Andolana originals

ಓದುಗರ ಪತ್ರ: ಕೃಷ್ಣರಾಜಸಾಗರ ಘನತೆಗೆ ಧಕ್ಕೆ ಬಾರದಿರಲಿ

ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಪರಿಕಲ್ಪನೆಗೆ ತದ್ವಿರುದ್ಧವಾಗಿ ಕೃಷ್ಣರಾಜಸಾಗರದಲ್ಲಿ ಅಮ್ಯೂಸ್‌ಮೆಂಟ್ ಪಾರ್ಕ್ ನಿರ್ಮಿಸಿ ಕೆಆರ್‌ಎಸ್ ಘನತೆಗೆ ಧಕ್ಕೆ ತರುವುದು ಬೇಡ ಎಂದು ಪ್ರೊ.ಬಿ.ಆರ್.ಚಂದ್ರಶೇಖರ್  ಅವರು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಅವರಿಗೆ ಪತ್ರ ಬರೆದಿರುವುದು ಶ್ಲಾಘನೀಯ.

ಈ ಯೋಜನೆ ಕೈಗೊಳ್ಳುವುದರಿಂದ ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೆ ಭಾರೀ ಪ್ರಮಾಣದ ತ್ಯಾಜ್ಯ ಸಂಗ್ರಹವಾಗಿ ಪ್ರತಿಕೂಲ ಪರಿಣಾಮ ಉಂಟಾಗಿ, ಕೆಆರ್‌ಎಸ್ ಕಸದ ತೊಟ್ಟಿಯಾಗಿ ಮಾರ್ಪಡುವುದರಲ್ಲಿ ಅನುಮಾನವೇ ಇಲ್ಲ. ಈ ಯೋಜನೆಗೆ ಸಾರ್ವಜನಿಕ ವಲಯದಲ್ಲಿ ಹಾಗೂ ರೈತ ಸಂಘಟನೆಗಳಿಂದ ತೀವ್ರ ವಿರೋಧ ವ್ಯಕ್ತವಾಗಿದ್ದರೂ ಸರ್ಕಾರ ಈ ಯೋಜನೆಯನ್ನು ಪ್ರಾರಂಭಿಸಲು ಆಸಕ್ತಿ ತೋರಿಸುತ್ತಿರುವುದು ಒಳ್ಳೆಯ ಬೆಳವಣಿಗೆಯಲ್ಲ. ಕೃಷ್ಣರಾಜಸಾಗರ ಜಲಾಶಯ ಹಳೇ ಮೈಸೂರು ಭಾಗದ ಜನರ ಜೀವನಾಡಿಯಾಗಿದೆ. ಜೊತೆಗೆ ಸಾರ್ವಜನಿಕರ ವ್ಯಾಪಕ ವಿರೋಧ ಇರುವುದರಿಂದ ಸರ್ಕಾರ ಈ ಯೋಜನೆಯನ್ನು ಕೈಬಿಡುವುದು ಒಳಿತು

– ಬೆಸಗರಹಳ್ಳಿ ರವಿ ಪ್ರಸಾದ್, ಮೈಸೂರು

ಆಂದೋಲನ ಡೆಸ್ಕ್

Recent Posts

ʼದಳಪತಿʼ ವಿಜಯ್‌ ಸೆಳೆಯಲು ಬಿಜೆಪಿ ತಂತ್ರ : ಡಿಸಿಎಂ ಸ್ಥಾನದ ಜತೆಗೆ 80 ಸ್ಥಾನದ ಆಫರ್‌!

ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್‌ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು…

6 hours ago

ತಂಪೆರೆದ ಮಳೆ ; ಕೊಡಗು ಸೇರಿದಂತೆ ರಾಜ್ಯದ ಹಲವೆಡೆ ಮಳೆ

ಮೈಸೂರು : ಜನರು ವಿಪರೀತ ಸೆಕೆಯಿಂದಾಗಿ ತತ್ತರಿಸಿ ಹೋಗಿರುವ ನಡುವೆ ಕೆಲ ಜಿಲ್ಲೆಗಳಲ್ಲಿ ಇಂದು(ಮಾರ್ಚ್.‌15) ಸಂಜೆ ಅಕಾಲಿಕವಾಗಿ ಮಳೆ ಸುರಿದು…

6 hours ago

ಮಂಡ್ಯ | ನಾಲೆ ಅಭಿವೃದ್ಧಿಗೆ 100 ಕೋಟಿ ಅನುದಾನ ; ಶಾಸಕ ರವಿಕುಮಾರ್‌

ಮಂಡ್ಯ : ಮಂಡ್ಯ ವಿಧಾನಸಭಾ ಕ್ಷೇತ್ರ ಅಭಿವೃದ್ಧಿಗೆ ಸಮಗ್ರ ಯೋಜನೆ ರೂಪಿಸಲಾಗಿದ್ದು, ಬಸರಾಳು ಭಾಗದ ಹೇಮಾವತಿ ನಾಲೆ ಅಭಿವೃದ್ಧಿಗೆ 350…

7 hours ago

ಆದಿಚುಂಚನಗಿರಿ ಶ್ರೀಗಳ ನಡೆ ದಾರಿ ತಪ್ಪುತ್ತಿದೆ ಹೇಳಿಕೆ : ಕ್ಷೆಮೆಯಾಚಿಸಿದ ಶಾಸಕ ರಮೇಶ್‌ ಬಂಡಿಸಿದ್ದೇಗೌಡ

ಮಂಡ್ಯ : ನಾನು ಯಾವಾಗ ಮಾತನಾಡಿದರೂ ವಿವಾದ ಆಗುತ್ತೆ. ನನ್ನ ಮಾತಿನಿಂದ ನೋವಾಗಿದ್ದರೆ, ಡಾ.ನಿರ್ಮಲಾನಂದನಾಥ ಸ್ವಾಮೀಜಿ ಅವರ ಕ್ಷಮೆ ಯಾಚಿಸುತ್ತೇನೆ…

7 hours ago

ಎಚ್‌.ಡಿ.ಕೋಟೆ | ಬೈಕುಗಳ ನಡುವೆ ಡಿಕ್ಕಿ : ಓರ್ವ ಸಾವು

ಎಚ್.ಡಿ.ಕೋಟೆ : ಎರಡು ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸಾವಿಗೀಡಾಗಿರುವ ಘಟನೆ ತಾಲ್ಲೂಕಿನಲ್ಲಿ ನಡೆದಿದೆ. ತಾಲ್ಲೂಕಿನ ಹೆರಿಗೆ…

7 hours ago

ಭೀಕರ ಅಪಘಾತ : ಮೂವರು ಪೊಲೀಸ್ ಅಧಿಕಾರಿಗಳು ಸಾವು ; ಸ್ಥಳಕ್ಕೆ ಗೃಹ ಸಚಿವರ ಭೇಟಿ

ಚಿತ್ರದುರ್ಗ : ಚಳ್ಳಕೆರೆ ಸಮೀಪದ ಹೆಗ್ಗೆರೆ ಗೇಟ್ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ಪೊಲೀಸ್ ಅಧಿಕಾರಿಗಳು ಮೃತಪಟ್ಟಿದ್ದಾರೆ. ಇಬ್ಬರು…

7 hours ago