ಸರಗೂರು: ತಾಲ್ಲೂಕಿನ ಕೊತ್ತೇಗಾಲ ಗ್ರಾಮ ಮೂಲದ ಯುವ ಪ್ರತಿಭೆ ಮನ್ವಿತ್, ಕೃಷಿಕ ಕುಟುಂಬದಲ್ಲಿ ಜನಿಸಿ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಗುರುತನ್ನು ಮೂಡಿಸುತ್ತಿದ್ದಾರೆ. ಮೈಸೂರಿನ ರಂಗಾಯಣದ ‘ಸಂಚಲನ’ ರಂಗತಂಡದಲ್ಲಿ ಸೇರಿ ೧೨ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿ ನಟನಾ ಪಾಠ ಕಲಿತಿದ್ದಾರೆ.
೨೦೨೧ರಲ್ಲಿ ‘ಆಂಗರ್’ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ ಮನ್ವಿತ್, ನಂತರ ‘ಭಾರತದ ಪ್ರಜೆಗಳಾದ ನಾವು’ ಚಿತ್ರದಲ್ಲಿ ನಾಯಕನಾಗಿ ನಟಿಸಿದ್ದು, ಈ ಚಿತ್ರ ಸಾಮಾಜಿಕ ಸಂದೇಶ ನೀಡಿದ ಉತ್ತಮ ಚಿತ್ರವೆಂದು ಕರ್ನಾಟಕ ಸರ್ಕಾರದಿಂದ ಪ್ರಶಂಸೆಗೆ ಪಾತ್ರವಾಗಿದೆ. ‘ಸಂಜು’ ಚಿತ್ರದಲ್ಲಿ ಲವರ್ ಬಾಯ್ ಪಾತ್ರದ ಮೂಲಕ ಯುವಜನರಲ್ಲಿ ಅಪಾರ ಜನಪ್ರಿಯತೆ ಗಳಿಸಿದ್ದಾರೆ.
ಪ್ರಸ್ತುತ ಮನ್ವಿತ್ ಅವರ ಅಭಿನಯದ ‘ಹೈವೇ ನಂಬರ್ ೨೭೫’ (ಹಾರರ್), ‘ಡೆತ್ ಸರ್ಟಿಫಿಕೇಟ್’, ‘ಬೇಬಿ ೨೦೨೫’ ಹಾಗೂ ‘ಧ್ರುವನಕ್ಷತ್ರ’ ನಾಲ್ಕು ಕನ್ನಡ ಚಿತ್ರಗಳು ಬಿಡುಗಡೆಗೆ ಸಿದ್ಧವಾಗಿವೆ. ಜೊತೆಗೆ ತಮಿಳಿನ ‘ಕೊಪ್ಪಂ’ ಚಿತ್ರದಲ್ಲೂ ನಾಯಕನಾಗಿ ನಟಿಸಿದ್ದು, ಬಿಡುಗಡೆಯ ನಿರೀಕ್ಷೆಯಲ್ಲಿದ್ದಾರೆ. ಹಿಂದಿ ಚಿತ್ರರಂಗದಲ್ಲಿಯೂ ನಾಯಕನಾಗಿ ನಟಿಸಲು ಅವಕಾಶ ದೊರೆತಿದ್ದು, ಶೀಘ್ರದಲ್ಲೇ ಚಿತ್ರೀಕರಣ ಆರಂಭವಾಗಲಿದೆ.
ಗ್ರಾಮೀಣ ಪ್ರದೇಶದಿಂದ ಬಂದ ಚಿತ್ರನಟ ಮನ್ವಿತ್ ಅವರ ಸಾಧನೆಯನ್ನು ಕೊತ್ತೇಗಾಲ ಗ್ರಾಮದ ಜನರು ಮೆಚ್ಚಿ ಅಭಿನಂದಿಸಿದ್ದಾರೆ. ಗ್ರಾಮೀಣ ಹಿನ್ನೆಲೆಯಿಂದ ಬಂದ ಈ ಪ್ರತಿಭಾವಂತ ನಟ ಇನ್ನಷ್ಟು ಎತ್ತರಕ್ಕೆ ಏರಲಿ, ನಾಡಿನ ಹೆಮ್ಮೆ ಆಗಲಿ ಎಂಬುದು ಎಲ್ಲರ ಆಶಯವಾಗಿದೆ.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…