ಲಿ ಯಾವ ಊರಿಗೆ ಹೋದರೂ ಹೋಂ ಸ್ಟೇಗಳು ಸಾಮಾನ್ಯ ಎಂಬಂತಾಗಿದೆ. ಪ್ರವಾಸೋದ್ಯಮ ಇಲಾಖೆ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಸುಮಾರು ೩,೫೦೦ ಹೋಂ ಸ್ಟೇಗಳಿರಬಹುದು ಎಂದು ಅಂದಾಜಿಸಲಾಗಿದೆ. ಆದರೆ, ಈ ಸಂಖ್ಯೆ ಇನ್ನೂ ಹೆಚ್ಚು ಇರುವ ಸಾಧ್ಯತೆಗಳಿವೆ. ಪ್ರವಾಸೋದ್ಯಮ ಇಲಾಖೆಯಲ್ಲಿ ಈವರೆಗೂ ೨,೨೬೯ ಹೋಂ ಸ್ಟೇಗಳು ನೋಂದಣಿ ಮಾಡಿಕೊಂಡಿವೆ. ಪ್ರವಾಸಿಗರ ಸಂಖ್ಯೆ ಇಳಿಮುಖ ಆಗಿದ್ದ ಕಾರಣಕ್ಕೆ ಕೊರೊನಾ ಕಾಲದಲ್ಲಿ ಶೇ.೬೦ರಷ್ಟು ಹೋಂ ಸ್ಟೇಗಳು ಬಾಗಿಲು ಮುಚ್ಚಿದ್ದವು. ಇದೀಗ ಪ್ರವಾಸೋದ್ಯಮ ಚೇತರಿಸಿಕೊಂಡಿರು ವುದರಿಂದ ಹೋಂ ಸ್ಟೇಗಳು ಮತ್ತೆ ಎಲ್ಲೆಂದರಲ್ಲಿ ತಲೆ ಎತ್ತುತ್ತಿವೆ.

ಹೋಂ ಸ್ಟೇಗಳನ್ನು ಶಿಸ್ತುಬದ್ಧ ವ್ಯವಸ್ಥೆ ಅಡಿಯಲ್ಲಿ ಕಾರ್ಯಾಚರಿಸುವಂತೆ ಮಾಡಲು ಜಿಲ್ಲಾಡಳಿತ ಮೊದಲಿನಿಂದಲೂ ಸಾಕಷ್ಟು ಪ್ರಯತ್ನ ಮಾಡುತ್ತಿದೆ. ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಕೊಂಡ ನಂತರವಷ್ಟೇ ಪ್ರವಾಸಿಗರ ಆತಿಥ್ಯಕ್ಕೆ ಮುಂದಾಗಬೇಕು. ಇಲ್ಲದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹಲವು ಬಾರಿ ಎಚ್ಚರಿಕೆ ನೀಡಲಾಗಿದೆ. ಆದರೂ ಯಾವುದೇ ಪ್ರಯೋಜನ ಆಗಿಲ್ಲ. ನೋಂದಣಿ ವ್ಯವಸ್ಥೆ ಸರಳವಾಗಿದ್ದರೂ ಅನಽಕೃತ ಹೋಂ ಸ್ಟೇಗಳ ನೋಂದಣಿಗೆ ಹೆಚ್ಚು ಆಸಕ್ತಿ ಕಂಡು ಬರುತ್ತಿಲ್ಲ.

ಸಹಾಯವಾಣಿ ಮಾಹಿತಿ ಇಲ್ಲದೆ ಅನಧಿಕೃತ ವಾಗಿ ನಡೆಸುತ್ತಿರುವಂಥ ಹೋಂ ಸ್ಟೇಗಳ ಬಗ್ಗೆ ಪ್ರವಾಸೋದ್ಯಮ ಇಲಾಖೆಗೆ ಪತ್ರ ಮುಖೇನ ಅಥವಾ ಫೋನ್ ಮೂಲಕ ಮಾಹಿತಿ ನೀಡಬಹುದಾಗಿದೆ.

ಕಚೇರಿ ವಿಳಾಸ: ಉಪ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಸ್ಟುವರ್ಟ್ ಹಿಲ್ ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ೫೭೧೨೦೧ ದೂರವಾಣಿ ಸಂಖ್ಯೆ: ೦೮೨೭೨-೨೦೦೫೧೯ ಸಂಪರ್ಕಿಸಬಹುದು.

” ಮಡಿಕೇರಿಯ ಹೋಂ ಸ್ಟೇ ಒಂದರಲ್ಲಿ ಏ.೫ರಂದು ನಡೆದಿರುವ ಘಟನೆ ಖಂಡನೀಯ. ಈ ಘಟನೆ ಕೊಡಗಿನ ಹೋಂ ಸ್ಟೇಗೆ ಒಂದು ಕಪ್ಪು ಚುಕ್ಕಿ ತರುವಂತಾಗಿದೆ. ಈ ಹೋಂ ಸ್ಟೇ ಕೂರ್ಗ್ ಹೋಂ ಸ್ಟೇ ಅಸೋಸಿಯೇಷನ್ನ ಸದಸ್ಯತ್ವ ಪಡೆದಿರುವುದಿಲ್ಲ. ಕೆಲವು ದಿನಗಳ ಹಿಂದೆ ಹಂಪಿಯಲ್ಲಿ ಪ್ರವಾಸಿಗರ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಽಸಿದಂತೆ ಪ್ರವಾಸೋದ್ಯಮ ಇಲಾಖೆ ಹಾಗೂ ಪೊಲೀಸ್ ಇಲಾಖೆ ಮೂಲಕ ಕೊಡಗಿನ ಎಲ್ಲಾ ಹೋಂ ಸ್ಟೇ ಮಾಲೀಕರನ್ನು ಕರೆಸಿ ಇಂತಹ ಘಟನೆಗಳು ಮರುಕಳಿಸದಂತೆ ಹಾಗೂ ಹೋಂ ಸ್ಟೇಗಳಲ್ಲಿ ತಂಗುವಪ್ರವಾಸಿಗರಿಗೆ ಸೂಕ್ತ ಭದ್ರತೆ ನೀಡುವಂತೆ ಸಲಹೆ ಸೂಚನೆಗಳನ್ನು ನೀಡಲಾಗಿತ್ತು.”

ಮೊಂತಿ ಗಣೇಶ್, ಅಧ್ಯಕ್ಷೆ, ಕೂರ್ಗ್ ಹೋಂಸ್ಟೇ ಅಸೋಸಿಯೇಷನ್

” ಕೊಡಗು ಜಿಲ್ಲೆಯಲ್ಲಿ ಅಂದಾಜು ೩,೫೦೦ ಹೋಂ ಸ್ಟೇಗಳಿರಬಹುದು ಎಂದು ಅಂದಾಜಿಸಲಾಗಿದೆ. ಈ ಪೈಕಿ ಪ್ರವಾಸೋದ್ಯಮ ಇಲಾಖೆಯಲ್ಲಿ ಈವರೆಗೂ ೨,೨೬೯ ಹೋ ಂಸ್ಟೇಗಳು ನೋಂದಣಿ ಮಾಡಿಕೊಂಡಿವೆ. ತಿಂಗಳಿಗೆ ೩೦-೫೦ ಹೊಸ ಹೋಂ ಸ್ಟೇ ಮಾಲೀಕರು ನೋಂದಣಿಗಾಗಿ ಅರ್ಜಿ ಸಲ್ಲಿಸುತ್ತಿದ್ದಾರೆ. ಪ್ರವಾಸೋದ್ಯಮ ಇಲಾಖೆಯಡಿಯಲ್ಲಿ ನೋಂದಣಿಯಾಗದೆ ನಿಯಮ ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿರುವ ಹೋಂ ಸ್ಟೇಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ”

-ಅನಿತಾ ಭಾಸ್ಕರ್, ಉಪನಿರ್ದೇಶಕಿ, ಪ್ರವಾಸೋದ್ಯಮ ಇಲಾಖೆ, ಕೊಡಗು

ಆಂದೋಲನ ಡೆಸ್ಕ್

Recent Posts

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ತಾತ್ಕಾಲಿಕ ರಿಲೀಫ್!

ಬೆಂಗಳೂರು: ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ನೀಡಲಾಗಿದ್ದ ಜೀವಾವಧಿ ಶಿಕ್ಷೆಗೆ ತಡೆ…

18 hours ago

ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ಅಪಘಾತ: ಮೂವರು ಸಾವು!

ಮೈಸೂರು: ಜಿಲ್ಲೆಯ ಎಚ್.ಡಿ. ಕೋಟೆ ತಾಲೂಕಿನ ಕೋಹಳ ಬಳಿಯ ಮೈಸೂರು–ಮಾನಂದವಾಡಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೆಎಸ್ಆರ್‌ಟಿಸಿ ಬಸ್…

18 hours ago

174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ಗೆ ಇಸ್ರೇಲ್‌ನ ಶೌರ್ಯ ಪ್ರಶಸ್ತಿ!

ಜೆರುಸೇಲಂ: ಭೀಕರ ವಿಮಾನ ಅವಘಡವನ್ನು ತಪ್ಪಿಸಿ 174 ಪ್ರಯಾಣಿಕರ ಜೀವ ಉಳಿಸಿದ ಭಾರತೀಯ ಪೈಲಟ್‌ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರಿಗೆ…

19 hours ago

ರಾಜ್ಯ ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್‌ಗೆ ಸಂಚು?: ಶಾಸಕ ಗಣಿಗ ರವಿ ಗಂಭೀರ ಆರೋಪ!

ಮಂಡ್ಯ: ರಾಜ್ಯದ ಸಚಿವರಿಗೆ ಮುಜುಗರ ಉಂಟುಮಾಡಲು ಕೇಂದ್ರ ಸಚಿವರೊಬ್ಬರು ಹಾಗೂ ಕರ್ನಾಟಕದ ಬಿಜೆಪಿ ನಾಯಕರೊಬ್ಬರು ಸ್ಟಿಂಗ್ ಆಪರೇಷನ್‌ಗೆ ಸಂಚು ರೂಪಿಸಿದ್ದಾರೆ…

19 hours ago

ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ

ಸಿದ್ದಾಪುರ: ಸಿದ್ದಾಪುರ ಮೈಸೂರು ಮುಖ್ಯ ರಸ್ತೆಯ ಘಟ್ಟತಳ ಹೇರೂರು ಎಸ್ಟೇಟ್ ಬಳಿ ಗುರುವಾರ ರಾತ್ರಿ ಹುಲಿ ಕಾಣಿಸಿಕೊಂಡಿದ್ದು ಬಳಿಕ ಸಮೀಪದ…

19 hours ago

ಓದುಗರ ಪತ್ರ: ಬಂತು ಎಟಿಎಂನಲ್ಲಿ ‘ತೇಪೆ’ ಹಾಕಿದ ನೋಟು!

ಒಂದು ಕಾಲದಲ್ಲಿ (ಒಂದಾನೊಂದು ಕಾಲದಲ್ಲಿ ಎಂಬ ಮಾತಿನಂತೆ) ಎಟಿಎಂ ಯಂತ್ರಗಳಿಂದ ಹಣ ಡ್ರಾ ಮಾಡಿದಾಗ ಸಾಮಾನ್ಯವಾಗಿ ಹೊಸ ಗರಿಗರಿನೋಟುಗಳು ಬರುತ್ತಿದ್ದವು.…

21 hours ago