ಹೃದಯದ ಬೇನೆ ವಯಸ್ಸಿನ ಅಂತರವಿಲ್ಲದೆ ಎಲ್ಲರನ್ನೂ ಕಾಡುತ್ತಿರುವುದು ಆತಂಕಕಾರಿ ಸಂಗತಿಯಾಗಿದೆ. ಶಾಲಾ ಕಾಲೇಜು ಮಕ್ಕಳೂ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವುದು ಕಳವಳಕಾರಿಯಾಗಿದೆ. ಶಾಲಾ ಕಾಲೇಜುಗಳಲ್ಲಿ ಮಕ್ಕಳ ಹೃದಯ ತಪಾಸಣೆ ಶಿಬಿರ ನಡೆಯಬೇಕು. ಅನಿರೀಕ್ಷಿತವಾಗಿ ಹೃದಯಾಘಾತವಾದಾಗ ಪ್ರಥಮ ಚಿಕಿತ್ಸೆಯನ್ನು ನೀಡುವ ಕುರಿತು ಎಲ್ಲರಿಗೂ ಜಾಗೃತಿ ಮೂಡಿಸಬೇಕು. ಎಲ್ಲೆಲ್ಲಿ ಹೃದ್ರೋಗ ತಜ್ಞರು ಲಭ್ಯರಿದ್ದಾರೆ ಎಂಬುದರ ಕುರಿತು ತಿಳಿಸಬೇಕು. ಪ್ರತಿಯೊಬ್ಬರಿಗೂ ಈ ವಿಷಯದ ಬಗ್ಗೆ ತಿಳಿವಳಿಕೆ ಇದ್ದರೆ ಹೃದಯಾಘಾತದಿಂದಾಗುವ ಸಾವನ್ನು ತಡೆಗಟ್ಟಬಹುದು.
–ಎಂ.ಎಸ್.ಉಷಾ ಪ್ರಕಾಶ್, ಎಸ್.ಬಿ.ಎಂ.ಕಾಲೋನಿ , ಮೈಸೂರು



