ವಿಧಾನಸಭೆ ಅಧಿವೇಶನದಲ್ಲಿ ಸಹಕಾರ ಕ್ಷೇತ್ರ ತಿದ್ದುಪಡಿ ಮಸೂದೆ ಮಂಡನೆಯಾದ ಸಂದರ್ಭದಲ್ಲಿ ನಡೆದ ಚರ್ಚೆಯಲ್ಲಿ ಪಾಲ್ಗೊಂಡಿದ್ದ ಶಾಸಕ ಜಿ.ಟಿ. ದೇವೇಗೌಡರು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರನ್ನು ಸಹಕಾರ ಸಂಘಗಳಿಗೆ ನಾಮನಿರ್ದೇಶನ ಮಾಡುವುದನ್ನು ವಿರೋಧಿಸಿರುವುದು ಬೇಸರ ಉಂಟು ಮಾಡಿದೆ.
ಎಲ್ಲಾ ಸಮುದಾಯದವರ ಮತಗಳನ್ನು ಪಡೆದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕರಾಗಿರುವ ಜಿ.ಟಿ.ದೇವೇಗೌಡರು ಜಾತಿ ತಾರತಮ್ಯ ತೋರಿಸಿರುವುದು ಅವರ ಮನಸ್ಥಿತಿಗೆ ಸಾಕ್ಷಿಯಾಗಿದೆ. ಸಹಕಾರ ಕ್ಷೇತ್ರಕ್ಕೆ ಎಸ್ಸಿ, ಎಸ್ಟಿ ಸಮುದಾಯದವರ ನಾಮನಿರ್ದೇಶನ ಕುರಿತಂತೆ ವಿಧಾನಸಭಾ ಅಧಿವೇಶನದಲ್ಲಿ ವಿರೋಧ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಅವರು ಶಾಸಕ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು.
– ನಾಗೇಶ್, ಮಾನಸಗಂಗೋತ್ರಿ, ಮೈಸೂರು





