Andolana originals

ಓದುಗರ ಪತ್ರ: ಬರ ಅಧ್ಯಯನ: ನೈಜ ಮೌಲ್ಯಮಾಪನ ನಡೆಯಲಿ

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ ಬೆಳೆಗಳು ಒಣಗಿ ಹೋಗಿವೆ. ಕೆರೆ-ಕಟ್ಟೆಗಳು ಬರಿದಾಗಿವೆ. ಅಂತರ್ಜಲ ಮಟ್ಟ ತೀವ್ರವಾಗಿ ಕುಸಿದಿದೆ. ಜಾನುವಾರುಗಳಿಗೆ ಮೇವು-ನೀರಿಗೂ ತತ್ವಾರ ಉಂಟಾಗಿದೆ. ಸಾಲ ಮಾಡಿ ಬಿತ್ತನೆ ಮಾಡಿದ ರೈತರು ಬೆಳೆ ನಷ್ಟದಿಂದ ಕಂಗಾಲಾಗಿದ್ದಾರೆ. ಇಂತಹ ಸಂದರ್ಭದಲ್ಲಿ ನಮ್ಮ ರಾಜ್ಯದ ಬರ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರ ತಂಡದ ಅಧಿಕಾರಿಗಳು ಕೇವಲ ಕಚೇರಿಯ ಅಂಕಿ-ಅಂಶಗಳಿಗೆ ಸೀಮಿತವಾಗಬಾರದು. ಪ್ರತಿಯೊಂದು ತಾಲ್ಲೂಕಿನ ಗ್ರಾಮೀಣ ಭಾಗಕ್ಕೂ ಭೇಟಿ ನೀಡಿ ಒಣಗಿದ ಹೊಲ-ಗದ್ದೆಗಳನ್ನು ಪ್ರತ್ಯಕ್ಷವಾಗಿ ವೀಕ್ಷಿಸಿ, ಕಷ್ಟದಲ್ಲಿರುವ ರೈತರೊಂದಿಗೆ ನೇರವಾಗಿ ಸಂವಾದ ನಡೆಸಬೇಕು. ನೈಜ ನಷ್ಟದ ನಿಖರವಾದ ವರದಿಯನ್ನು ಸಿದ್ಧಪಡಿಸುವುದು ಅಧಿಕಾರಿಗಳ ಕರ್ತವ್ಯವಾಗಿದೆ.

ರೈತರ ಬೆಳೆ ನಷ್ಟ ಪರಿಹಾರ, ಉದ್ಯೋಗ ಖಾತ್ರಿ ಕೆಲಸದ ದಿನಗಳ ಹೆಚ್ಚಳ, ಕುಡಿಯುವ ನೀರು ಮತ್ತು ಮೇವಿನ ವ್ಯವಸ್ಥೆಗೆ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರಕ್ಕೆ ಸಲ್ಲಿಸುವ ವರದಿಯು ವಾಸ್ತವಕ್ಕೆ ಹತ್ತಿರವಾಗಿದ್ದಾಗ ಮಾತ್ರ ರಾಜ್ಯಕ್ಕೆ ನ್ಯಾಯಯುತ ಹಾಗೂ ಸೂಕ್ತ ಪ್ರಮಾಣದ ಬರ ಪರಿಹಾರ ಅನುದಾನ ಬಿಡುಗಡೆಯಾಗಲು ಸಾಧ್ಯ. ಯಾವುದೇ ರಾಜಕೀಯ ಲೆಕ್ಕಾಚಾರಗಳಿಗಿಂತ ಮಿಗಿಲಾಗಿ, ಅನ್ನದಾತನ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಅಧಿಕಾರಿಗಳು ಕೇಂದ್ರಕ್ಕೆ ಸೂಕ್ತ ಶಿಫಾರಸು ಮಾಡಬೇಕು. ಕೇಂದ್ರ-ರಾಜ್ಯ ಸರ್ಕಾರಗಳು ರಾಜಕೀಯ ಭೇದ ಮರೆತು ಸಂಕಷ್ಟದಲ್ಲಿರುವ ಅನ್ನದಾತನ ಕೈಹಿಡಿಯುವುದು ಇಂದಿನ ತುರ್ತು ಅಗತ್ಯ.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಪಿಎಚ್‌ಸಿಗಳಲ್ಲಿ ಬಿಪಿ, ಶುಗರ್ ಮಾತ್ರೆಗಳು ಸಿಗುವಂತೆ ಕ್ರಮ ಕೈಗೊಳ್ಳಿ

ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…

49 mins ago

ಓದುಗರ ಪತ್ರ: ಗ್ರಾಹಕರಿಗೆ ಹೊರೆಯಾಗದಂತೆ ಹಾಲಿನ ದರ ಏರಿಸಿ

ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…

53 mins ago

ಓದುಗರ ಪತ್ರ: ಅಂತರ್ಜಲ ಮರುಪೂರಣಕ್ಕೆ ನೈಜ ಯೋಜನೆ ಅಗತ್ಯ

ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…

56 mins ago

ದಸರಾ ಸಂಭ್ರಮಕ್ಕೆ ಸುಗಮ ಸಂಚಾರದ ಸಾಥ್

ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…

57 mins ago

ಮಳೆಯ ಕೊರತೆ ನಡುವೆಯೂ ಶೇ.75 ಬಿತ್ತನೆ ಸಾಧನೆ

ಕೆ.ಬಿ.ಶಂಶುದ್ದೀನ್ ಕುಶಾಲನಗರ ತಾಲ್ಲೂಕಿನಲ್ಲಿ ಭತ್ತ, ಮುಸುಕಿನ ಜೋಳ ಬೆಳೆಗೆ ರೈತರ ಒತ್ತು  ಕುಶಾಲನಗರ: ಮುಂಗಾರು ಮಳೆಯ ಪ್ರಮಾಣದಲ್ಲಿ ಕೊರತೆ ಕಂಡುಬಂದಿರುವುದರ…

1 hour ago

ಮಳೆ ಕೊರತೆ; ಕೈಕೊಡುತ್ತಿರುವ ದ್ವಿದಳ ಧಾನ್ಯ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ನಾಲೆಗಳಿಗೆ ನೀರು ಹರಿಸದ ಕಾರಣ ಒಣಗುತ್ತಿರುವ ದ್ವಿದಳ ಧಾನ್ಯ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ವಾಡಿಕೆಗಿಂತ ಮಳೆ ಕಡಿಮೆಯಾಗಿ…

1 hour ago