Andolana originals

ಮಳವಳ್ಳಿ: ಸಿಡಿ ಹಬ್ಬಕ್ಕೆ ಸಿಂಗಾರಗೊಂಡ ಪಟ್ಣಣ

ಮಾಗನೂರು ಶಿವಕುಮಾರ್

ಇಂದು,ನಾಳೆ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವ 

ಮಳವಳ್ಳಿ: ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ಪಟ್ಟಣದ ಗ್ರಾಮ ದೇವತೆಗಳಾದ ದಂಡಿನ ಮಾರಮ್ಮ ಹಾಗೂ ಪಟ್ಟಲದಮ್ಮ ಶಕ್ತಿ ದೇವತೆಗಳ ಸಿಡಿ ಹಬ್ಬ ಜಾತ್ರಾ ಮಹೋತ್ಸವಕ್ಕೆ ಪಟ್ಟಣ ಮಧುವಣಿಗಿತ್ತಿಯಂತೆ ಸಿಂಗಾರಗೊಂಡಿದೆ.

ಸ್ವಚ್ಛತೆ, ವಿಶೇಷ ವಿದ್ಯುತ್ ದೀಪಗಳ ಅಲಂಕಾರದೊಂದಿಗೆ, ಹಬ್ಬಕ್ಕೆ ಶುಭ ಕೋರುವ ಭರಪೂರ ನಾಮಪಲಕಗಳು ರಾರಾಜಿಸುತ್ತಿದ್ದು, ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಶಾಸಕರು ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಅವರ ನೇತೃತ್ವದಲ್ಲಿ ವಿಜೃಂಭಣೆಯ ಜಾತ್ರಾ ಮಹೋತ್ಸವ ಆಚರಣೆಗೆ ಸಕಲ ಸಿದ್ಧತೆ ನಡೆಸಲಾಗಿದ್ದು,ಪಟ್ಟಣದಲ್ಲಿ ಹಬ್ಬದ ಸಡಗರ ಸಂಭ್ರಮ ಜೋರಾಗಿದೆ.

ಜಾತ್ರಾ ಮಹೋತ್ಸವ ಆರಂಭ: ಶುಕ್ರವಾರ ಬೆಳಿಗ್ಗೆ ಶಕ್ತಿ ದೇವತೆಗಳಿಗೆ ಸಂಪ್ರದಾಯಬದ್ಧವಾಗಿ ಪೂಜಾ ಕೈಂಕರ್ಯಗಳು ನೆರವೇರಲಿವೆ. ಸಂಜೆ ನಡೆಯುವ ಸಿಡಿ ಉತ್ಸವಕ್ಕೆ ಕೋಟೆ ಬೀದಿಯಲ್ಲಿ ಸಿಡಿರಣ್ಣದ ಭರ್ಜರಿ ಸಿದ್ಧತೆ ನಡೆದಿದೆ. ಕಣ್ಮನ ಸೆಳೆವ ವಿದ್ಯುತ್ ದೀಪಾಲಂಕಾರ: ಸಿಡಿ ಜಾತ್ರಾ ಮಹೋತ್ಸವದ ಪ್ರಯುಕ್ತ ಪಟ್ಟಲದಮ್ಮ ಹಾಗೂ ದಂಡಿನ ಮಾರಮ್ಮ ದೇವಸ್ಥಾನಗಳು, ಪಟ್ಟಣದ ಪ್ರಮುಖ ರಸ್ತೆಗಳು, ಪ್ರಮುಖ ವೃತ್ತಗಳಿಗೆ ವಿಶೇಷ ವಿದ್ಯುತ್ ದೀಪಾಲಂಕಾರ ಮಾಡಲಾಗಿದ್ದು, ರಾತ್ರಿ ವೇಳೆ ಇಡೀ ಪಟ್ಟಣ ಜಗ ಜಗಿಸುತ್ತಿದೆ.

ಕೊಂಡೋತ್ಸವಕ್ಕೆ ಸಿದ್ಧತೆ: ಪಟ್ಟಣದ ಪಟ್ಟಲದಮ್ಮ ದೇವಸ್ಥಾನದ ಮುಂಭಾಗ ಶನಿವಾರನಡೆಯಲಿರುವ ಕೊಂಡೋತ್ಸವಕ್ಕೆ ಸಮಿತಿಯ ಯಜಮಾನರುಗಳ ನೇತೃತ್ವದಲ್ಲಿ ಭರದ ಸಿದ್ಧತೆಗಳು ಸಾಗಿವೆ.

ಫ್ಲೆಕ್ಸ್‌ಗಳ ಭರಾಟೆ: ಪಟ್ಟಣದಲ್ಲಿ ಸಿಡಿಹಬ್ಬಕ್ಕೆ ಸ್ವಾಗತ ಕೋರುವ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅಭಿಮಾನಿಗಳ ಫ್ಲೆಕ್ಸ್, ಬ್ಯಾನರ್, ನಾಮ ಫಲಕ ಗಳು ರಾರಾಜಿಸುತ್ತಿವೆ. ಎತ್ತರದ ಕಟೌಟ್ ನಿಲ್ಲಿಸಿ ಹಬ್ಬಕ್ಕೆ ಶುಭಕೋರುವ ನಾಮಪಲಕಗಳನ್ನು ಅನಂತರಾಂ ವೃತ್ತದಲ್ಲಿ ಹಾಕಲಾಗಿದೆ. ಡಾ.ಬಿ. ಅರ್.ಅಂಬೇಡ್ಕರ್ ಅವರ ಬೃಹತ್ ಕಟೌಟ್‌ನ್ನು ಅನಂತರಾಂ ವೃತ್ತದಲ್ಲಿ ನಿಲ್ಲಿಸಲಾಗಿದೆ. ಮಾಜಿ ಶಾಸಕ ಡಾ.ಕೆ.ಅನ್ನದಾನಿ ಅಭಿಮಾನಿಗಳು ಹಾಗೂ ಸಂಘ ಸಂಸ್ಥೆಗಳು ಶುಭಕೋರುವ ಕಟೌಟ್‌ಗಳೂ ಜನರನ್ನು ಸ್ವಾಗತಿಸುತ್ತಿವೆ.

ಅಂಗಡಿ ಮುಂಗಟ್ಟುಗಳ ಜೋಡಣೆ: ಜಾತ್ರೆ ಪ್ರಯುಕ್ತ ಅಂಗಡಿ ಮುಂಗಟ್ಟುಗಳ ಜೋಡಣೆ ಬಲು ಜೋರಾಗಿ ನಡೆದಿದೆ. ಮಕ್ಕಳು ಆಟಿಕೆ ವಸ್ತುಗಳು, ಹೊನಲು ಬೆಳಕಿನ ಪಂದ್ಯಾವಳಿಗಳು, ಕುಸ್ತಿ, ನಾಟಕ ಪ್ರದರ್ಶನಕ್ಕೆ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ.

ವಾಹನ ಸಂಚಾರ ನಿಯಂತ್ರಣಕ್ಕೆ ಕ್ರಮ: 

ಲಕ್ಷಾಂತರ ಜನರು ಭಾಗವಹಿಸುವ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಯಶವಂತ್‌ಕುಮಾರ್ ಸೂಕ್ತ ಕ್ರಮ ಕೈಗೊಂಡಿದ್ದಾರೆ. ಜನ ಹೆಚ್ಚಾಗಿ ಸೇರುವ ಪ್ರದೇಶಗಳಲ್ಲಿ ಜಾಗೃತಿ ಮೂಡಿಸುವ ನಾಮಫಲಕ ಅಳವಡಿಕೆ, ವಾಹನ ದಟ್ಟಣೆ ತಡೆಯಲು ಪಟ್ಟಣದ ನಾಲ್ಕು ಪ್ರಮುಖ ರಸ್ತೆಗಳಲ್ಲೂ ಬ್ಯಾರಿಕೇಡ್ ಹಾಕಿದ್ದು,ಪ್ರತ್ಯೇಕ ವಾಹನ ಪಾರ್ಕಿಂಗ್ ವ್ಯವಸ್ಥೆ, ಶಾಂತಿ ಸುವ್ಯವಸ್ಥೆಗೆ ಕ್ರಮ ಕೈಗೊಳ್ಳಲಾಗಿದೆ.

೭೦೦ಕ್ಕೂ ಹೆಚು ಪೊಲೀಸರ ನಿಯೋಜನೆ: 

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮಾರ್ಗದರ್ಶನದಲ್ಲಿ ೬೦೦ ಪೊಲೀಸರು, ೫ ಜನ ಡಿವೈಎಸ್ಪಿಗಳು, ೧೯ ಮಂದಿ ವೃತ್ತ ನಿರೀಕ್ಷಕರು, ೩೬ ಸಬ್ ಇನ್ಸ್‌ಪೆಕ್ಟರ್ ಗಳು, ೭೭ ಮಂದಿ ಸಹಾಯಕ ಸಬ್‌ಇನ್ಸ್ ಪೆಕ್ಟರ್‌ಗಳು ಸೇರಿದಂತೆ ಡಿಅರ್ ಮತ್ತು ಕೆಎಸ್‌ಆರ್‌ಪಿ ಸಿಬ್ಬಂದಿಯನ್ನು ಬಂದೋಬಸ್ತ್‌ಗಾಗಿ ನಿಯೋಜನೆ ಮಾಡಲಾಗಿದೆ ಎಂದು ಡಿವೈಎಸ್‌ಪಿ ಯಶವಂತ್ ಕುಮಾರ್ ಮಾಹಿತಿ ನೀಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

10 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

11 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

11 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

11 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

11 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

11 hours ago