Andolana originals

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ ಉದ್ಘಾಟಿಸಲು ರಾಜ್ಯ ಸರ್ಕಾರ ತೀರ್ಮಾನಿಸಿರುವುದು ಸಂತಸದ ಹಾಗೂ ಹೆಮ್ಮೆಯ ಸಂಗತಿಯಾಗಿದೆ.

ಸರ್ಕಾರದ ಈ ನಿರ್ಧಾರವು ನಾಡಿನ ಜನತೆಯಲ್ಲಿ ಹರ್ಷ ತಂದಿದ್ದು, ಮೆಚ್ಚುಗೆಗೆ ಪಾತ್ರವಾಗಿದೆ. ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠವು ಕೇವಲ ಧಾರ್ಮಿಕ ಕೇಂದ್ರವಾಗಿ ಉಳಿಯದೆ, ‘ದಾಸೋಹ’ ಮತ್ತು ‘ಸಾಮಾಜಿಕ ಕ್ರಾಂತಿ’ಗೆ ಹೆಸರುವಾಸಿಯಾಗಿದೆ.

ಅನ್ನದಾಸೋಹ, ಅಕ್ಷರ ದಾಸೋಹದ ಜೊತೆಗೆ ಜಲದಾಸೋಹ, ವೃಕ್ಷದಾಸೋಹ ಹಾಗೂ ಲಕ್ಷಾಂತರ ಜನರಿಗೆ ಉಚಿತ ರಕ್ತದಾನ ಮತ್ತು ಆರೋಗ್ಯ ಸೇವೆಯನ್ನು ಒದಗಿಸುತ್ತಾ ಬಡವರ ಹಾಗೂ ದೀನದಲಿತರ ಆಶಾಕಿರಣವಾಗಿದೆ. ಅಭಿನವ ಗವಿಸಿದ್ಧೇಶ್ವರ ಸ್ವಾಮೀಜಿಯವರು ಸರಳತೆ, ಪ್ರಶಾಂತ ವ್ಯಕ್ತಿತ್ವ ಮತ್ತು ಸಮಾಜಮುಖಿ ಚಿಂತನೆಗಳ ಮೂಲಕ ಕೋಟಿ ಕೋಟಿ ಭಕ್ತರ ಮನ ಗೆದ್ದಿದ್ದಾರೆ.

ನಡೆದಾಡುವ ದೇವರೆನಿಸಿದ ಶ್ರೀಗಳ ಅಮೃತಹಸ್ತದಿಂದ ಶ್ರೀ ಚಾಮುಂಡೇಶ್ವರಿಯ ಪೂಜೆಯೊಂದಿಗೆ ದಸರಾ ಮಹೋತ್ಸವಕ್ಕೆ ಚಾಲನೆ ಸಿಗುತ್ತಿರುವುದು ಈ ಬಾರಿಯ ಉತ್ಸವಕ್ಕೆ ಆಧ್ಯಾತ್ಮಿಕ ಹಾಗೂ ಸಾಮಾಜಿಕ ಮೆರುಗನ್ನು ತರಲಿದೆ. ಈ ನಿರ್ಧಾರವನ್ನು ತೆಗೆದುಕೊಂಡ ರಾಜ್ಯ ಸರ್ಕಾರಕ್ಕೆ ಧನ್ಯವಾದಗಳು.

-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

2 mins ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

4 mins ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

24 mins ago

ಜನರ ನಂಬಿಕೆ ಕಳೆದುಕೊಂಡ ಚುನಾವಣಾ ಆಯೋಗ

ಪ್ರಕಾಶ್ ರಾಜ್  ಭಾರತದ ಚುನಾವಣಾ ಆಯೋಗ ಈಗ ಆಂತರಿಕ ಕ್ಷೋಭೆಯಲ್ಲಿ ಸಿಲುಕಿದೆ. ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಏಕಪಕ್ಷೀಯ…

34 mins ago

ಗ್ರಾಹಕರಿಗೆ ಬೆಲೆ ಏರಿಕೆ ಬಿಸಿ? | ಹಾಲಿನ ದರ ಏರಿಕೆ ನಡುವೆ ಕಾಫಿ,ಟೀ ಬೆಲೆ ಹೆಚ್ಚುವ ಸಾಧ್ಯತೆ

ಬೆಂಗಳೂರು : ಹಾಲಿನ ದರ ಏರಿಕೆ ಕುರಿತು ರಾಜ್ಯದಲ್ಲಿ ಚರ್ಚೆ ತೀವ್ರಗೊಂಡಿರುವ ಬೆನ್ನಲ್ಲೇ ಬೆಂಗಳೂರಿನ ಹೋಟೆಲ್‌ಗಳಲ್ಲಿ ಕಾಫಿ, ಟೀ ಸೇರಿದಂತೆ…

7 hours ago

ಕೆಪಿಎಸ್‌ಸಿ ಅಕ್ರಮ | 1.52 ಕೋಟಿ ಹಣ ಪಾವತಿ ಪತ್ತೆ

ಬೆಂಗಳೂರು : ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಪಶುವೈದ್ಯಕೀಯ ವೈದ್ಯರ ನೇಮಕಾತಿ ಪರೀಕ್ಷೆಯಲ್ಲಿನ ಅಕ್ರಮಗಳ ತನಿಖೆ ಮತ್ತಷ್ಟು ವಿಸ್ತರಿಸಿದ್ದು, ಪ್ರಶ್ನೆಪತ್ರಿಕೆ…

8 hours ago