Andolana originals

ಓದುಗರ ಪತ್ರ: ಮೈಕ್ರೋ ಜೆರಾಕ್ಸ್ ಹಾವಳಿಗೆ ಕಡಿವಾಣ ಹಾಕಿ

ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ ಮೈಕ್ರೋ ಜೆರಾಕ್ಸ್ ಮಾಡಿಸುವ ವಿದ್ಯಾರ್ಥಿಗಳ ಸಂಖ್ಯೆಯೇ ಹೆಚ್ಚಾಗಿರುತ್ತದೆ.

ಬಹು ನಿರೀಕ್ಷಿತ ಪ್ರಶ್ನೆಗಳಿಗೆ ತಕ್ಕ ಉತ್ತರವನ್ನು ಮೈಕ್ರೋ ಜೆರಾಕ್ಸ್ ಮಾಡಿಸಿ ಚಿಕ್ಕ ಮಡಿಕೆಯನ್ನು ಮಾಡಿಕೊಂಡು ಪರೀಕ್ಷೆಗಳಲ್ಲಿ ನಕಲು ಮಾಡಲು ಬಳಸಲಾಗುತ್ತಿದೆ. ಪರೀಕ್ಷಾ ಸಮಯದಲ್ಲಿ ಮೋಸದಿಂದ ನಕಲು ಮಾಡಿ ಅಂಕ ಗಳಿಸುವ ವಿದ್ಯಾರ್ಥಿಗಳಿಂದಾಗಿ ವರ್ಷವಿಡೀ ಪ್ರಾಮಾಣಿಕವಾಗಿ ಓದಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ.

ಪರೀಕ್ಷಾ ಸಮಯದಲ್ಲಿ ಪರೀಕ್ಷೆ ನಡೆಯುವ ನಿರ್ದಿಷ್ಟ ವ್ಯಾಪ್ತಿಯಲ್ಲಿ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವುದು ನಿಯಮ. ಆದರೆ ಮೈಕ್ರೋ ಜೆರಾಕ್ಸ್ ಹೆಸರಿನಲ್ಲಿ ವಿದ್ಯಾರ್ಥಿಗಳನ್ನು ಹಾದಿ ತಪ್ಪಿಸುತ್ತಿರುವವರ ವಿರುದ್ಧವೂ ಪೊಲೀಸರು ಹಾಗೂ ಜಿಲ್ಲಾ ಆಡಳಿತದಿಂದ ಕ್ರಮ ಕೈಗೊಳ್ಳುವುದು ಅಗತ್ಯವಾಗಿದೆ.

 -ಸಂಕರ್ಷಣ, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಜಗವೆ ಕೊಂಡಾಡುವ ಹಾಗೆ’

‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…

6 mins ago

ಓದುಗರ ಪತ್ರ: ಅಂಬೇಡ್ಕರ್ ಪ್ರತಿಮೆಗೆ ದೀಪಾಲಂಕಾರ ವ್ಯವಸ್ಥೆಯಾಗಲಿ

ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ  ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…

10 mins ago

ಓದುಗರ ಪತ್ರ: ಮಿತಿ ಹೆಚ್ಚಳ ಕಾರ್ಮಿಕ ಸ್ನೇಹಿ ನಿರ್ಧಾರ

ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…

12 mins ago

ಪೋಕ್ಸೋ ಪ್ರಕರಣ: ಬೇಕು ಮಕ್ಕಳ ಸ್ನೇಹಿ ವಾತಾವರಣ

ಒಡನಾಡಿ ಸ್ಟ್ಯಾನ್ಲಿ ಮಕ್ಕಳ ಮಾತನ್ನು ಆಲಿಸುವುದು ಕಾನೂನುಬದ್ಧ ಮೌಲ್ಯವೂ ಆಗಿದೆ ಮಕ್ಕಳನ್ನು ಒಳಗೊಂಡ ಬಹುತೇಕ ಪ್ರಕರಣಗಳಲ್ಲಿ ಆಕ್ರೋಶಗೊಂಡು, ತಾಳ್ಮೆಗೆಟ್ಟ ಪೋಷಕರು…

14 mins ago

ಮೋದಿ ಮುಂದೆ ಮೌನ ಮುರಿದ ಚಿರಾಗ್ ಚೀರಾಟ!

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಬಿಜೆಪಿಯವರನ್ನೂ ನಾಚಿಸುವಂತೆ ಕಟ್ಟಾ ಧಾರ್ಮಿಕ ಭಕ್ತನಂತೆ ಕಾಣುವ ವ್ಯಕ್ತಿತ್ವ ಪ್ರಧಾನಿ…

28 mins ago

ಎರಡು ಗಂಟೆ ಹೆಣ್ಣಾದಾಗಲೇ ಹೀಗೆ! ಪೂರ್ತಿ ಹೆಣ್ಣು ಜನ್ಮದ ಸಂಕಷ್ಟ ಹೇಗಿರಬಹುದು?

ಪಾತು ದೆಹಲಿ ನಗರ, ಹಗಲಿನ ಬೆಳಕು ನಿಧಾನಕ್ಕೆ ಕರಗಿ ಕತ್ತಲು ಇಷ್ಟಿಷ್ಟಾಗಿ ನಗರವನ್ನು ಆವರಿಸಿಕೊಳ್ಳುತ್ತಿತ್ತು, ರಸ್ತೆಗಳು ನಿರ್ಜನವಾಗುತ್ತಿದ್ದವು. ಇದೇ ಹೊತ್ತಲ್ಲಿ,…

4 hours ago