ಇತ್ತೀಚಿನ ದಿನಗಳಲ್ಲಿ ಕೆಲವು ಸರ್ಕಾರಿ ಅಧಿಕಾರಿಗಳು ಮತ್ತು ಸಿಬ್ಬಂದಿ ಸಾರ್ವಜನಿಕ ಸೇವೆಗಳಿಗೆ ಜನಸಾಮಾನ್ಯರ ಬಳಿ ಲಂಚ ಪಡೆಯುವುದು ಸರ್ವೇ ಸಾಮಾನ್ಯ ಎನ್ನುವಂತಾಗಿದೆ.
ಗ್ರಾಮಪಂಚಾಯಿತಿ ವ್ಯಾಪ್ತಿಯಲ್ಲಿ ಸೇವೆ ಪಡೆಯಲೂ ಲಂಚ ನೀಡಬೇಕಾಗಿರುವುದು ರಾಜ್ಯದ ಸರ್ಕಾರದ ಘನತೆಗೆ ಮಾರಕವಾಗಿದೆ. ಆದ್ದರಿಂದ ರಾಜ್ಯ ಸರ್ಕಾರ ಸಚಿವ ಸಂಪುಟ ಸಭೆಯಲ್ಲಿ ಭ್ರಷ್ಟಾಚಾರ ನಿರ್ಮೂಲನೆ ಮಾಡಲು ಕಠಿಣ ವಿಶೇಷ ಕಾನೂನು ಕ್ರಮಗಳನ್ನು ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಬೇಕು.
ರಾಜ್ಯದಲ್ಲಿರುವ ಎಲ್ಲಾ ಗ್ರಾಮ ಪಂಚಾಯಿತಿಗಳು, ನಾಡ ಕಚೇರಿಗಳು ಹಾಗೂ ಇತರ ಸರ್ಕಾರಿ ಕಚೇರಿಗಳಿಗೆ ಲೋಕಾಯುಕ್ತರು ಭೇಟಿ ನೀಡಿ, ಸರ್ಕಾರದಿಂದ ವಿವಿಧ ಇಲಾಖೆಗಳಿಗೆ ಬಿಡುಗಡೆಯಾಗಿರುವ ಹಣವು ಸರಿಯಾಗಿ ಬಳಕೆಯಾಗಿದೆಯೇ ಎಂದು ಪರಿಶೀಲಿಸಿ, ತಪ್ಪು ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಂಡು ಸಾರ್ವಜನಿಕರಿಗೆ ಅನುಕೂಲ ಮಾಡಿಕೊಡಲು ಮುಂದಾಗಬೇಕು.
–ನಾಗೇಶ್, ಮಾನಸಗಂಗೋತ್ರಿ, ಮೈಸೂರು





