Andolana originals

ಮುಂಗಾರು ಮಳೆ: ಅನಾಹುತ ತಡೆಗೆ ಅಗತ್ಯ ಸಿದ್ಧತೆ

ಭೇರ್ಯ ಮಹೇಶ್

ಕೆ.ಆರ್.ನಗರ-ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಮಳೆಯಿಂದ ಜೀವ ಹಾನಿ, ಫಸಲು ನಷ್ಟವಾದರೆ ಅಧಿಕಾರಿಗಳು ತಕ್ಷಣ ಸ್ಪಂದಿಸಲು ಸೂಚನೆ

ಕೆ.ಆರ್.ನಗರ : ಕೇರಳದ ಕರಾವಳಿಯಲ್ಲಿ ತೀವ್ರಗೊಂಡಿರುವ ಚಂಡ ಮಾರುತದಿಂದ ಆಗಾಗ್ಗೆ ಬೀಳುತ್ತಿರುವ ಮುಂಗಾರು ಮಳೆಗಾಲದಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಕೆ.ಆರ್ .ನಗರ ಮತ್ತುಸಾಲಿಗ್ರಾಮತಾಲ್ಲೂಕು ಗಳಲ್ಲಿ ತಾಲ್ಲೂಕು ಆಡಳಿತ ಹತ್ತು ಹಲವು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಅವಳಿ ತಾಲ್ಲೂಕಿನ ಆರು ಹೋಬಳಿಗಳ ಆಯಾಯ ಸ್ಥಳೀಯ ಗ್ರಾಮ ಲೆಕ್ಕಾಧಿಕಾರಿಗಳು, ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿರುವ ಎರಡೂ ತಾಲ್ಲೂಕುಗಳ ತಹಸಿಲ್ದಾರ್ ರರು ಮಳೆಗಾಲದಲ್ಲಿ ಮನೆ, ಫಸಲು, ಜೀವಹಾನಿಯಾಗದಂತೆ ಎಚ್ಚರ ವಹಿಸಿ, ಜನರಲ್ಲಿ ಜಾಗೃತಿ ಮೂಡಿಸಬೇಕು. ಒಂದು ವೇಳೆ ಏನಾದರೂ ಜೀವ ಹಾನಿ, ಫಸಲು ನಷ್ಟವಾದರೆ ತಕ್ಷಣ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕಂದಾಯ, ಸೆಸ್ಕ್, ಕೃಷಿ, ತೋಟಗಾರಿಕೆ, ಪಶುಪಾಲನೆ, ಆರೋಗ್ಯ, ಪೊಲೀಸ್ ಇಲಾಖೆಗಳು, ಅಗ್ನಿಶಾಮಕದಳ ಸಿಬ್ಬಂದಿ ಮಳೆ ಬೀಳುವ ಸಂದರ್ಭದಲ್ಲಿ ಎಚ್ಚರ ವಹಿಸಬೇಕೆಂದು ಸೂಚಿಸಿದ್ದಾರೆ. ಏನಾದರೂ ಗಂಭೀರ ಸಮಸ್ಯೆಯಾದರೆ ಕೆ.ಆರ್.ನಗರ ಕಂಟ್ರೋಲ್ ರೂಂ. ನಂಬರ್ ೦೮೨೨೩-೨೬೨೩೭೧ ಮತ್ತು ಸಾಲಿಗ್ರಾಮ ಕಂಟ್ರೋಲ್ ರೂಂ. ನಂಬರ್ ೦೮೨೨೩- ೨೮೩೮೩೩ಕ್ಕೆ ಸಾರ್ವಜನಿಕರು ಕರೆ ಮಾಡ ಬಹುದಾಗಿದೆ. ಇವುಗಳು ೨೪೭ ಕೆಲಸ ಮಾಡಲಿವೆ.

ಸೆಸ್ಕ್ ಇಲಾಖೆ : ಈಗಾಗಲೇ ಕೆ. ಆರ್. ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಸೆಸ್ಕ್‌ನ ಸಹಾಯಕ ಕಾರ್ಯಪಾಲಕ ಅಭಿಯಂತರರು ರೈತರಿಗೆ ಹಾಗೂ ಸಾರ್ವಜನಿಕರಿಗೆ ಹಲವು ಸಲಹೆ ಸೂಚನೆಗಳನ್ನು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಳೆ ಬೀಳುವ ಸಮಯದಲ್ಲಿ ಕಾಣಿಸಿಕೊಳ್ಳುವ ಗುಡುಗು- ಸಿಡಿಲಿನಿಂದಾಗುವ ಪ್ರಾಣಹಾನಿಯನ್ನು ತಡೆಯಲು ಸಾರ್ವಜನಿಕರು ಮುಂಜಾಗ್ರತೆ ವಹಿಸಬೇಕು. ಮಳೆ ಸುರಿಯುವಾಗ, ಜಮೀನು ಕೆಲಸ ಮಾಡುವಾಗ ಯಾವುದೇ ಕಾರಣಕ್ಕೂ ವಿದ್ಯುತ್ ಪೂರೈಕೆ ಮಾಡುವ ವಿದ್ಯುತ್ ಕಂಬದ ಹತ್ತಿರ ಹೋಗ ಬಾರದು ಮತ್ತು ಜಾನುವಾರುಗಳನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಬಾರದು ಎಂದು ಸಲಹೆ ನೀಡಿದ್ದಾರೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಜೋರು ಮಳೆ ಆಗುತ್ತಿದ್ದು, ಕಾವೇರಿ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಜನರು ನದಿಯ ಪಾತ್ರ ಕಡೆ ತೆರಳದಂತೆ ಸೂಚನಾ ಫಲಕ ಆಳವಡಿಸಲು ನೀರಾವರಿ ಇಲಾಖೆಗೆ ತಾಲ್ಲೂಕು ಆಡಳಿತ ಸೂಚನೆ ನೀಡಿದೆ. ಮೀನುಗಾರರು ಪ್ರವಾಹ ಸಂದರ್ಭದಲ್ಲಿ ನದಿಗೆ ಇಳಿಯಬಾರದು ಎಂದು ತಿಳಿಸಲಾಗಿದೆ. ಧಾರಾಕಾರವಾಗಿ ಸುರಿಯುವ ಮಳೆಗೆ ಕೆರೆ-ಕಟ್ಟೆಗಳು ಭರ್ತಿಯಾಗಿದ್ದರೆ ಅಂತಹ ಸಂದರ್ಭದಲ್ಲಿ ಕೆರೆ-ಕಟ್ಟೆಗಳಲ್ಲಿ ಈಜಲು ಹೋಗಬಾರದು, ನಾಲೆಗಳಿಗೆ ನೀರು ಹರಿಸುವ ಮೊದಲೇ ನೀರಾವರಿ ಇಲಾಖೆಯವರು ನಾಲೆ ಏರಿ ಪರಿಶೀಲನೆ ನಡೆಸಿ, ನೀರಿನ ರಭಸಕ್ಕೆ ಹೊಡೆದು ಹೋಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು ಎಂದು ಸುತ್ತೋಲೆ ಹೊರಡಿಸಲಾಗಿದೆ.

ರಸ್ತೆ ಬದಿಯಲ್ಲಿ ಹಾಗೂ ಶಾಲಾ-ಕಾಲೇಜುಗಳ ಆವರಣದಲ್ಲಿ ಒಣಗಿದ ಮರಗಳನ್ನು ಕೂಡಲೇ ತೆರವುಗೊಳಿಸಿ ಮುಂದಾಗುವ ಅನಾಹುತವನ್ನು ತಪ್ಪಿಸಲು ಅರಣ್ಯ ಇಲಾಖೆಗೆ ಸೂಚನೆಗಳನ್ನು ನೀಡಲಾಗಿದೆ.

ಆರೋಗ್ಯ ಇಲಾಖೆ ಸನ್ನದ್ಧ : ವಿಪರೀತವಾಗಿ ಸುರಿಯುತ್ತಿರುವ ಮಳೆಗೆ ಯಾವುದೇ ಸಾಂಕ್ರಾಮಿಕ ರೋಗ ಹರಡದಂತೆ ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಕಾರ್ಯ ಪ್ರವೃತ್ತಿಯಾಗುವಂತೆ ತಾಲ್ಲೂಕು ಆರೋಗ್ಯ ಇಲಾಖೆ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ತಾಲ್ಲೂಕು ಆರೋಗ್ಯಾಧಿಕಾರಿಗಳು ಸುತ್ತೋಲೆ ಹೊರಡಿಸಿದ್ದಾರೆ.

” ಕೆ.ಆರ್.ನಗರ ಮತ್ತು ಸಾಲಿಗ್ರಾಮ ಅವಳಿ ತಾಲ್ಲೂಕಿನಲ್ಲಿ ಮಳೆಯಿಂದ ಹಾನಿಯಾಗದಂತೆ ಜನಜಾನುವಾರನ್ನುರಕ್ಷಿಸಲು ಹತ್ತು ಹಲವು ಸಲಹೆ ಸೂಚನೆಗಳನ್ನು ಎಲ್ಲ  ಇಲಾಖೆಗಳ ಅಧಿಕಾರಿಗಳಿಗೆ ಸಭೆ ನಡೆಸಿ ತಿಳಿಸಲಾಗಿದೆ. ಮಳೆಗೆ ಮನೆಗಳು ಹಾನಿಯಾದರೆ ಕೂಡಲೇ ಕಂಟ್ರೋಲ್ ರೂಂ ಅಥವಾ ಸಂಬಂಧಿಸಿದ ಗ್ರಾಮ ಲೆಕ್ಕಾಧಿಕಾರಿಗಳಿಗೆ ತಿಳಿಸಬೇಕು.”

-ಜೆ.ಸುರೇಂದ್ರ ಮೂರ್ತಿ, ತಹಸಿಲ್ದಾರ್, ಕೆ.ಆರ್.ನಗರ.

” ಈಗಾಗಲೆ ಮಳೆಯಿಂದ ಸಂಭವಿಸುವ ಸಾಂಕ್ರಾಮಿಕ ರೋಗಗಳ ಬಗ್ಗೆ ಅವಳಿ ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯರುಗಳು, ಆಶಾ ಕಾರ್ಯಕರ್ತೆಯರ ಜೊತೆ ಸಭೆ ನಡೆಸಲಾಗಿದೆ. ಡೆಂಗ್ಯು ಮತ್ತಿತರರ ರೋಗಗಳನ್ನು ತಡೆಗಟ್ಟಲು ಗ್ರಾಮ ಪಂಚಾಯಿತಿ ಪಿಡಿಒಗಳಿಗೆ ಸ್ವಚ್ಛತೆ ಮತ್ತು ನೈರ್ಮಲ್ಯ ಬಗ್ಗೆ ಪತ್ರ ಬರೆಯಲಾಗಿದೆ.”

-ಡಾ.ಡಿ.ನಟರಾಜ್, ತಾಲ್ಲೂಕು ಆರೋಗ್ಯಾಧಿಕಾರಿ, ಕೆ.ಆರ್.ನಗರ ಮತ್ತು ಸಾಲಿಗ್ರಾಮ

ಆಂದೋಲನ ಡೆಸ್ಕ್

Recent Posts

ವೇಶ್ಯಾವಾಟಿಕೆ ನಡೆಸುತ್ತಿದ್ದ ಮಹಿಳೆಯ ಬಂಧನ: ಇಬ್ಬರ ರಕ್ಷಣೆ

ಕುಶಾಲನಗರ: ಮುಳ್ಳುಸೋಗೆಯಲ್ಲಿ ವೇಶ್ಯಾವಾಟಿಕೆ ಪ್ರಕರಣ ಬೇಧಿಸಿದ ಪೊಲೀಸರು ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ. ಸೆಲೆಕ್ಟ್ ಸಾಮಿಲ್ ಬಳಿಯ ಮನೆಯೊಂದನ್ನು ಬಾಡಿಗೆ ಪಡೆದ…

8 hours ago

ಎಲ್ಲೆಂದರಲ್ಲಿ ಹಳೇ ವಾಹನ ನಿಲ್ಲಿಸಿದ್ರೆ ಕಠಿಣ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ

ಬೆಂಗಳೂರು: ಎಲ್ಲೆಂದರಲ್ಲಿ ಹಳೆಯ ವಾಹನಗಳನ್ನು ನಿಲ್ಲಿಸಿದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಈ ಕುರಿತು ಮಾಧ್ಯಮಗಳೊಂದಿಗೆ…

8 hours ago

ಪ್ರೀಮಿಯಂ ಪೆಟ್ರೋಲ್‌ ದರ 2 ರೂ ಏರಿಕೆ

ನವದೆಹಲಿ: ಇರಾನ್‌ ಯುದ್ಧದ ಬಿಸಿ ಸವಾರರಿಗೆ ತಟ್ಟಿದೆ. ತೈಲ ಕಂಪನಿಗಳು ಪ್ರೀಮಿಯಂ ಪೆಟ್ರೋಲ್‌ ದರವನ್ನು 2 ರೂಗೆ ಏರಿಕೆ ಮಾಡಿದೆ.…

8 hours ago

ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬೈಕ್:‌ ಸವಾರ ಸಾವು

ಸುಂಟಿಕೊಪ್ಪ: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಿಂಬದಿ ಸವಾರ…

9 hours ago

ಚಿಕ್ಕಮಗಳೂರು| ಹೊತ್ತಿ ಉರಿಯುತ್ತಿರುವ ಶೋಲಾರಣ್ಯ: ಅಪರೂಪದ ಸಸ್ಯ ಸಂಪತ್ತು ನಾಶ

ಚಿಕ್ಕಮಗಳೂರು: ಬಿಸಿಲ ಬೇಗೆಗೆ ಅಪರೂಪದ ಶೋಲಾ ಹುಲ್ಲುಗಾವಲು ಹೊತ್ತಿ ಉರಿಯುತ್ತಿದೆ. ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಬರುವ ಶೃಂಗೇರಿಯ ಕೆರೆಕಟ್ಟೆ…

9 hours ago

ಇರಾನ್‌ ಮೇಲೆ ಅಮೇರಿಕಾ-ಇಸ್ರೇಲ್‌ ವೈಮಾನಿಕ ದಾಳಿ: ಇರಾನ್‌ ಗುಪ್ತಚರ ಸಚಿವ ಸಾವು

ಟೆಹರಾನ್:‌ ಇರಾನ್‌ ಮೇಲೆ ಅಮೇರಿಕಾ ಹಾಗೂ ಇಸ್ರೇಲ್‌ ಜಂಟಿ ದಾಳಿ ಮುಂದುವರಿಸಿದ್ದು, ಇರಾನ್‌ ಗುಪ್ತಚರ ಸಚಿವ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.…

9 hours ago