ಮಹಾದೇಶ್ ಎಂ.ಗೌಡ
ಮಲೆ ಮಹದೇಶ್ವರ ಬೆಟ್ಟಕೆ ಆಗಮಿಸಿದ ಲಕ್ಷಾಂತರ ಭಕ್ತಾದಿಗಳಿಂದ ಕಾಣಿಕೆ ಅರ್ಪಣೆ
ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವದಲ್ಲಿ ಒಂಬತ್ತು ದಿನಗಳ ಅವಧಿಯಲ್ಲಿ ೩.೩೫ ಕೋಟಿ ರೂ. ಆದಾಯ ಬಂದಿದೆ.
ಮಹಾಶಿವರಾತ್ರಿ ಜಾತ್ರಾ ಮಹೋತ್ಸವ ಪ್ರಯುಕ್ತ ಪಾದಯಾತ್ರಿಕ ಭಕ್ತಾದಿಗಳು ಹಾಗೂ ಇತರೆ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ದರ್ಶನ ಪಡೆದುಕೊಂಡು ತಮ್ಮ ಹರಕೆ ಸಮರ್ಪಿಸಿದ್ದರು.
ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ, ಹುಲಿ ವಾಹನ, ರುದ್ರಾಕ್ಷಿ ವಾಹನ, ಬಸವ ಮಂಟಪ ಮುಂತಾದ ಸೇವೆಗಳನ್ನು ಸಲ್ಲಿಸಿದ್ದರು. ಅಲ್ಲದೆ, ಲಾಡು ಮಾರಾಟ, ಅಕ್ಕಿ ಸೇವೆ, ಮಿಶ್ರ ಪ್ರಸಾದ, ಪುದುವಟ್ಟು ಮಾಹಿತಿ ಕೇಂದ್ರ ಹಾಗೂ ತಾಳಬೆಟ್ಟದ ಭವನಗಳಿಂದ, ಪಾರ್ಕಿಂಗ್, ಕಲ್ಲುಸಕ್ಕರೆ, ತೀರ್ಥ, ಬ್ಯಾಗ್ ಮಾರಾಟದಿಂದ ೩,೩೫,೪೩,೦೪೧ ರೂ. ಆದಾಯ ಬಂದಿದೆ.
ಐದು ದಿನಗಳ ಅವಧಿಯಲ್ಲಿ ವಿವಿಧ ಉತ್ಸವಗಳಾದ ಚಿನ್ನದ ರಥೋತ್ಸವ, ಬೆಳ್ಳಿ ರಥೋತ್ಸವ, ಬಸದ ವಾಹನ,ಹುಲಿ ವಾಹನ, ರುದ್ರಾಕ್ಷಿ ವಾಹನದ ಹರಕೆಗಳು ಸಲ್ಲಿಕೆಯಾಗಿದ್ದು, ೮೨,೮೦,೯೩೫ ರೂ. ಆದಾಯ ಬಂದಿದೆ. ಫೆಬ್ರವರಿ ೧೦ ರಿಂದ ೧೮ರವರೆಗೆ ನಡೆದ ವಿವಿಧ ಉತ್ಸವಗಳಿಂದ ೮೨,೮೦,೯೩೫ ರೂ., ಸೇವೆಗಳಿಂದ ೬,೧೩,೬೦೦ ರೂ., ಮಿಶ್ರ ಪ್ರಸಾದದಿಂದ ೧೦,೩೭,೫೦೦ ರೂ., ಮಾಹಿತಿ ಕೇಂದ್ರದಿಂದ ೬,೫೩,೩೦೦ ರೂ., ವಿಶೇಷ ಪ್ರವೇಶ ಶುಲ್ಕ ೫೬,೭೦,೫೦೦ ರೂ., ಲಾಡು ಮಾರಾಟದಿಂದ ೧,೪೬,೨೦,೭೦೦ ರೂ., ಕಲ್ಲು ಸಕ್ಕರೆ ಮಾರಾಟದಿಂದ ೧,೭೯,೬೦೦ ರೂ., ತೀರ್ಥ ಪ್ರಸಾದದಿಂದ ೩,೪೨,೦೯೦ ರೂ., ಬ್ಯಾಗ್ ಮಾರಾಟದಿಂದ ೨,೮೩,೫೩೦ ರೂ., ಪುದುವಟ್ಟುವಿನಿಂದ ೪,೨೫,೮೩೫ ರೂ., ಅಕ್ಕಿ ಸೇವೆಯಿಂದ ೬,೧೬,೫೧೩ ರೂ., ಇತರೆ ಸೇವೆಗಳಿಂದ ೮,೧೮,೯೩೮ ರೂ., ಒಟ್ಟಾರೆ ೯ ದಿನಗಳ ಅವಧಿಯಲ್ಲಿ ೩,೩೫,೪೩,೦೪೧ ರೂ. ಆದಾಯ ಬಂದಿದೆ.
” ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆದ ಮಹಾಶಿವರಾತ್ರಿ ಜಾತ್ರಾ ಮಹೋತ್ಸವಕ್ಕೆ ೧೦ ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಆಗಮಿಸಿ ದೇವರ ದರ್ಶನ ಪಡೆದುಕೊಂಡಿದ್ದಾರೆ. ಹತ್ತು ದಿನಗಳ ಅವಧಿಯಲ್ಲಿ ಮೂರು ಕೋಟಿ ರೂ.ಗೂ ಹೆಚ್ಚು ಆದಾಯ ಬಂದಿದೆ.”
ಎ.ಇ.ರಘು, ಕಾರ್ಯದರ್ಶಿ, ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ
ಬೆಂಗಳೂರು: ರಾಜ್ಯದಲ್ಲಿ ಒಣಹವೆ ಮುಂದುವರಿದಿದ್ದು, ಕೆಲವು ಭಾಗದಲ್ಲಿ ಇಂದು ಸಂಜೆಯ ವೇಳೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ…
ಬೆಂಗಳೂರು: ರೈತರ ವಿರೋಧದ ನಡುವೆಯೂ ಇಂದಿನಿಂದ ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸಫಾರಿ ಪುನರಾರಂಭ ಮಾಡಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಹುಲಿ ದಾಳಿಗೆ…
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ…
ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…
ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…