ಕುಟುಂಬ ಪಡಿತರ ಚೀಟಿದಾರರಿಗೆ ಪೌಷ್ಟಿಕ ವಸ್ತುಗಳೂ ಒಳಗೊಂಡ ‘ಇಂದಿರಾ ಆಹಾರ ಕಿಟ್’ ಅನ್ನು ಪ್ರತಿ ತಿಂಗಳು ವಿತರಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಅನ್ನಭಾಗ್ಯ ಯೋಜನೆ ಅಡಿ ಹೆಚ್ಚುವರಿಯಾಗಿ ಹಂಚಿಕೆ ಮಾಡುತ್ತಿರುವ ಐದು ಕೆಜಿ ಅಕ್ಕಿಗೆ ಪರ್ಯಾಯವಾಗಿ ಈ ಕಿಟ್ ನೀಡಲಾಗುವುದು ಎಂಬ ಪ್ರಸ್ತಾಪವನ್ನು ಆಹಾರ ಇಲಾಖೆ ಸಿದ್ಧಪಡಿಸಿದೆ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ತಿಳಿಸಿದ್ದಾರೆ. ಪಡಿತರ ಚೀಟಿದಾರರಿಗೆ ೫ ಕೆಜಿ ಅಕ್ಕಿಯ ಬದಲು ಗೋಧಿ, ಸಕ್ಕರೆ, ಉಪ್ಪು, ತೊಗರಿಬೇಳೆ, ಅಡುಗೆ ಎಣ್ಣೆ, ಚಹ ಪುಡಿ, ಕಾಫಿ ಪುಡಿಯನ್ನು ಒಳಗೊಂಡ ಇಂದಿರಾ ಆಹಾರ ಕಿಟ್ ವಿತರಿಸಲು ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರ ಶ್ಲಾಘನೀಯ. ಇದರಿಂದ ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟವಾಗುವುದನ್ನು ತಡೆಯಬಹುದಾಗಿದೆ.
– ಸಿದ್ದಲಿಂಗೇಗೌಡ ಹೈರಿಗೆ, ಎಚ್.ಡಿ.ಕೋಟೆ ತಾ





