Andolana originals

ಓದುಗರ ಪತ್ರ: ಸರ್ಕಾರಿ ಶಾಲಾ, ಕಾಲೇಜುಗಳೆಂದರೆ ತಾತ್ಸಾರವೇಕೆ?

ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳೂ ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು.

ಕಾರ್ಯಕ್ರಮಕ್ಕೂ ಮುನ್ನ ಪರಿಚಯ ಮಾಡಿಕೊಂಡ ಆ ಕಾಲೇಜಿನ ಸ್ಪರ್ಧಾರ್ಥಿಗಳು ಯಾವ ಕಾಲೇಜಿನಿಂದ ಬಂದಿದ್ದೀರಿ ಎಂದು ನಮ್ಮನ್ನು ಕೇಳಿದರು. ನಗರದ ಸರ್ಕಾರಿ ಪದವಿಪೂರ್ವ ಕಾಲೇಜಿನಿಂದ ಬಂದಿದ್ದೇನೆ ಎಂದಾಗ ಅವರ ಮುಖ ಭಾವವೇ ಬೇರೆಯಾಯಿತು. ಸರ್ಕಾರಿ ಕಾಲೇಜಿನಿಂದಲೂ ಸಂಗೀತ, ಚರ್ಚೆ ಹಾಗೂ ಪ್ರಬಂಧ ಸ್ಪರ್ಧೆಗೆ ಬಂದಿದ್ದೀರಾ? ಎಂದು ಪ್ರಶ್ನಿಸಿದರು. ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳು ಮಾತ್ರ ಬುದ್ಧಿವಂತರು, ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳೆಲ್ಲ ದಡ್ಡರು ಎಂಬಂತಿತ್ತು ಅವರ ಪ್ರಶ್ನೆ. ಎಲ್ಲ ವಿದ್ಯಾರ್ಥಿಗಳು ಲಕ್ಷಾಂತರ ರೂ. ನೀಡಿ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಓದುವಷ್ಟು ಶಕ್ತರಾಗಿರುವುದಿಲ್ಲ. ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಗಳಲ್ಲಿ ರಾಜ್ಯಮಟ್ಟದಲ್ಲಿ ಸ್ಥಾನ ಪಡೆದವರ ಪಟ್ಟಿಯಲ್ಲಿ ಸರ್ಕಾರಿ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳೂ ಅಗ್ರ ಸ್ಥಾನದಲ್ಲಿರುತ್ತಾರೆ ಎಂಬುದು ಆ ಸಂಸ್ಥೆಯ ವಿದ್ಯಾರ್ಥಿಗಳಿಗೆ ಅರಿವಿಗೆ ಬಂದಂತಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳು ತಮ್ಮ ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಸರ್ಕಾರಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳು ಎಂದು ಭೇದ ಭಾವ ಮಾಡದೇ ಎಲ್ಲರೂ ಒಂದೇ ಎಂಬ ಮನೋ ಭಾವನೆಯನ್ನು ಮೂಡಿಸಬೇಕು.

– ಮಧುಮಿತ, ಮೈಸೂರು

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

30 mins ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದತಿಗಿಂತ ‘ಶುದ್ಧೀಕರಣ’ ತುರ್ತು ಅಗತ್ಯ

ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…

33 mins ago

ಆರೋಗ್ಯಕರ ನಾಳೆಗಾಗಿ ಆಯುರ್ವೇದ – ಒಂದು ಆರೋಗ್ಯ, ಒಂದು ಭವಿಷ್ಯ

ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ…

36 mins ago

ಡಾ.ಎಸ್.ಜೆ. ನಾಗಲೋಟಿಮಠ ಅವರ ಸ್ಛೂರ್ತಿದಾಯಕ ನಡವಳಿಕೆ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಅಧಿಕಾರದ ಶಕ್ತಿಯಿಂದಲ್ಲ, ಆದರ್ಶದ ನಡವಳಿಕೆಯಿಂದ ಮುನ್ನಡೆಸುವುದೇ ನಿಜವಾದ ನಾಯಕತ ಕೆಲವೊಮ್ಮೆ…

42 mins ago

ಯುವನಿಧಿ; ೨,೧೭೯ ಮಂದಿಗೆ ೬.೩೦ ಕೋಟಿ ರೂ. ನೆರವು

ನವೀನ್ ಡಿಸೋಜ ೨,೪೫೯ ನಿರುದ್ಯೋಗಿ ಯುವಕ-ಯುವತಿಯರಿಂದ ನೋಂದಣಿ; ಶೇ.೮೮.೦೬ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ  ಮಡಿಕೇರಿ: ಉದ್ಯೋಗದ ನಿರೀಕ್ಷೆಯಲ್ಲಿರುವ…

47 mins ago

ವೈಟ್ ಟಾಪಿಂಗ್: ಅ.೫ರೊಳಗೆ ಮೂರು ರಸ್ತೆ ಸಂಚಾರಕ್ಕೆ ಮುಕ್ತ

ಕೆ.ಬಿ.ರಮೇಶನಾಯಕ ಮೊದಲ ಹಂತದ ಮೂರು ರಸ್ತೆಗಳಲ್ಲಿ ಎರಡು ಪೂರ್ಣ ರಸ್ತೆ ಜತೆಗೆ ಫುಟ್‌ಪಾತ್, ಚರಂಡಿ ಕಾಮಗಾರಿಯೂ ಪೂರ್ಣ ದಸರಾ ಬಳಿಕ…

53 mins ago