ಓದುಗರ ಪತ್ರ
ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಗೌರಿ – ಗಣೇಶ ಹಬ್ಬದ ರಜೆಯನ್ನು ಮುಂದಿಟ್ಟುಕೊಂಡು, ಮುಷ್ಕರ ನಡೆಸಿದ್ದಾರೆ. ಅಂದರೆ ಕಳೆದ ನಾಲ್ಕು ದಿನಗಳಿಂದ(೨ನೇ ಶನಿವಾರ ಮತ್ತು ಭಾನುವಾರ) ಬ್ಯಾಂಕ್‌ಗಳು ಗ್ರಾಹಕರ ಸೇವೆಯಿಂದ ದೂರ ಉಳಿಯುವಂತಾಯಿತು. ಸಾಮಾನ್ಯವಾಗಿ ಹಬ್ಬದ ಹಿಂದಿನ ದಿನಗಳಲ್ಲಿ ಗ್ರಾಹಕರು ಬ್ಯಾಂಕ್ ಹೋಗಿ ಹಣ ಡ್ರಾ ಮಾಡುವುದು ಸಹಜ. ಆದರೆ ಗೌರಿ-ಗಣೇಶ ಹಬ್ಬದ ಹಿಂದಿನ ಮೂರು ದಿನಗಳ ಕಾಲಗಳ ಬ್ಯಾಂಕ್‌ಗಳು ಕಾರ್ಯನಿರ್ವಹಿಸದ ಕಾರಣ ಸಾರ್ವಜನಿಕರಿಗೆ ತೊಂದರೆಯಾಗಿದೆ.
ಈ ರೀತಿಯ ಮುಷ್ಕರಕ್ಕೆ ಕರೆ ಕೊಟ್ಟ ಯುನಿಯನ್‌ಗಳ ವಿರುದ್ಧ ಆರ್‌ಬಿಐ ಕ್ರಮ ಕೈಗೊಳ್ಳಬೇಕು. ಈ ರೀತಿ ಬ್ಯಾಂಕ್‌ಗಳು ಮುಂದಿನ ದಿನಗಳಲ್ಲಿ ನಡೆದುಕೊಂಡರೆ ಗ್ರಾಹಕರ ವಿಶ್ವಾಸವನ್ನು ಉಳಿಸಿಕೊಳ್ಳಲು ಆಗುತ್ತದಯೇ?
-ಬೂಕನಕೆರೆ ವಿಜೇಂದ್ರ, ಮೈಸೂರು
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ ಯಾವುದೇ ನಾಗರಿಕನು ತನ್ನ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…
ಕೆ.ಬಿ.ರಮೇಶನಾಯಕ ರಾಜ್ಯ ಸರ್ಕಾರದ ಗಡುವಿನೊಳಗೆ ಪ್ರಕ್ರಿಯೆ ಮುಗಿಸಲು ಇಲಾಖೆ ಕಸರತ್ತು. ಮೈಸೂರು: ನಕಲಿ ಫಲಾನುಭವಿಗಳನ್ನು ಕೈಬಿಟ್ಟು ಪಾರದರ್ಶಕತೆ ಕಾಯ್ದುಕೊಳ್ಳಲು ಹಾಗೂ…