Andolana originals

ಕೆಎಚ್‌ಬಿ ಕಾಲೋನಿ ನಿವಾಸಿಗಳ ಜೀವನ ಹೈರಾಣ

ಎಂ.ಕೇಶವ

ಎರಡು ವರ್ಷಗಳಿಂದ ನಡೆಯುತ್ತಿರುವ ಕಾಮಗಾರಿಯಿಂದ ಕಂಗಾಲು; ಹಿರಿಯರು, ಮಹಿಳೆಯರು, ಸವಾರರಿಗೆ ಓಡಾಟವೇ ಸವಾಲು

ಮೈಸೂರು: ಒಂದರ ಮೇಲೊಂದರಂತೆ ಎರಡು ವರ್ಷಗಳಿಂದ ನಡೆಯುತ್ತಿರುವ ನಿರಂತರ ಕಾಮಗಾರಿಯಿಂದ ಹೂಟಗಳ್ಳಿಯ ಕೆ.ಎಚ್.ಬಿ. ಕಾಲೋನಿಯ ನಿವಾಸಿಗಳು ಅಕ್ಷರಶಃ ಹೈರಾಣರಾಗಿದ್ದಾರೆ.

ಒಂದೆಡೆ ಕಾಮಗಾರಿಯಿಂದ ಮೇಲೇಳೆತ್ತಿರುವ ದೂಳು ನಿವಾಸಿಗಳ ಅನಾರೋಗ್ಯಕ್ಕೆ ಕಾರಣವಾ ಗುತ್ತಿದ್ದರೆ, ಗುಂಡಿಬಿದ್ದ ರಸ್ತೆಯಿಂದ ಕೆಲವರು ಬಿದ್ದು ಗಾಯಗೊಳ್ಳುತ್ತಿದ್ದಾರೆ. ಕೆಎಚ್‌ಬಿ ಕಾಲೋನಿ ಮುಖ್ಯರಸ್ತೆಯಿಂದ ೫೦೦ ಮೀಟರ್ ರಸ್ತೆಯಲ್ಲಿ ನೀರಿನ ಪೈಪ್ ಕನೆಕ್ಷನ್, ಒಳ ಚರಂಡಿ ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳು ನಿರಂತರವಾಗಿ ಒಂದರ

ಕಾಮಗಾರಿ ನಡೆಯುತ್ತಿರುವುದರಿಂದ ಈ ರಸ್ತೆಯಿಂದ ಬೇರೆ ಬಡಾವಣೆಗಳಿಗೆ ಹೋಗಲು, ಬೇರೆ ಬಡಾವಣೆಯಿಂದ ಈ ಮುಖ್ಯ ರಸ್ತೆಗೆ ಬರಲು ವಾಹನ ಸವಾರರು ನಿತ್ಯ ಪರದಾಡುತ್ತಿದ್ದಾರೆ.

” ೧.೧೨ ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ನಡೆಯುತ್ತಿದೆ. ನೀರಿನ ಪೈಪ್‌ಲೈನ್ ಅಳವಡಿಕೆ, ಒಳಚರಂಡಿ ಕಾಮಗಾರಿ, ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದು ಸ್ವಲ್ಪ ವಿಳಂಬವಾಗಿದೆ. ಇನ್ನು ಎರಡು ವಾರಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ.”

ಟಿ.ಎನ್. ನರಸಿಂಹಮೂರ್ತಿ, ಪೌರಾಯುಕ್ತ, ಹೂಟಗಳ್ಳಿ ನಗರಸಭೆ 

” ನೀರಿನ ಪೈಪ್‌ಲೈನ್, ಒಳಚರಂಡಿ ಕಾಮಗಾರಿ, ರಸ್ತೆ ಕಾಮಗಾರಿಯಿಂದ ಬಹಳಷ್ಟು ಜನರು ತೊಂದರೆಅನುಭವಿಸುತ್ತಿದ್ದಾರೆ. ಅಂಗಡಿಗಳಿಗೆ ನಷ್ಟವೂ ಆಗುತ್ತಿದೆ. ಸಂಬಂಧಿಸಿದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಇತ್ತ ಗಮನಹರಿಸಬೇಕು.”

ಎಚ್.ಎಂ.ತಾಂಡವಮೂರ್ತಿ, ಸಂಯೋಜಕ, ವರ್ತಕರ ಸಂಘ

” ಕಳೆದ ಎರಡು ವರ್ಷಗಳಿಂದ ನಡೆಯುತ್ತಿರುವ ಈ ಕಾಮಗಾರಿಗಳಿಂದ ಕೆ.ಎಚ್.ಬಿ. ಕಾಲೋನಿಯ ಮುಖ್ಯ ರಸ್ತೆಯ ನಿವಾಸಿಗಳು, ಅಂಗಡಿಯವರು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ. ಇದರ ಬಗ್ಗೆ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ಪತ್ರದ ಮೂಲಕ ಮನವಿ ಮಾಡಿದರೂ ಕಾಮಗಾರಿ ಬೇಗ ಮುಗಿಯುತ್ತಿಲ್ಲ.”

ಅರ್ಜುನ, ಕಾರ್ಯದರ್ಶಿ, ಹೂಟಗಳ್ಳಿ ವರ್ತಕರ ಸಂಘ

” ಕಾಮಗಾರಿ ನಡೆಯುತ್ತಿರುವುದರಿಂದ ಹಗಲು ಹಾಗೂ ರಾತ್ರಿ ವೇಳೆಯಲ್ಲಿ ಬೈಕ್ ಸವಾರರು ನಿಯಂತ್ರಣ ತಪ್ಪಿ ಬಿದ್ದಿದ್ಧಾರೆ. ಕಾರು, ಇತರೆ ನಾಲ್ಕು ಚಕ್ರದ ವಾಹನಗಳ ಚಕ್ರಗಳು ಹಳ್ಳದಲ್ಲಿ ಸಿಲುಕಿ ಪರದಾಡಿದ್ದಾರೆ. ಹೀಗಾಗಿ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಿ, ಸಂಚಾರಕ್ಕೆ ಅನುಕೂಲ ಮಾಡಿಕೊಡಬೇಕು.”

ರಾಕೇಶ್, ನಿವಾಸಿ

” ಕಾಮಗಾರಿ ವಿಳಂಬದಿಂದ ಬೈಕ್, ವಾಹನ ಸವಾರರು ಸಂಚರಿಸಲು ಸಾಧ್ಯವಾಗುತ್ತಿಲ್ಲ. ಹಿರಿಯ ನಾಗರಿಕರು ತಿರುಗಾಡಲು ಭಯಪಡುತ್ತಿದ್ದಾರೆ. ಮಳೆ ಬಂದಾಗ ರಸ್ತೆ ಕೆಸರುಮಯ ಆಗುವುದರಿಂದ ಜನರಿಗೆ ಬಹಳ ತೊಂದರೆಯಾಗಿದೆ. ಕಾಮಗಾರಿ ಬೇಗ ಮುಗಿಸಿ, ಜನರಿಗೆ ಅನುಕೂಲ ಮಾಡಿಕೊಡಬೇಕು.”

ಮಹೇಶ್, ಸ್ಥಳೀಯ

” ಎರಡು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿರುವ ಕಾಮಗಾರಿಯಿಂದ ರಸ್ತೆಯಲ್ಲಿರುವ ಮನೆಗಳು, ಅಂಗಡಿಗಳಿಗೆ ಬರಲು ಜನ ಪರದಾಡುತ್ತಿದ್ದಾರೆ. ಇದರ ಬಗ್ಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ಮನವಿ ಮಾಡಿದರೂ ಕೆಲಸ ಮಾತ್ರ ಪೂರ್ಣಗೊಳಿಸುತ್ತಿಲ್ಲ.”

ಚೇತನ್, ಸ್ಥಳೀಯರು

 

 

ಆಂದೋಲನ ಡೆಸ್ಕ್

Recent Posts

ರಾಜ್ಯದಲ್ಲಿ ೧೯೮೩ರ ಇತಿಹಾಸ ಮರುಕಳಿಸುತ್ತದೆಯೇ?

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ರಾಜ್ಯ ರಾಜಕೀಯದಲ್ಲಿ ೧೯೮೩ರ ರಾಜಕೀಯ ಸನ್ನಿವೇಶ ರೂಪುಗೊಳ್ಳುತ್ತಿದೆಯೇ ಎಂಬ ಅನುಮಾನಗಳು ಶುರುವಾಗಿವೆ. ಅಂದ ಹಾಗೆ…

4 mins ago

ಗಣೇಶೋತ್ಸವಕ್ಕೆ ಡಿಜೆ ನಿಷೇಧ: ಮಿಶ್ರ ಪ್ರತಿಕ್ರಿಯೆ

ಪ್ರಶಾಂತ್ ಎನ್.ಮಲ್ಲಿಕ್ ಸಾರ್ವಜನಿಕರಿಗೆ ತೊಂದರೆ ತಪ್ಪುತ್ತದೆ: ಸಮರ್ಥನೆ ಡಿಜೆಗೆ ಕಡಿವಾಣ ಸರಿಯಲ್ಲ: ಅಸಮಾಧಾನ ಮೈಸೂರು: ರಾಜ್ಯದಲ್ಲಿ ಗೌರಿ ಗಣೇಶ ಹಬ್ಬದ…

20 mins ago

50 ವರ್ಷಗಳ ನಂತರ ಮೊದಲ ಬಾರಿ ಬರಿದಾದ ಕಾರಿಗನಹಳ್ಳಿ ಅಣೆಕಟ್ಟೆ

ಆರ್.ಶ್ರೀನಿವಾಸ್ ೪೦೦೦ ಕೊಳವೆಬಾವಿಗಳಲ್ಲಿ ಅಂತರ್ಜಲ ಕುಸಿತ, ಕುಡಿಯುವ ನೀರಿಗೂ ಹಾಹಾಕಾರ  ಕೆ.ಆರ್.ಪೇಟೆ: ಸುಮಾರು ೫೦ ವರ್ಷಗಳ ಅವಧಿಯಲ್ಲಿ ಮೊದಲ ಬಾರಿಗೆ…

25 mins ago

ಗೌರಿ-ಗಣೇಶ ಹಬ್ಬಕ್ಕೆ ಕಂಗೊಳಿಸುತ್ತಿರುವ ಗೌರಿ ಹೂವು

ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ಗೌರಿ-ಗಣೇಶ ಹಬ್ಬದ ಸಂಭ್ರಮಕ್ಕೆ ಮಲೆನಾಡಿನ ಕಾಡುಗಳಲ್ಲಿ ಅರಳಿರುವ ವಿಶಿಷ್ಟ ಗೌರಿ ಹೂವು ಮತ್ತಷ್ಟು ಮೆರುಗು ನೀಡುತ್ತಿದೆ.…

31 mins ago

ಕೋಟೆಯಲ್ಲಿ ಗೌರಿ-ಗಣೇಶ ಹಬ್ಬದ ಆಚರಣೆಗೆ ಸಜ್ಜು

ಮಂಜು ಕೋಟೆ ಗಣೇಶ ಮೂರ್ತಿಗಳ ಮಾರಾಟದಲ್ಲಿ ಹೆಚ್ಚಳ; ಪೈಪೋಟಿಗೆ ಇಳಿದಿರುವ ಯುವ ಸಮುದಾಯ ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಹಿಂದೂ ಸಮುದಾಯದವರು ಗೌರಿ-ಗಣೇಶ…

38 mins ago