Andolana originals

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದ್ದು, ಸುಮಾರು ೧೫೦ಕ್ಕೂ ಹೆಚ್ಚು ಉದ್ಯೋಗದಾತ ಕಂಪೆನಿಗಳು ಭಾಗಿಯಾಗಲಿವೆ.

ಈ ಬಗ್ಗೆ ಸ್ವತಃ ಕೇಂದ್ರ ಸಚಿವರೇ ಮಾಹಿತಿ ನೀಡಿದ್ದು, ದೇಶದ ಉದ್ದಗಲಕ್ಕೂ ಇರುವ ೧೫೦ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪೆನಿಗಳು ಉದ್ಯೋಗ ಮೇಳಕ್ಕೆ ಬರಲಿದ್ದು, ಈ ಭಾಗದ ಮೂರು ಸಾವಿರಕ್ಕೂ ಹೆಚ್ಚು ನಿರುದ್ಯೋಗಿ ಯುವ ಜನರಿಗೆ ಉದ್ಯೋಗ ಕೊಡಿಸುವ ಗುರಿ ಹೊಂದಿದ್ದೇವೆ ಎಂದು ತಿಳಿಸಿದ್ದಾರೆ. ‘ಮಂಡ್ಯ ಟು ಇಂಡಿಯಾ’ ಎನ್ನುವ ಘೋಷ ವಾಕ್ಯದೊಂದಿಗೆ ಉದ್ಯೋಗ ಮೇಳ ನಡೆಯು ತ್ತಿದ್ದು, ಮಂಡ್ಯದ ಇತಿಹಾಸದಲ್ಲಿಯೇ ಇದೊಂದು ಮೈಲುಗಲ್ಲು ಆಗಲಿದೆ. ರೈತಾಪಿ ಜನರ ಮಕ್ಕಳಿಗೆ ಉದ್ಯೋಗ ಕಲ್ಪಿಸಬೇಕು ಎನ್ನುವುದು ನನ್ನ ಮಹದಾಸೆಯಾಗಿದ್ದು, ಇದಕ್ಕಾಗಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಶುಕ್ರವಾರ ಮತ್ತು ಶನಿವಾರ ನಗರದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಬೆಳಿಗ್ಗೆ ೧೦ರಿಂದ ಸಂಜೆ ೬ ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಆಸಕ್ತ ಯುವ ಜನರು ಉದ್ಯೋಗ ಮೇಳದಲ್ಲಿ ಪಾಲ್ಗೊಂಡು ಈ ಅವ ಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವರು ಮನವಿ ಮಾಡಿದ್ದಾರೆ. ಪ್ರತಿದಿನವೂ ನನ್ನ ಮನೆಗೆ ಬರುವ ಅಸಂಖ್ಯಾತ ನಿರುದ್ಯೋಗಿ ಯುವ ಜನರು ಉದ್ಯೋಗ ಕೊಡಿಸಿ ಎಂದು ಕೇಳುತ್ತಾರೆ. ಅವರ ತಂದೆ-ತಾಯಿ ಮಕ್ಕಳ ಭವಿಷ್ಯಕ್ಕಾಗಿ ಕನಸು ಕಟ್ಟಿ ಕೊಂಡಿದ್ದಾರೆ.

ನಿತ್ಯವೂ ನೂರಾರು ಜನರು ನನ್ನ ಮನೆಯ ಬಳಿಗೆ ಬಂದಾಗ ನನ್ನ ಕೈಲಾದ ಸಹಾಯ ಮಾಡಿದ್ದೇನೆ. ಆದರೆ, ದೊಡ್ಡ ಪ್ರಮಾಣದಲ್ಲಿ ಉದ್ಯೋಗವಕಾಶ ಕಲ್ಪಿಸಲು ಸಾಧ್ಯವಾಗಿರಲಿಲ್ಲ. ಉದ್ಯೋಗ ಮೇಳದ ಮೂಲಕ ಸಾವಿರಾರು ಸಂಖ್ಯೆಯ ಯುವ ಜನರಿಗೆ ಉದ್ಯೋಗ ಸಿಗಲಿದೆ ಎಂದು ಕುಮಾರಸ್ವಾಮಿ ಅವರು ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಪ್ರತಿಭಾನ್ವಿತ ಯುವ ಜನರಿಗೆ ಕೊರತೆ ಇಲ್ಲ. ಉತ್ತಮ ವಿದ್ಯಾ ಸಂಸ್ಥೆಗಳು ಇದ್ದು, ಪ್ರತಿವರ್ಷ ಸಾಕಷ್ಟು ಯುವ ಜನರು ಉತ್ತೀರ್ಣ ರಾಗಿ ಕಾಲೇಜುಗಳಿಂದ ಹೊರಗೆ ಬರುತ್ತಿದ್ದಾರೆ.

ಇವರಿಗೆ ಆದಷ್ಟು ಉದ್ಯೋಗಾವಕಾಶ ಕಲ್ಪಿಸ ಬೇಕು ಎನ್ನುವುದು ನನ್ನ ಸಂಕಲ್ಪವಾಗಿದೆ ಎಂದು ಹೇಳಿದ್ದಾರೆ. ಮೇಕಾನ್, ಭಾರತೀಯ ಉಕ್ಕು ಪ್ರಾಧಿಕಾರ, ರಾಷ್ಟ್ರೀಯ ಖನಿಜಾಭಿವೃದ್ಧಿ ನಿಗಮ, ಲೈಲೋಡ್ಸ್ ಮೆಟಲ್ಸ್, ಭಾರತ್ ಹೆವಿ ಎಲೆಕ್ಟ್ರಿಕಲ್ಸ್, ಜಿಂದಾಲ್ ಸ್ಟೀಲ್ ಸೇರಿದಂತೆ ೧೫೦ಕ್ಕೂ ಪ್ರತಿಷ್ಠಿತ ಕಂಪೆನಿಗಳು ಉದ್ಯೋಗ ಮೇಳದಲ್ಲಿ ನೇರ ನೇಮಕಾತಿ ಮಾಡಿಕೊಳ್ಳುತ್ತಿವೆ. ದೇಶಾದ್ಯಂತ ಉದ್ಯೋಗ ಅವಕಾಶಗಳು ಲಭ್ಯವಿದ್ದು, ಈ ಅವಕಾಶವನ್ನು ಯುವ ಜನರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಚಿವರು ಕೋರಿದ್ದಾರೆ. ನನ್ನ ಸಚಿವಾಲಯದ ಉನ್ನತ ಅಧಿಕಾರಿಗಳು, ಮಂಡ್ಯ ಜಿಲ್ಲೆಯ ಉನ್ನತ ಹಾಗೂ ಎಲ್ಲಾ ಶ್ರೇಣಿಯ ಅಧಿಕಾರಿಗಳು ಉದ್ಯೋಗ ಮೇಳ ಯಶಸ್ಸಿಗಾಗಿ ಕೆಲಸ ಮಾಡುತ್ತಿದ್ದು, ಉದ್ಯೋಗ ಅರಸಿ ಬರುವ ಅಭ್ಯರ್ಥಿಗಳಿಗೆ ನಮ್ಮ ಸ್ವಯಂ ಸೇವಕರು, ಅಽಕಾರಿಗಳು ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ. ಕಂಪೆನಿಗಳ ಅಧಿಕಾರಿ ಗಳು ಅಭ್ಯರ್ಥಿಗಳ ವಿವರಗಳನ್ನು ಪರಿಸೀಲಿಸಿದ ನಂತರ ಅವರಿಗೆ ಸೂಕ್ತವಾದ, ಅರ್ಹವಾದ ಹುದ್ದೆಯನ್ನು ನೀಡುವ ವ್ಯವಸ್ಥೆ ಮಾಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

 

ಮಂಡ್ಯ ಜಿಲ್ಲೆಯಲ್ಲಿ ಪ್ರತಿಭೆ ಗಳಿಗೆ ಬರವಿಲ್ಲ. ಉತ್ತಮ ವಿದ್ಯಾಸಂಸ್ಥೆಗಳು ಜಿಲ್ಲೆ ಯಲ್ಲಿ ಇದ್ದು, ಪ್ರತಿ ವರ್ಷ ಸಾಕಷ್ಟು ಯುವಜನರು ಉತ್ತೀರ್ಣರಾಗಿ ಕಾಲೇಜು ಗಳಿಂದ ಹೊರಗೆ ಬರುತ್ತಿದ್ದಾರೆ. ಇವರಿಗೆ ಉದ್ಯೋಗಾವಕಾಶ ಕಲ್ಪಿಸಬೇಕು ಎನ್ನುವುದು ನನ್ನ ದೃಢ ಸಂಕಲ್ಪವಾಗಿದೆ. -ಎಚ್. ಡಿ. ಕುಮಾರಸ್ವಾಮಿ ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರು

 

andolana

Recent Posts

ಸೀಸನಲ್‌ ಫ್ಲೂ ಹೆಚ್ಚಳ : ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು : ರಾಜ್ಯದಲ್ಲಿ ಸೀಸನಲ್ ಫ್ಲೂ ಹೆಚ್ಚಳ ಆಗುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಡಿಸೆಂಬರ್, ಜನವರಿಯಿಂದ…

2 seconds ago

ಮ.ಬೆಟ್ಟ | ಅಪರಿಚಿತ ವಾಹನ ಡಿಕ್ಕಿ : ಜಿಂಕೆ ಸಾವು

ಹನೂರು : ಮಹದೇಶ್ವರ ಬೆಟ್ಟ ರಸ್ತೆಯಲ್ಲಿ ನಡೆದ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಜಿಂಕೆಯೊಂದು ರಸ್ತೆಯಲ್ಲಿಯೇ ಮೃತಪಟ್ಟಿರುವ ಘಟನೆ ಭಾನುವಾರ…

34 mins ago

ಹನೂರು | ಚಿನ್ನ ನಿಕ್ಷೇಪದ ಶಂಕೆ ; ಗುಡ್ಡವನ್ನೇ ಅಗೆದ ಕಿಡಿಗೇಡಿಗಳು

ಹನೂರು : ತಾಲ್ಲೂಕಿನ ದೊಡ್ಡಾಲತ್ತೂರು, ಅಜ್ಜೀಪುರ ಸುತ್ತಮುತ್ತಲೂ ಜಿಎಸ್‌ಐ ಅಧಿಕಾರಿಗಳು ಚಿನ್ನದ ನಿಕ್ಷೇಪ ಇರುವ ಬಗ್ಗೆ ಅಧ್ಯಯನಕ್ಕೆ ಮುಂದಾಗುತ್ತಿದ್ದಂತೆ ಚಿನ್ನದಾಸೆಗಾಗಿ…

46 mins ago

ಅರಮನೆ ಅಂಗಳದಲ್ಲಿ ಫಲಪುಷ್ಪ ಪ್ರದರ್ಶನ ಆರಂಭ : ವರ್ಣರಂಜಿತ ಚಾಲನೆ

ಮೈಸೂರು : ಕ್ರಿಸ್‌ಮಸ್ ಮತ್ತು ಹೊಸ ವರ್ಷದ ಸಂಭ್ರಮಕ್ಕೆ ಮುನ್ನುಡಿಯಾಗಿ ಅರಮನೆ ಫಲಪುಷ್ಪ ಪ್ರದರ್ಶನ ಭಾನುವಾರದಿಂದ ವರ್ಣರಂಜಿತವಾಗಿ ಆರಂಭಗೊಂಡಿದೆ. ಮೈಸೂರು…

49 mins ago

ಜೋಹಾನ್ಸ್‌ಬರ್ಗ್‌ನಲ್ಲಿ ಗುಂಡಿನ ದಾಳಿ : 10 ಮಂದಿ ಸಾವು, 10 ಜನರಿಗೆ ಗಾಯ

ಜೋಹಾನ್ಸ್‌ಬರ್ಗ್ : ದಕ್ಷಿಣ ಆಫ್ರಿಕಾದ ಜೋಹಾನ್ಸ್‌ಬರ್ಗ್‌ನ ಪಶ್ಚಿಮದಲ್ಲಿರುವ ಬೆಕರ್ಸ್‌ಡಾಲ್ ಪಟ್ಟಣದಲ್ಲಿ ಸಾಮೂಹಿಕ ಗುಂಡಿನ ದಾಳಿ ನಡೆದಿದೆ. ಈ ಸಾಮೂಹಿಕ ಗುಂಡಿನ…

54 mins ago

ಎಚ್.ಡಿ.ಕೋಟೆ | ಪಟ್ಟಣಕ್ಕೆ ಬಂದ ಚಿರತೆ : ಮೇಕೆ ಬಲಿ ; ಜನರಲ್ಲಿ ಆತಂಕ

ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್‌ ನಂಬರ್‌ 21ರ…

1 hour ago