Andolana originals

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ ಪ್ರಧಾನಿ ಹಾಗೂ ಸ್ವಾಭಿಮಾನಿ ನಾಯಕ ಲಾಲ್ ಬಹದ್ದೂರ್ ಶಾಸ್ತ್ರೀಯವರ ಜನ್ಮದಿನವೂ ಹೌದು.

ಈ ವಿಶೇಷ ದಿನದಂದು ದೇಶಕ್ಕಾಗಿ ಶ್ರಮಿಸಿದ ಈ ಇಬ್ಬರೂ ಮಹಾನ್ ನಾಯಕರ ಸ್ಮರಣೆ ಹಾಗೂ ಅವರ ಕೊಡುಗೆಗಳನ್ನು ಎಡೆ ಸ್ಮರಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಮಹಾತ್ಮ ಗಾಂಧೀಜಿಯವರು ಅಹಿಂಸೆ, ಸತ್ಯಾಗ್ರಹ ಮತ್ತು ಸ್ವಾತಂತ್ರ್ಯ ಹೋರಾಟದ ಮೂಲಕ ಭಾರತಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಮಹಾನ್ ನಾಯಕರಾಗಿದ್ದು, ಅವರನ್ನು ‘ರಾಷ್ಟ್ರಪಿತ’ ಎಂದು ಗೌರವಿಸುವುದು ನಮ್ಮ ಹೆಮ್ಮೆ. ಅವರ ಆದರ್ಶ ವಿಚಾರಧಾರೆಗಳು ಇಂದಿಗೂ ಜಗತಿಕ ಮಟ್ಟದಲ್ಲಿ ಪ್ರಸ್ತುತವಾಗಿವೆ.

ಅದೇ ದಿನ ಜನಿಸಿದ ಲಾಲ್ ಬಹದ್ದೂರ್ ಶಾಸ್ತ್ರೀಯವರು ದೇಶದ ರೈತರು ಮತ್ತು ಸೈನಿಕರ ನಿಜವಾದ ಬೆನ್ನೆಲುಬಾಗಿದ್ದರು. ೧೯೬೫ ರ ಭಾರತ-ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ದೇಶವನ್ನು ಯಶಸ್ವಿಯಾಗಿ ಮುನ್ನಡೆಸಿ, ಜೈ ಜವಾನ್, ಜೈ ಕಿಸಾನ್ ಎಂಬ ಒಗ್ಗಟ್ಟಿನ ಮಂತ್ರದ ಮೂಲಕ ದೇಶದಲ್ಲಿ ಸ್ವಾಭಿಮಾನವನ್ನು ತುಂಬಿದವರು. ತಮ್ಮ ಪ್ರಾಮಾಣಿಕತೆ ಮತ್ತು ಸರಳ ಜೀವನಶೈಲಿಯಿಂದ ಅವರು ಆದರ್ಶಪ್ರಾಯರಾಗಿದ್ದಾರೆ.

ಸ್ವಾತಂತ್ರ್ಯ ಹೋರಾಟದಲ್ಲಿ ಗಾಂಧೀಜಿಯವರ ಪಾತ್ರ ಎಷ್ಟು ಹಿರಿದೋ, ಸ್ವತಂತ್ರ ಭಾರತವನ್ನು ಗಟ್ಟಿಗೊಳಿಸುವಲ್ಲಿ ಶಾಸಿಯವರ ಕೊಡುಗೆಯೂ ಅಷ್ಟೇ ಮಹತ್ವದ್ದಾಗಿದೆ. ಸರಕಾರಿ ಹಾಗೂ ಖಾಸಗಿ ಸಂಸ್ಥೆಗಳು, ಶಾಲಾ-ಕಾಲೇಜುಗಳಲ್ಲಿ ಈ ಇಬ್ಬರೂ ಮಹಾನ್ ನಾಯಕರ ಆದರ್ಶಗಳನ್ನು ಸ್ಮರಿಸುವ ಮೂಲಕ ಮುಂದಿನ ಪೀಳಿಗೆಗೆ ಅವರ ಇತಿಹಾಸವನ್ನು ತಿಳಿಸಬೇಕಾಗಿದೆ ನಮ್ಮೆಲ್ಲರ ಜವಾಬ್ದಾರಿಯಾಗಿದೆ.

– ಬಿ. ಗಣೇಶ ಕೆ.ಜಿ.ಕೊಪ್ಪಲು, ಮೈಸೂರು

ಆಂದೋಲನ ಡೆಸ್ಕ್

Recent Posts

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

2 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

3 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

3 hours ago

ಪರಿಸರ ಸ್ನೇಹಿ ಸಮಾಜ ಮನೆಯಿಂದಲೇ ಆರಂಭವಾಗಲಿ

ಲೀಲಾ ಶಿವಕುಮಾರ್, ಪರಿಸರವಾದಿ ಸ್ವಚ್ಛ ನಗರಿ ಮೈಸೂರು ಮಾತ್ರವಲ್ಲ, ಇಡೀ ದೇಶವೇ ಇಂದು ಕಸದ ಸಮಸ್ಯೆಯನ್ನು ಎದುರಿಸುತ್ತಿದೆ. ರಸ್ತೆ, ಬಡಾವಣೆ,…

3 hours ago

ಮತ್ತೊಮ್ಮೆ ನ್ಯಾಯಾಲಯದತ್ತ ಮಲ್ಟಿಪ್ಲೆಕ್ಸ್ ಸಂಘಟನೆ, ಇತರರು

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಚಿತ್ರಮಂದಿರಗಳಲ್ಲಿ ಪ್ರವೇಶ ದರ ಗರಿಷ್ಟ ಮೊತ್ತ ೨೦೦ ರೂ. ಅಸಾಧ್ಯವೇ? ಕನ್ನಡ ಚಿತ್ರರಂಗ ಮತ್ತು…

3 hours ago

ಇಂದಿನ ಭಾರತದಲ್ಲಿ ಗಾಂಧಿ ಮತ್ತು ಜೆನ್ ಝಿ

ನಾ.ದಿವಾಕರ ಆದರ್ಶ ಮಾದರಿಗಳೇ ಕಾಣದ ದೇಶದಲ್ಲಿ ಯುವ ಜನಾಂಗಕ್ಕೆ ದಾರಿ ದೀವಿಗೆ ಯಾವುದು? ಇತ್ತೀಚಿನ ಜೆನ್ ಝಿ ಚಳುವಳಿಗಳು ಜಂತರ್…

3 hours ago