Andolana originals

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ ಮೈದಾಹಿಟ್ಟು ಅಡುಗೆ ಎಣ್ಣೆ, ಬೆಣ್ಣೆ, ತುಪ್ಪ, ಕೊಬ್ಬಿನ ಮಾಂಸಾಹಾರ ಪದಾರ್ಥಗಳ ಬಳಕೆ ಬಗ್ಗೆ ಜಾಗೃತಿ, ನಿಯಂತ್ರಣ ವಿಧಿಸುವ ಅವಶ್ಯಕತೆ ಇದೆ.

ಗ್ರಾಹಕರು ಹೋಟೆಲ್‌ಗಳಲ್ಲಿ ತುಪ್ಪದ ದೋಸೆ, ಬೆಣ್ಣೆ ದೋಸೆಗಳನ್ನು ಇಷ್ಟಪಟ್ಟು ತಿನ್ನುತ್ತಾರೆ. ಅಪರೂಪಕ್ಕೆ ತಿಂದರೆ ತೊಂದರೆ ಇಲ್ಲ. ಆದರೆ ಅದನ್ನು ಹೆಚ್ಚು ತಿನ್ನುವುದು ಹೃದಯ ಕಾಯಿಲೆಗಳಿಗೆ ಆಹ್ವಾನವಿತ್ತಂತೆ ಆಗುತ್ತದೆ. ಒಂದು ಮಸಾಲೆ ದೋಸೆಗೆ ಕನಿಷ್ಠ ೩೦-೪೦ ಎಂ ಎಲ್ ಎಣ್ಣೆ ಹಾಕುತ್ತಾರೆ. ಇದು ಸಹನೀಯವಲ್ಲ. ಕೇವಲ ಉಪ್ಪು ಕಡಿಮೆ ತಿನ್ನಿ, ಸಕ್ಕರೆ ಕಡಿಮೆ ಬಳಸಿ ಎಂದು ಪೊಟ್ಟಣಗಳ ಮೇಲೆ ಮುದ್ರಿಸುವುದರಿಂದ ಹೆಚ್ಚು ಪರಿಣಾಮ ಬೀರುವುದಿಲ್ಲ.

ಧೂಮಪಾನ/ಮದ್ಯಪಾನ ಆರೋಗ್ಯಕ್ಕೆ ಹಾನಿಕರ ಎನ್ನುವ ಜಾಹೀರಾತುಗಳಿಂದ ಯಾವ ಪ್ರಯೋಜನವೂ ಇಲ್ಲ.ಇದನ್ನೇ ಬಂಡವಾಳ ಮಾಡಿಕೊಂಡ ಸರ್ಕಾರಗಳು ಅದರ ಮೇಲೆ ಶೇ. ೨೦೦ ರಷ್ಟು ತೆರಿಗೆ ವಿಧಿಸಿದ್ದರೂ ಅವುಗಳ ಬಳಕೆ ಏರಿತ್ತಲೇ ಇದೆ ಎನ್ನುವುದು ಚೋದ್ಯದ ಸಂಗತಿ.

-ಮುಳ್ಳೂರು ಪ್ರಕಾಶ್, ಮೈಸೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

2 mins ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

7 mins ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

11 mins ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

19 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

24 mins ago

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

14 hours ago