Andolana originals

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ ಸಿದ್ದರಾಮಯ್ಯನವರು, ಅಽಕಾರಿಗಳೊಡನೆ ಇತ್ತೀಚೆಗೆ ಸಭೆ ನಡೆಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ರಾಜ್ಯದ ಸಾಂಸ್ಕೃತಿಕ ರಾಜಧಾನಿ ಎಂದೇ ಕರೆಯಲ್ಪಡುವ ಮೈಸೂರು ಫಿಲಂ ಸಿಟಿ ನಿರ್ಮಿಸಲು ಹೇಳಿ ಮಾಡಿಸಿದಂತಿದೆ. ಕಲೆ, ಸಂಗೀತ, ನೃತ್ಯ, ಮುಂತಾದ ಲಲತ ಕಲೆಗಳ ನೆಲೆವೀಡಾದ ಮೈಸೂರಿನಲ್ಲಿ ಪ್ರತಿವರ್ಷ ನಡೆಯುವ ದಸರಾ ಮಹೋತ್ಸವ ವಿಶ್ವ ವಿಖ್ಯಾತವಾಗಿದೆ. ಚಿತ್ರರಂಗದ ಹಲವಾರು ಪ್ರಖ್ಯಾತ ನಟ, ನಟಿಯರು, ನಿರ್ಮಾಪಕರು, ನಿರ್ದೇಶಕರು ಹಾಗೂ ತಂತ್ರಜ್ಞರು ಮೈಸೂರಿನ ಟಿಸಿಲೊಡೆದಿದ್ದಾರೆ.

ಹಲವು ದಶಕಗಳ ಹಿಂದೆಯೇ ದಿವಂಗತ ಕೆ.ಎನ್. ಬಸವರಾಜಯ್ಯನವರು ಇಲ್ಲೇ ಪ್ರೀಮಿಯರ್ ಸ್ಟುಡಿಯೋವನ್ನು ನಿರ್ಮಿಸಿ (ಈಗ ಅದು ಇಲ್ಲ ಬಿಡಿ) ವಿವಿಧ ಭಾಷೆಗಳ ಚಲನ ಚಿತ್ರಗಳ ತಯಾರಿಕೆಗೆ ಅಥವಾ ನಿರ್ಮಾಣಕ್ಕೆ ಭದ್ರ ಬುನಾದಿಯನ್ನು ಹಾಕಿದ್ದರು. ಈ ಎಲ್ಲ ಕಾರಣಗಳಿಂದ ಫಿಲಂ ಸಿಟಿ ಮೈಸೂರಿನ ನಿರ್ಮಾಣವಾಗುವುದರಿಂದ ಸ್ಥಳೀಯ ಕಲಾವಿದರಿಗೂ ಕೆಲಸ ದೊರಕಿದಂತಾಗುತ್ತದೆ. ಈ ಯೋಜನೆ ಸಾಧ್ಯವಾದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ .

-ಕೆ.ವಿ.ವಾಸು, ಮೈಸೂರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

2 mins ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

6 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

7 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

14 mins ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

21 mins ago