ಹುಣಸೂರು: ಚಿರತೆ ಮರಿ ದಾಳಿಯಿಂದ ಇಬ್ಬರು ಗಾಯಗೊಂಡಿರುವ ಘಟನೆ ತಾಲ್ಲೂಕಿನ ಹುಲ್ಯಾಳು ಗ್ರಾಮದಲ್ಲಿ ನಡೆದಿದೆ.
ತಾಲ್ಲೂಕಿನ ಗಾವಡಗೆರೆಹೋಬಳಿಯ ಹುಲ್ಯಾಳು ಗ್ರಾಮದ ಅಜಯ್ ಹಾಗೂ ಕೋಳಿ ಫಾರಂ ಮಾಲೀಕ ಕೆ.ಆರ್.ನಗರದ ನಿವಾಸಿ ರಾಜು ಗಾಯಗೊಂಡವರು.
ಅಜಯ್ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ರಾಜು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಭಾನುವಾರ ಸಂಜೆ ಗ್ರಾಮದೊಳಗೆ ನುಗ್ಗಿದ್ದ ಚಿರತೆ ಮರಿಯು ಅಜಯ್‌ರಿಗೆ ಸೇರಿದ ಹುಲ್ಲಿನ ಮೆದೆಯೊಳಗೆ ಅಡಗಿ ಕುಳಿತಿತ್ತು. ಪಕ್ಕದಲ್ಲೇ ನಡೆದು ಹೋಗುತ್ತಿದ್ದ ಅಜಯ್ ಮೇಲೆರಗಿ ಕೈಗೆ ಕಚ್ಚಿದೆ.
ಈ ವೇಳೆ ಅಜಯ್ ಜೋರಾಗಿ ಕೂಗಿಕೊಂಡಿದ್ದರಿಂದ ಸಮೀಪದಲ್ಲಿದ್ದ ಜನರು ನೆರವಿಗೆ ಧಾವಿಸಿದ್ದಾರೆ. ಈ ಸಂದರ್ಭದಲ್ಲಿ ಕೋಳಿ ಫಾರಂ ಮಾಲೀಕ ರಾಜು ಅವರ ಮೇಲೆರಗಿದ ಚಿರತೆ ಅವರನ್ನು ಕಚ್ಚಿ ಗಾಯಗೊಳಿಸಿ ಚಿರತೆಯು ಮತ್ತೆ ಮೆದೆಯೊಳಗೆ ಸೇರಿಕೊಂಡಿತ್ತು. ಹುಲ್ಲಿನ ಮೆದೆ ಸುತ್ತುವರಿದ ಗ್ರಾಮಸ್ಥರು ಬಲೆ ಹಾಕಿ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಸಾರ್ವಜನಿಕರು ನೀಡಿದ ಮಾಹಿತಿ ಮೇರೆಗೆ ಸಾಮಾಜಿಕ ಅರಣ್ಯ ವಿಭಾಗದ ಡಿಆರ್‌ಎಫ್‌ಒ ರಮಣಗೌಡ ಹಾಗೂ ಸಿಬ್ಬಂದಿ ಭೇಟಿ ನೀಡಿ ಸುಮಾರು ಒಂದು ವರ್ಷದ ಚಿರತೆ ಮರಿಯನ್ನು ವಶಕ್ಕೆ ಪಡೆದು ಪಶುವೈದ್ಯರಿಂದ ಚಿಕಿತ್ಸೆ ಕೊಡಿಸಿ, ಬಂಧ ಮುಕ್ತಗೊಳಿಸಿದ್ದಾರೆ.
ಗಾಯಾಳುಗಳಿಗೆ ಕೆ.ಆರ್.ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅರಣ್ಯ ಇಲಾಖೆ ವೆಚ್ಚ ಭರಿಸಲಿ : ಹುಲ್ಯಾಳು ಗ್ರಾಮದಲ್ಲಿ ಚಿರತೆ ದಾಳಿಯಿಂದ ಗಾಯಗೊಂಡಿ ರುವ ಗಾಯಾಳುಗಳಿಗೆ ಇಲಾಖೆ ವತಿಯಿಂದಲೇ ಉತ್ತಮ ಚಿಕಿತ್ಸೆ ಕೊಡಿಸುವ ಜೊತೆಗೆ ಸೂಕ್ತ ಪರಿಹಾರ ನೀಡಬೇಕೆಂದು ಸತ್ಯ ಫೌಂಡೇಶನ್ ಅಧ್ಯಕ್ಷ ಸತ್ಯಪ್ಪ ಒತ್ತಾಯಿಸಿದ್ದಾರೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…