ಓದುಗರ ಪತ್ರ
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ ಎಂದಿನಂತೆ ದಸರಾ ಚಿತ್ರೋತ್ಸವ ಮುಂದುವರಿಯುವಂತೆ ರಾಜ್ಯ ಸರ್ಕಾರ ಕ್ರಮಕೈಗೊಳ್ಳಬೇಕಾಗಿದೆ. ಪ್ರೇಕ್ಷಕರ ಸ್ಪಂದನೆ ಕಡಿಮೆಯಾಗಿದೆ ಎಂಬ ಕಾರಣವಿದ್ದರೆ ಅದಕ್ಕೆ ಕಾರ್ಯಕ್ರಮವನ್ನೇ ರದ್ದುಪಡಿಸುವುದು ಪರಿಹಾರವಲ್ಲ. ಅದರ ಗುಣಮಟ್ಟ ಹೆಚ್ಚಿಸಿ, ವ್ಯಾಪಕ ಪ್ರಚಾರ ನೀಡಿ, ಕನ್ನಡದ ಹಿರಿಯ ಕಲಾವಿದರು, ಯುವ ಪ್ರತಿಭೆಗಳು, ನಿರ್ದೇಶಕರು, ತಂತ್ರಜ್ಞರು ಹಾಗೂ ಚಿತ್ರಪ್ರೇಮಿಗಳನ್ನು ಒಳಗೊಳ್ಳುವ ಮೂಲಕ ದಸರಾ ಚಿತ್ರೋತ್ಸವನ್ನು ಇನ್ನಷ್ಟು ಜನಪ್ರಿಯಗೊಳಿಸಬೇಕು. ಕನ್ನಡ ಚಿತ್ರರಂಗವು ನಮ್ಮ ನಾಡಿನ ಸಂಸ್ಕೃತಿಯ ಪ್ರಮುಖ ಭಾಗ. ಮೈಸೂರು ದಸರಾ ವೇದಿಕೆಯಲ್ಲಿ ಅದಕ್ಕೆ ಸೂಕ್ತ ಸ್ಥಾನ ನೀಡುವುದು ಸರ್ಕಾರದ ಜವಾಬ್ದಾರಿಯಾಗಿದೆ. ಸರ್ಕಾರ ಕನ್ನಡ ಚಿತ್ರರಂಗದ ಭಾವನೆಗಳಿಗೆ ಸ್ಪಂದಿಸಬೇಕು. ದಸರಾ ಚಿತ್ರೋತ್ಸವ ಉಳಿಯಲಿ, ಕನ್ನಡ ಚಿತ್ರರಂಗ ಬೆಳೆಯಲಿ, ಮೈಸೂರು ದಸರಾ ಇನ್ನಷ್ಟು ವೈಭವದಿಂದ ಕಂಗೊಳಿಸಲಿ.
-ಜೋಗಿ ಮಂಜು, ಮೈಸೂರು
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…
ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…
ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…
ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…