ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ ನೀರಿನ ಲಭ್ಯತೆ, ರೈತರ ಸಮಸ್ಯೆ ಹಾಗೂ ಕುಡಿಯುವ ನೀರಿನ ಅವಶ್ಯಕತೆ ಬಗ್ಗೆಯೂ ಯೋಚಿಸಬೇಕಾಗುತ್ತದೆ. ವಾಸ್ತವಿಕತೆಯನ್ನು ಅರ್ಥಮಾಡಿಕೊಳ್ಳ ಬಾರದೇ? ಈ ಆದೇಶ ಎಷ್ಟರ ಮಟ್ಟಿಗೆ ಸರಿ? ರಾಜ್ಯದಲ್ಲಿ ಕಂಡುಬರುತ್ತಿರುವ ಬರದ ಸಂದರ್ಭದಲ್ಲೇ ನೀರಿನ ಬಗ್ಗೆ ಎಂತಹ ಗಂಭೀರ ಪರಿಸ್ಥಿತಿ ಇದೆ. ಈ ಮಾಹಿತಿಯನ್ನು ರಾಜ್ಯ ಸರ್ಕಾರ ಈಗಾಗಲೇ ಸ್ಪಷ್ಟಪಡಿಸಿದೆ.
ಸಿಡಬ್ಲ್ಯುಆರ್‌ಸಿ ಎರಡೂ ರಾಜ್ಯಗಳ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳಬೇಕು. ಜೊತೆಗೆ ವಾಸ್ತವದ ಬಗ್ಗೆಯೂ ಅರಿವಿರಬೇಕು. ಸಿಡಬ್ಲ್ಯುಆರ್‌ಸಿಯ ತೀರ್ಮಾನ ಯಾವಾಗಲೂ ತಮಿಳುನಾಡು ಪರವಾಗಿಯೇ ಇರುತ್ತದೆ. ಈ ರೀತಿ ಆಗಬಾರದು.ಪ್ರತಿ ಸಲವೂ ಏಕಪಕ್ಷೀಯ ನಿರ್ಧಾರ ಆಗುತ್ತಿದ್ದರೆ ಅದರ ತೀರ್ಮಾನವನ್ನು ಪಕ್ಷೀಯ ತೀರ್ಮಾನವೆಂದು ಪರಿಗಣಿಸಬೇಕಾಗುತ್ತದೆ.
ನೀರಿನ ಲಭ್ಯತೆ ನೋಡಿಕೊಂಡು ಅಧ್ಯಯನ ಮಾಡಿ ನಿಷ್ಪಕ್ಷಪಾತವಾಗಿ ಸಿಡಬ್ಲ್ಯುಆರ್‌ಸಿ ಆದೇಶ ಮಾಡಬೇಕು.
-ಎ.ಎಸ್. ಗೋಪಾಲಕೃಷ್ಣ, ಮೈಸೂರು
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…