ಓದುಗರ ಪತ್ರ
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ ಅತ್ಯಂತ ಗಂಭೀರವಾಗಿ ಆಲೋಚಿಸಬೇಕಾದ ವಿಷಯವಾಗಿದೆ.
ಪ್ರಜಪ್ರಭುತ್ವ ವ್ಯವಸ್ಥೆಯಲ್ಲಿ ವಿಮರ್ಶೆ ಮತ್ತು ಪ್ರಶ್ನಿಸುವ ಹಕ್ಕು ಜೀವಾಳ ಎಂಬುದು ನಿಜ. ಆದರೆ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿ ಲ್ಲದೆ ಚುನಾವಣಾ ಆಯೋಗ ಅಥವಾ ನ್ಯಾಯಾಂಗದಂತಹ ಸಾಂವಿಧಾನಿಕ ಸಂಸ್ಥೆಗಳ ಮೇಲೆ ‘ಮತ ಕಳವು’ ಅಥವಾ ‘ರಾಜಿ ಮಾಡಿಕೊಂಡ ಸಂಸ್ಥೆಗಳು’ ಎಂದು ಸತತವಾಗಿ ಆರೋಪ ಮಾಡುವುದು ಪ್ರಜಸತ್ತಾತ್ಮಕ ಮೌಲ್ಯಗಳಿಗೆ ಧಕ್ಕೆ ತರುತ್ತದೆ.
ಇಂತಹ ನಡವಳಿಕೆಗಳು ಸಾಂವಿಧಾನಿಕ ಸಂಸ್ಥೆಗಳ ಮೇಲೆ ಜನರು ಇಟ್ಟಿರುವ ನಂಬಿಕೆಯನ್ನು ಕುಸಿಯುವಂತೆ ಮಾಡುತ್ತವೆ.ಸಂಸ್ಥೆಗಳಲ್ಲಿ ಲೋಪದೋಷಗಳಿದ್ದರೆ ಅವುಗಳನ್ನು ಸುಧಾರಿಸಲು ಕಾನೂನಾತ್ಮಕ ಮತ್ತು ರಚನಾತ್ಮಕ ಹೋರಾಟಗಳು ನಡೆಯಬೇಕೇ ಹೊರತು, ಕೇವಲ ರಾಜಕೀಯ ಲಾಭಕ್ಕಾಗಿ ಸಂಸ್ಥೆಗಳನ್ನು ಕೀಳಾಗಿ ಕಾಣುವುದು ಸರಿಯಲ್ಲ. ಪ್ರಜಪ್ರಭುತ್ವದ ಸಂಸ್ಥೆಗಳ ಮೇಲಿನ ಅನಗತ್ಯ ದಾಳಿಗಳು ಅರಾಜಕತೆಗೆ ದಾರಿ ಮಾಡಿಕೊಡುವ ಅಪಾಯವಿರುತ್ತದೆ.
ಆದ್ದರಿಂದ, ರಾಜಕೀಯ ಪಕ್ಷಗಳು ಹಾಗೂ ನಾಗರಿಕ ಸಮಾಜವು ಜವಾಬ್ದಾರಿಯುತವಾಗಿ ನಡೆದುಕೊಳ್ಳಬೇಕಿದೆ. ಸಾಂವಿಧಾನಿಕ ಸಂಸ್ಥೆಗಳ ಘನತೆಯನ್ನು ಕಾಯ್ದುಕೊಳ್ಳುವುದು ಮತ್ತು ಅವುಗಳ ಪಾರದರ್ಶಕತೆಯನ್ನು ಪ್ರಶ್ನಿಸುವಾಗ ಸಾಕ್ಷ್ಯಾಧಾರಿತ ಹಾಗೂ ವಿಮರ್ಶಾತ್ಮಕ ಮಾರ್ಗವನ್ನು ಅನುಸರಿಸುವುದು ಪ್ರಜಪ್ರಭುತ್ವದ ಆರೋಗ್ಯಕ್ಕೆ ಹಿತಕರ
-ಹರಳಹಳ್ಳಿ ಪುಟ್ಟರಾಜು, ಪಾಂಡವಪುರ
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…
ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…
ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…
ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…
ಕಾಂಗೀರ ಬೋಪಣ್ಣ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗುವ ಆತಂಕ ವಿರಾಜಪೇಟೆ: ತಾಲ್ಲೂಕಿನಲ್ಲಿ ಈ ಬಾರಿ ಮಳೆಯ ಕೊರತೆಯಿಂದ ಭತ್ತದ ಬೆಳೆಗೆ…