Andolana originals

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ ಕಾರ್ಯಕ್ರಮ ನಡೆಯುತ್ತಿದೆ.

ಮಾನಸಗಂಗೋತ್ರಿಯಲ್ಲಿರುವ ಡಾ.ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಪ್ರತಿಮೆಗೆ ಅಡ್ಡಲಾಗಿ ಎರಡು ಶಾಮಿಯಾನದ ಮಳಿಗೆಗಳನ್ನು ಅಳವಡಿಸಿರುವುದು ಏಕೆ ಎಂಬ ಪ್ರಶ್ನೆ ಉದ್ಭವವಾಗಿದೆ. ಮತ್ತು ಇಂತಹ ಪ್ರಮುಖ ಕಾರ್ಯಕ್ರಮ ನಡೆಯುತ್ತಿದ್ದರೂ ಅಂಬೇಡ್ಕರ್ ಪ್ರತಿಮೆಗೆ ವಿದ್ಯುತ್ ದೀಪಾಲಂಕಾರ ಮಾಡದೆ ಇರುವುದು ಮೈಸೂರು ವಿವಿ ಆಡಳಿತಕ್ಕೆ ಶೋಭೆ ತರುವಂತಹದಲ್ಲ.

ಕೂಡಲೇ ಮೈಸೂರು ವಿವಿ ಮಾನಸಗಂಗೋತ್ರಿ ಆವರಣದಲ್ಲಿ ಇಂತಹ ಕಾರ್ಯಕ್ರಮಗಳು ನಡೆಯುವಾಗ ಗಣ್ಯರ ಪ್ರತಿಮೆಗಳಿಗೆ ವಿದ್ಯುತ್ ದೀಪಾಲಂಕಾರ ಮಾಡುವುದು ಅಪೇಕ್ಷಣೀಯ. ಜೊತೆಗೆ ಗಣ್ಯರ ಸ್ಮಾರಕಗಳ ಮುಂದೆ ಹಾಕಿರುವ ಶಾಮಿಯಾನ ಮಳಿಗೆಗಳನ್ನು ತೆರವುಗೊಳಿಸಿದರೆ ಉತ್ತಮ.

– ನಾಗೇಶ್, ಮಾನಸಗಂಗೋತ್ರಿ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

1 hour ago

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…

1 hour ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

1 hour ago

ಪೋಕ್ಸೋ ಪ್ರಕರಣ: ಬೇಕು ಮಕ್ಕಳ ಸ್ನೇಹಿ ವಾತಾವರಣ

ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…

1 hour ago

ಮೋದಿ ಮುಂದೆ ಮೌನ ಮುರಿದ ಚಿರಾಗ್ ಚೀರಾಟ!

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…

1 hour ago

ಎರಡು ಗಂಟೆ ಹೆಣ್ಣಾದಾಗಲೇ ಹೀಗೆ! ಪೂರ್ತಿ ಹೆಣ್ಣು ಜನ್ಮದ ಸಂಕಷ್ಟ ಹೇಗಿರಬಹುದು?

ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…

5 hours ago