ಲೀಲಾ ಶಿವಕುಮಾರ್, ಪರಿಸರವಾದಿ
ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ, ನದಿ, ತೊರೆ ಸೇರಿದಂತೆ ಎಡೆ ಕಸದ ಪ್ರಮಾಣ ಹೆಚ್ಚುತ್ತಿರುವುದು ಪರಿಸರಕ್ಕೆ ದೊಡ್ಡ ಸವಾಲಾಗಿದೆ. ಈ ಸಮಸ್ಯೆಗೆ ಸರ್ಕಾರವನ್ನು ಮಾತ್ರ ಹೊಣೆ ಮಾಡುವ ಬದಲು ಪ್ರತಿಯೊಬ್ಬ ನಾಗರಿಕರೂ ತಮ್ಮ ಜವಾಬ್ದಾರಿಯನ್ನು ಅರಿತುಕೊಳ್ಳಬೇಕಿದೆ.
ಕಸ ನಿರ್ವಹಣೆಯ ಮೊದಲ ಹೆಜ್ಜೆ ನಮ್ಮ ಮನೆಯಿಂದಲೇ ಆರಂಭವಾಗಬೇಕು. ಹಸಿ ಕಸ ಮತ್ತು ಒಣ ಕಸವನ್ನು ಮನೆಯಲ್ಲಿಯೇ ಪ್ರತ್ಯೇಕಿಸಿ ವಿಲೇವಾರಿ ಮಾಡುವ ಅಭ್ಯಾಸ ಬೆಳೆಸಿಕೊಳ್ಳಬೇಕು. ಎಂದರಲ್ಲಿ ಕಸ ಎಸೆಯು ವವರಿಗೆ ದಂಡ ವಿಧಿಸುವುದರ ಜೊತೆಗೆ, ಸ್ವಚ್ಛತೆಯ ಬಗ್ಗೆ ಜಗೃತಿ ಮೂಡಿಸುವ ಅಗತ್ಯವಿದೆ. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವುದು ಪರಿಸರ ಸಂರಕ್ಷಣೆಯ ಮತ್ತೊಂದು ಪ್ರಮುಖ ಹೆಜ್ಜೆ.
ಒಮ್ಮೆ ಬಳಸಿ ಬಿಸಾಡುವ ಪ್ಲಾಸ್ಟಿಕ್ ಬ್ಯಾಗ್‌ಗಳ ಬದಲಿಗೆ ಬಟ್ಟೆ ಚೀಲಗಳನ್ನು ಬಳಸಬಹುದು. ಹಳೆಯ ಸೀರೆಗಳಿಂದಲೇ ೧೫ರಿಂದ ೨೦ಕ್ಕೂ ಹೆಚ್ಚು ಬಟ್ಟೆ ಬ್ಯಾಗ್‌ಗಳನ್ನು ತಯಾರಿಸಬಹುದು. ಹೀಗಾಗಿ ಹಳೆಯ ಬಟ್ಟೆಗೆ ಮರುಬಳಕೆಯ ಅವಕಾಶ ಕಲ್ಪಿಸುವುದರ ಜೊತೆಗೆ ಪ್ಲಾಸ್ಟಿಕ್ ಬಳಕೆಯನ್ನೂ ಕಡಿಮೆ ಮಾಡಬಹುದು. ಭಾರವಾದ ಮೊಬೈಲ್ ಅನ್ನು ಸದಾ ನಮ್ಮೊಂದಿಗೆ ಇಟ್ಟುಕೊಳ್ಳುವ ನಾವು, ಒಂದು ಬಟ್ಟೆ ಚೀಲ ಇಟ್ಟುಕೊಳ್ಳಲು ಏಕೆ ಹಿಂಜರಿಯಬೇಕು? ಎಂಬ ಪ್ರಶ್ನೆಯನ್ನು ನಮ್ಮ ಕೇಳಿಕೊಳ್ಳಬೇಕಿದೆ. ಪರಿಸರ ಸಂರಕ್ಷಣೆ ಮಾಡಬೇಕು ಎಂದರೆ ಮೊದಲ ಹೆಜ್ಜೆ ನಮ್ಮ ಜೀವನಶೈಲಿಯ ಬದಲಾವಣೆಯಾಗಬೇಕು.
ಸಮಾರಂಭಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲಿಗಳ ಬದಲಿಗೆ ಸ್ಟೀಲ್ ಲೋಟ ಅಥವಾ ಮರುಬಳಕೆ ಮಾಡಬಹುದಾದ ಪಾತ್ರೆಗಳನ್ನು ಬಳಸುವ ಅಭ್ಯಾಸ ಬೆಳೆಸಬೇಕು. ಆನ್‌ಲೈನ್ ಶಾಪಿಂಗ್ ಹಾಗೂ ಆಹಾರ ವಿತರಣಾ ಸೇವೆಗಳಿಂದಲೂ ಪ್ಲಾಸ್ಟಿಕ್ ಪ್ಯಾಕೇಜಿಂಗ್ ಹೆಚ್ಚಾಗುತ್ತಿದೆ. ಇದರ ಪರಿಣಾಮ ಗ್ರಾಮೀಣ ಭಾಗಗಳಲ್ಲಿಯೂ ಪ್ಲಾಸ್ಟಿಕ್ ತ್ಯಾಜ್ಯ ಹೆಚ್ಚಾಗಿ, ನದಿ-ತೊರೆಗಳು ಮಲಿನಗೊಳ್ಳುತ್ತಿವೆ.
ನಮ್ಮ ನೀರು, ಮಣ್ಣು ಮತ್ತು ಗಾಳಿ ಸ್ವಚ್ಛವಾಗಿದ್ದರೆ ಮಾತ್ರ ನಮ್ಮ ಬದುಕು ಆರೋಗ್ಯಕರವಾಗಿರುತ್ತದೆ. ಆದ್ದರಿಂದ ಸರ್ಕಾರವನ್ನು ದೂರುವುದಕ್ಕಿಂತ ಮೊದಲು ನಾವು ನಮ್ಮನ್ನು ಸರಿಪಡಿಸಿಕೊಳ್ಳಬೇಕು. ಸರಳ ಹಾಗೂ ಪ್ಲಾಸ್ಟಿಕ್ ಮುಕ್ತ ಜೀವನಶೈಲಿಯನ್ನು ಅಳವಡಿಸಿಕೊಂಡಾಗ ಮಾತ್ರ ಪರಿಸರ ಸ್ನೇಹಿ ಸಮಾಜ ನಿರ್ಮಾಣ ಸಾಧ್ಯ.
” ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ ಎಂಬ ಸಂದೇಶ ಜೀವನದಲ್ಲೂ ಪಾಲಿಸುತ್ತಾ ಪರಿಸರ ಕಾಳಜಿ ತೋರುತ್ತಿರುವ ಪರಿಸರವಾದಿ ಲೀಲಾ ಶಿವಕುಮಾರ್ ಅವರು, ಬದಲಾವಣೆ ಸರ್ಕಾರದಿಂದ ಮಾತ್ರವಲ್ಲ, ಪ್ರತಿಯೊಬ್ಬರ ಮನೆಯಿಂದ ಆರಂಭವಾಗಬೇಕು ಎಂಬ ಸಂದೇಶವನ್ನು ಸಾರುತ್ತಿದ್ದಾರೆ.”
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…
ನಾ.ದಿವಾಕರ ಆದರ್ಶ ಮಾದರಿಗಳೇ ಕಾಣದ ದೇಶದಲ್ಲಿ ಯುವ ಜನಾಂಗಕ್ಕೆ ದಾರಿ ದೀವಿಗೆ ಯಾವುದು? ಇತ್ತೀಚಿನ ಜೆನ್ ಝಿ ಚಳುವಳಿಗಳು ಜಂತರ್…