ಮಂಜು ಕೋಟೆ
ಇಂದು ಕೋಟೆಯಲ್ಲಿ ಸಮಾವೇಶ; ಬೃಹತ್ ವೇದಿಕೆ ನಿರ್ಮಾಣ; ಸಾವಿರಾರು ಜನರು ಸೇರುವ ನಿರೀಕ್ಷೆ; ಶಕ್ತಿ ಪ್ರದರ್ಶನಕ್ಕೆ ಮುಂದಾದ ಕೃಷ್ಣನಾಯಕ
ಎಚ್.ಡಿ.ಕೋಟೆ: ಕ್ಷೇತ್ರದಲ್ಲಿ ಮೂರು ವರ್ಷಗಳ ನಂತರ ಜಾ.ದಳ ಪಕ್ಷ ಬೃಹತ್ ಸಮಾವೇಶದ ಮೂಲಕ ಶಕ್ತಿಪ್ರದರ್ಶನಕ್ಕೆ ಮಾಡಲು ಮುಂದಾಗಿದ್ದು, ಕಾರ್ಯಕರ್ತರು,ಮುಖಂಡರು ಸಕಲ ಸಿದ್ಧತೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡಿದ್ದ ಜಾ.ದಳಕ್ಕೆ ಶುಕ್ರವಾರ ಪಟ್ಟಣದ ಸಂತೆ ಮೈದಾನ ದಲ್ಲಿ ನಡೆಯುವ ‘ಜನರೊಂದಿಗೆ ಜನತಾದಳ’ ಸಮಾವೇಶ ಕಾರ್ಯಕ್ರಮ ಚೈತನ್ಯ ನೀಡುವ ನಿರೀಕ್ಷೆ ಹೊಂದಲಾಗಿದೆ. ಜಾ.ದಳ ಮುಖಂಡ ಮತ್ತು ವಿಧಾನಸಭಾ ಕ್ಷೇತ್ರದ ಸಂಭಾವ್ಯ ಅಭ್ಯರ್ಥಿ ಕೆ.ಎಂ.ಕೃಷ್ಣನಾಯಕ ಅವರು ತಾಲ್ಲೂಕಿನಲ್ಲಿ ಪಕ್ಷದ ನೇತೃತ್ವ ವಹಿಸಿಕೊಂಡು ಪಕ್ಷದ ಸಂಘಟನೆ ದೃಷ್ಟಿಯಿಂದ ಅನೇಕ ಕಾರ್ಯಕ್ರಮಗಳನ್ನು, ಸಮಾವೇಶಗಳನ್ನು ನಡೆಸಲು ಮುಂದಾಗಿದ್ದು, ಕಾರ್ಯಕರ್ತರು ಮುಖಂಡರೊಡನೆ ಹಗಲಿರುಳು ಸಿದ್ಧತೆಯಲ್ಲಿ ತೊಡಗಿ ಕೊಂಡಿದ್ದಾರೆ.
ಈಗಾಗಲೇ ಒಂದು ತಿಂಗಳಿನಿಂದ ಈ ಸಮಾವೇಶದ ಯಶಸ್ವಿಗಾಗಿ ವಿವಿಧ ಸಮುದಾಯಗಳ ಕಾರ್ಯಕರ್ತರು, ಮುಖಂಡರ ಪೂರ್ವಭಾವಿ ಸಭೆ ನಡೆಸಿ, ಪ್ರತಿ ಗ್ರಾಮಕ್ಕೂ ಬಸ್ ಮತ್ತು ವಿವಿಧ ವಾಹನಗಳನ್ನು ಕಾರ್ಯಕರ್ತರು, ಮುಖಂಡರು ಮತ್ತು ಸಾರ್ವಜನಿಕರಿಗೆ ಒದಗಿಸುವ ಜೊತೆಗೆ ಅವರಿಗೆ ಊಟ ಮತ್ತು ಇನ್ನಿತರ ಉಪಚಾರಗಳನ್ನು ಒದಗಿಸಲು ಸಮಿತಿಗಳನ್ನು ರಚಿಸಿದ್ದಾರೆ.
ಪಟ್ಟಣ ಸೇರಿದಂತೆ ತಾಲ್ಲೂಕಿನ ಪ್ರಮುಖ ಸ್ಥಳಗಳಲ್ಲಿ ಬೃಹತ್ ಕಟೌಟ್‌ಗಳು, ಬ್ಯಾನರ್‌ಗಳನ್ನು ಅಳವಡಿಸಿ ಜಾ.ದಳಮಯ ಮಾಡಿದ್ದಾರೆ. ಪಟ್ಟಣದ ಸಂತೆ ಮೈದಾನದಲ್ಲಿ ಬೃಹತ್ ವೇದಿಕೆ ನಿರ್ಮಾಣ ಮಾಡಿ, ೧೦ ಸಾವಿರಕ್ಕೂ ಹೆಚ್ಚು ಜನರು ಕೂರಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮತ್ತು ಶಾಸಕರಾದ ಜಿ.ಡಿ.ಹರೀಶ್ ಗೌಡ, ಮತ್ತಿತರ ನಾಯಕರನ್ನು ಅದ್ಧೂರಿಯಾಗಿ ಸ್ವಾಗತಿಸಿ, ಮೆರವಣಿಗೆಯಲ್ಲಿ ವೇದಿಕೆಗೆ ಕರೆತರಲು ಕಾರ್ಯಕರ್ತರು, ಮುಖಂಡರು ಸಿದ್ಧತೆ ನಡೆಸಿದ್ದಾರೆ.
ಕಾರ್ಯಕರ್ತರಲ್ಲಿ ಹುಮ್ಮಸ್ಸು: ಜಾ.ದಳ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಎಚ್.ಡಿ.ಕೋಟೆ ಕ್ಷೇತ್ರಕ್ಕೆ ಎರಡನೇ ಬಾರಿಗೆ ಭೇಟಿ ನೀಡುತ್ತಿದ್ದಾರೆ. ೨ ತಿಂಗಳ ಹಿಂದೆ ಹುಲಿ ದಾಳಿಯಿಂದ ಮೃತಪಟ್ಟ ಮೂವರ ಕುಟುಂಬಗಳು ಹಾಗೂ ಗಾಯಗೊಂಡಿದ್ದ ಒಂದು ಕುಟುಂಬಕ್ಕೆ ಸಾಂತ್ವನ ಹೇಳಿ, ಪರಿಹಾರ ನೀಡಿ ರಾಜ್ಯ ಸರ್ಕಾರ ಮತ್ತು ಶಾಸಕ ಅನಿಲ್ ಚಿಕ್ಕಮಾದು ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಪಕ್ಷದ ಸಂಘಟನೆಗೆ ಕಾರ್ಯಕರ್ತರು ಮತ್ತು ಮುಖಂಡರ ಸಭೆ ನಡೆಸಿದ್ದರು. ಈಗ ಮತ್ತೊಮ್ಮೆ ಕೋಟೆಯಲ್ಲಿ ನಡೆಯುವ ಜಾ.ದಳ ಸಮಾವೇಶದಲ್ಲಿ ಭಾಗವಹಿಸುತ್ತಿರುವುದು ಕಾರ್ಯಕರ್ತರು ಮುಖಂಡರಲ್ಲಿ ಹುಮ್ಮಸ್ಸು ಮೂಡಿಸಿದೆ.
” ಕ್ಷೇತ್ರದಲ್ಲಿ ಹತ್ತು ವರ್ಷಗಳ ಕಾಲ ಸಮಾಜ ಸೇವೆ ಮೂಲಕ ಜನರ ಕಷ್ಟಗಳಲ್ಲಿ ಭಾಗಿಯಾಗಿ ಕ್ಷೇತ್ರದ ಮಗನಾಗಿ ಕೆಲಸ ನಿರ್ವಹಿಸುತ್ತಾ ಬಂದಿರುವ ನನಗೆ ಜನಸಾಮಾನ್ಯರಿಗೆ ಸ್ಪಂದಿಸುವ ನಿಟ್ಟಿನಲ್ಲಿ ಸಮಾ ವೇಶ ನಡೆಸುವ ಅವಕಾಶ ಬಂದಿದೆ. ಇದು ಪಕ್ಷದ ಬಲವರ್ಧನೆಗೆ ಸಹಕಾರಿಯಾಗಲಿದೆ. ೨೦ ಗ್ರಾಮಗಳ ವ್ಯಾಪ್ತಿಯಿಂದ ಕಾಂಗ್ರೆಸ್ ಪಕ್ಷದ ಸಾವಿರಾರು ಮುಖಂಡರು, ಕಾರ್ಯಕರ್ತರು ಜಾ.ದಳಕ್ಕೆ ಸೇರ್ಪಡೆಯಾಗಲಿದ್ದಾರೆ. ಅಲ್ಲದೆ, ವಿವಿಧ ಸಮುದಾ ಯಗಳ ಗಣ್ಯರಿಗೆ ಸನ್ಮಾನ, ಜಾ.ದಳ ಸದಸ್ಯತ್ವ ನೋಂದಣಿ ಕಾರ್ಯಕ್ರಮದೊಂದಿಗೆ ಹಬ್ಬದ ರೀತಿಯಲ್ಲಿ ಅರ್ಥ ಪೂರ್ಣವಾಗಿ ಸಮಾವೇಶವನ್ನು ಪಕ್ಷದ ವರಿಷ್ಠರಾದ ಸಾ.ರಾ.ಮಹೇಶ್, ಜಿ.ಡಿ.ಹರೀಶ್ ಗೌಡ, ಅಶ್ವಿನ್‌ಕುಮಾರ್, ಇನ್ನಿತರರ ಮಾರ್ಗದರ್ಶ ನದಲ್ಲಿ ಕಾರ್ಯಕರ್ತರು, ಮುಖಂಡರ ಜತೆ ಸೇರಿ ನಡೆಸು ತ್ತಿದ್ದೇವೆ.”
ಕೆ.ಎಂ.ಕೃಷ್ಣನಾಯಕ, ಸಮಾವೇಶದ ರೂವಾರಿ, ಜಾ.ದಳ ಮುಖಂಡ
ಭೇರ್ಯ ಮಹೇಶ್ ಡಿಜಿಟಲ್ ಗ್ರಂಥಾಲಯ, ಸ್ವಚ್ಛತೆ, ನೈರ್ಮಲ್ಯ, ನೀರು ಸರಬರಾಜು, ಇನ್ನಿತರ ವಿಭಾಗಗಳಲ್ಲಿ ವಿಶೇಷ ಸಾಧನೆ ಭೇರ್ಯ: ಭಾರತದ ನಿಜವಾದ…
ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಅಂತರ ರಾಜ್ಯ ವಾಹನಗಳು, ಪ್ರವಾಸಿ ವಾಹನಗಳು ಹೆಚ್ಚಾಗಿ ಸಂಚರಿಸುವ ಹಾಗೂ ಪ್ರಮುಖ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುವ ನಗರದ…
ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ ಕ್ಷೇತ್ರದಲ್ಲಿ ಮಕ್ಕಳ ಸಾಹಿತ್ಯ ನಿರ್ಲಕ್ಷಕ್ಕೆ ಒಳಗಾದ ಹಾಗೆಯೇ ರಂಗಭೂಮಿಯಲ್ಲೂ ‘ಮಕ್ಕಳ ರಂಗಭೂಮಿ’ ನಿರ್ಲಕ್ಷ್ಯಕ್ಕೆ ಒಳಗಾಗಿದೆ. ನಗರಗಳಲ್ಲಿನ…
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…