Andolana originals

ಮಲ್ಲಳ್ಳಿ ಗ್ರಾಮಕ್ಕಿಲ್ಲ ಮೂಲ ಸೌಕರ್ಯ!

ಲಕ್ಷ್ಮೀಕಾಂತ್ ಕೊಮಾರಪ್ಪ

ಮಳೆಗಾಲದಲ್ಲಿ ಕತ್ತಲೆಯ ಬದುಕು; ಬೇಸತ್ತು ಗ್ರಾಮವನ್ನೇ ತೊರೆಯುತ್ತಿರುವ ಕೃಷಿಕರು

ಸೋಮವಾರಪೇಟೆ: ಅತಿ ಹೆಚ್ಚು ಪ್ರವಾಸಿಗರನ್ನು ಸೆಳೆಯುವ ತಾಲ್ಲೂಕಿನ ಮಲ್ಲಳ್ಳಿ ಜಲಪಾತ ನೋಡುಗರಿಗೆ ಸ್ವರ್ಗ. ಸೋಮವಾರಪೇಟೆ ನಗರದಿಂದ ೨೫ ಕಿ.ಮೀ. ದೂರದಲ್ಲಿರುವ ಈ ಜಲಪಾತಕ್ಕೆ ವರ್ಷವಿಡೀ ಪ್ರವಾಸಿಗರು ಆಗಮಿಸುತ್ತಾರೆ. ಇದರಿಂದ ಸ್ಥಳೀಯ ಪಂಚಾಯಿತಿಗೂ ಆದಾಯ ಬರುತ್ತಿದೆ. ಆದರೆ ಜಲಪಾತಕ್ಕೆ ಹೆಸರು ಬರುವಂತಾದ ಮಲ್ಲಳ್ಳಿ ಗ್ರಾಮವು ಇಂದಿಗೂ ಮೂಲಸೌಕರ್ಯಗಳಿಂದ ದೂರ ಉಳಿದಿದೆ.

ಮಲ್ಲಳ್ಳಿ ಜಲಪಾತದವರೆಗೆ ರಸ್ತೆಯನ್ನು ಅಭಿವದ್ಧಿಪಡಿಸಲಾಗಿದೆ, ಆದರೆ ಗ್ರಾಮಕ್ಕೆ ಕನಿಷ್ಠ ಕಚ್ಚಾ ರಸ್ತೆಯೂ ಇಲ್ಲ. ಮಳೆಗಾಲದಲ್ಲಿ ಈ ಗ್ರಾಮಕ್ಕೆ ವಾಹನಗಳ ಸಂಚಾರವಿಲ್ಲದೆ ದಿನಸಿ ವಸ್ತುಗಳನ್ನು ತಲೆ ಮೇಲೆ ಹೊತ್ತು ಒಂದೂವರೆ ಕಿ.ಮೀ. ದೂರ ನಡೆದು ಮನೆ ಸೇರಬೇಕಾದ ಪರಿಸ್ಥಿತಿ ಇದೆ.

ಮೂಲಸೌಕರ್ಯಗಳಿಲ್ಲದ ಕಾರಣ ಬಹುತೇಕ ಕುಟುಂಬಗಳು ಪಟ್ಟಣಕ್ಕೆ ವಲಸೆ ಹೋಗುತ್ತಿವೆ. ಅದರಲ್ಲೂ ಯುವಕ- ಯುವತಿಯರು ಉದ್ಯೋಗ ಅರಸಿ ನಗರ ಪ್ರದೇಶಕ್ಕೆ ವಲಸೆ ಹೋಗಿದ್ದಾರೆ. ಇನ್ನೊಂದೆಡೆ ಅಭಿವೃದ್ಧಿ ಕಾಣದ ಹಿನ್ನೆಲೆಯಲ್ಲಿ ಈ ಗ್ರಾಮಕ್ಕೆ ಹೆಣ್ಣು ಕೊಡಲು ಹಿಂದೇಟು ಹಾಕುತ್ತಿದ್ದಾರೆ. ಇದರಿಂದ ಎಷ್ಟೋ ಯುವಕರು ಮದುವೆಯಾಗದೆಯೇ ಉಳಿದಿದ್ದಾರೆ.

ರಾಜ್ಯ ಸರ್ಕಾರದಿಂದ ೩.೫೦ ಕೋಟಿ ರೂ. ಅನುದಾನದಲ್ಲಿ ಮಲ್ಲಳ್ಳಿ ಜಲಪಾತವನ್ನು ಅಭಿವೃದ್ಧಿಪಡಿಸಲಾಗಿದೆ. ಆದರೆ ಮಲ್ಲಳ್ಳಿ ಗ್ರಾಮಕ್ಕೆ ತೆರಳುವ ಒಂದೂವರೆ ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗೆ ಇದುವರೆಗೂ ನಯಾಪೈಸೆಯನ್ನೂ ನೀಡಿಲ್ಲ. ಇದ್ದ ೨೦ ಕುಟುಂಬಗಳಲ್ಲಿ ಈಗಾಗಲೇ ೧೨ ಕುಟುಂಬಗಳು ಗ್ರಾಮ ತೊರೆದು ಪಟ್ಟಣದಲ್ಲಿ ಬಾಡಿಗೆ ಮನೆಗಳಲ್ಲಿ ವಾಸಿಸುತ್ತಿವೆ.

ಜನಪ್ರತಿನಿಧಿಗಳು ಹಾಗೂ ಜಿಲ್ಲಾಡಳಿತದ ಇಚ್ಛಾಶಕ್ತಿಯ ಕೊರತೆಯಿಂದ ಮೂಲಸೌಕರ್ಯಗಳಿಂದ ವಂಚಿತವಾಗಿದೆ. ಮಲ್ಲಳ್ಳಿ ಜಲಪಾತಕ್ಕೆ ಮಂತ್ರಿಗಳು, ಹಿರಿಯ ಅಧಿಕಾರಿಗಳು ಹಲವಾರು ಬಾರಿ ಭೇಟಿ ನೀಡಿದ್ದಾರೆ. ಇತ್ತೀಚೆಗೆ ಸರಿಯಾದ ರಸ್ತೆಯಿಲ್ಲ ಎಂಬ ಕಾರಣಕ್ಕೆ ಜನಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು ಗ್ರಾಮಕ್ಕೆ ಭೇಟಿ ನೀಡಲು ಹಿಂದೇಟು ಹಾಕುತ್ತಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

” ಮಳೆಗಾಲದಲ್ಲಿ ಸರಿಯಾಗಿ ವಿದ್ಯುತ್ ಇರುವುದಿಲ್ಲ. ನಮ್ಮವರ ನೋವನ್ನು ಯಾರೂ ಕೇಳುತ್ತಿಲ್ಲ. ಬೈಕ್, ಕಾರುಗಳು ನಮ್ಮ ಗ್ರಾಮಕ್ಕೆ ಬರುವುದಿಲ್ಲ. ಮಳೆಗಾಲದಲ್ಲಿ ವಾಹನಗಳ ಸಂಚಾರವಿಲ್ಲ. ಇದರಿಂದ ದಿನಸಿ ವಸ್ತುಗಳನ್ನು ತಲೆ ಮೇಲೆ ಹೊತ್ತು ಒಂದೂವರೆ ಕಿ.ಮೀ. ಗ್ರಾಮದ ರಸ್ತೆಯಲ್ಲಿ ನಡೆದು ಮನೆ ಸೇರಬೇಕು.”

-ರಮೇಶ್, ಕೃಷಿಕರು, ಮಲ್ಲಳ್ಳಿ ಗ್ರಾಮ

” ಆಸ್ತಿ ಹಕ್ಕುಪತ್ರಗಳಿಲ್ಲದೆ ಕಾಫಿ ಮಂಡಳಿ, ತೋಟಗಾರಿಕೆ, ಕೃಷಿ ಇಲಾಖೆಗಳಿಂದ ಸೌಲಭ್ಯಗಳು ಸಿಗುತ್ತಿಲ್ಲ. ಎಲ್ಲಾ ಇಲಾಖೆಗಳು ಇತ್ತ ಗಮನಹರಿಸಬೇಕು. ಈಗ ಪರಿಸರ ಸೂಕ್ಷ್ಮವಲಯ ಸಿ ಮತ್ತು ಡಿ ಭೂಮಿ ನೆಪದಲ್ಲಿ ಕೃಷಿಕರಿಗೆ ಅನ್ಯಾಯ ಮಾಡಬಾರದು. ಆಸ್ತಿಯ ಹಕ್ಕು ಪತ್ರ ನೀಡದಿದ್ದರೆ ಸರ್ಕಾರದ ಸೌಲಭ್ಯಗಳಿಂದ ವಂಚಿತರಾಗುತ್ತೇವೆ. ಕಂದಾಯ ಇಲಾಖೆಯ ನಿಯಮಗಳನ್ನು ಸರಳೀಕರಣಗೊಳಿಸಿ ಆಸ್ತಿಪತ್ರಗಳನ್ನು ನೀಡಬೇಕು.”

-ಗಣೇಶ್, ಮಲ್ಲಳ್ಳಿ ಗ್ರಾಮ

 

 

ಆಂದೋಲನ ಡೆಸ್ಕ್

Recent Posts

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

18 mins ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

2 hours ago

ದೆಹಲಿಯಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ; ಅವಶೇಷಗಳಡಿ ಹಲವರು ಸಿಲುಕಿರುವ ಶಂಕೆ

ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…

3 hours ago

ಅಶ್ಲೀಲ ಕಮೆಂಟ್‌ ಪ್ರಕರಣ : ರಮ್ಯಾ ಕಾಲಿಗೆ ಬಿದ್ದ ದರ್ಶನ್ ಫ್ಯಾನ್ಸ್ ; ಆದರೂ ಇಲ್ಲ ಕ್ಷಮೆ ಎಂದ ನಟಿ

ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…

5 hours ago

ಬೆಳಗಿನ ಜಾವ ಸಿದ್ದಾಪುರ ಪಟ್ಟಣಕ್ಕೆ ಕಾಡಾನೆಗಳ ಎಂಟ್ರಿ: ಆತಂಕದಲ್ಲಿ ಜನತೆ

ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…

6 hours ago

ಸೋಮವಾರಪೇಟೆಯಲ್ಲಿ ಎಟಿಎಂ ದರೋಡೆಗೆ ಖದೀಮರ ಯತ್ನ

ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…

6 hours ago