Andolana originals

ಮಾಂದಲ ಪಟ್ಟಿಗೆ ಶೀಘ್ರದಲ್ಲೇ ಅಭಿವೃದ್ಧಿ ಭಾಗ್ಯ..!

ನವೀನ್ ಡಿಸೋಜ

ಒಂದು ಜಿಲ್ಲೆ – ಒಂದು ತಾಣ ಯೋಜನೆಯಡಿ ಕಾಯಕಲ್ಪ ; ಮೂಲ ಸೌಕರ್ಯಗಳ ಅಭಿವೃದ್ಧಿಗೆ ಚಿಂತ

ಮಡಿಕೇರಿ: ಜಿಲ್ಲೆಯ ಪ್ರಸಿದ್ಧ ಪ್ರವಾಸಿತಾಣಗಳಲ್ಲೊಂದಾದ ಮಾಂದಲಪಟ್ಟಿಯಲ್ಲಿ ಪ್ರವಾಸೋದ್ಯಮ ಪೂರಕ ಅಭಿವೃದ್ಧಿಗೆ ಯೋಜನೆ ಸಿದ್ಧವಾಗುತ್ತಿದ್ದು, ಸದ್ಯದಲ್ಲಿಯೇ ರಸ್ತೆ ಸೇರಿದಂತೆ ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ.

ಕೊಡಗಿನಲ್ಲಿ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ತಾಣಗಳಲ್ಲಿ ಮಡಿಕೇರಿ ಸಮೀಪದ ಗಾಳಿಬೀಡು ಪಂಚಾಯಿತಿ ವ್ಯಾಪ್ತಿಯ ಮಾಂದಲಪಟ್ಟಿ ಕೂಡ ಒಂದಾಗಿದೆ. ಚಲನಚಿತ್ರವೊಂದರ ಶೂಟಿಂಗ್ ನಡೆದ ಬಳಿಕ ಮುಗಿಲು ಪೇಟೆ ಎಂಬ ಹೆಸರಿನಿಂದಲೂ ಕರೆಯಲ್ಪಡುವ ಮಾಂದಲಪಟ್ಟಿಯು ರಸ್ತೆ ಸಮಸ್ಯೆ, ಬಾಡಿಗೆ ಜೀಪುಗಳ ಕಿರಿಕಿರಿಯಿಂದ ಆಗಿಂದಾಗ್ಗೆ ಸುದ್ದಿಯಲ್ಲಿರುತ್ತದೆ. ಮೂಲ ಸೌಲಭ್ಯವಿಲ್ಲದ ಈ ಸುಂದರ ಪ್ರಾಕೃತಿಕ ತಾಣವನ್ನು ಒಂದು ಜಿಲ್ಲೆ – ಒಂದು ತಾಣ ಯೋಜನೆಯಡಿ ಗುರುತಿಸಲಾಗಿದ್ದು, ಸದ್ಯದಲ್ಲಿಯೇ ಅಭಿವೃದ್ಧಿ ಕಾರ್ಯಗಳು ಆರಂಭವಾಗಲಿವೆ.

ಮಾಂದಲಪಟ್ಟಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದ್ದು, ಇದಕ್ಕಾಗಿ ಕ್ರಿಯಾಯೋಜನೆ ಸಿದ್ಧಪಡಿಸಲು ಕ್ರಮ ಕೈಗೊಂಡಿದೆ. ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಅಭಿವೃದ್ಧಿಪಡಿಸಬೇಕಾಗಿರುವ ಪ್ರವಾಸಿ ಸೌಲಭ್ಯಗಳ ಕುರಿತು ಯೋಜನೆ ರೂಪಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ ಅನಿತಾ ಭಾಸ್ಕರ್ ತಿಳಿಸಿದ್ದಾರೆ.

ಮಾಂದಲಪಟ್ಟಿ ಮಡಿಕೇರಿ ಹೊರವಲಯದ ಗಾಳಿಬೀಡು ಗ್ರಾ.ಪಂ. ವ್ಯಾಪ್ತಿಗೆ ಒಳಪಡುತ್ತದೆ. ಆದರೆ ಇದು ಅರಣ್ಯ ಇಲಾಖೆಗೆ ಒಳಪಡುವ ಸ್ಥಳವಾದ್ದರಿಂದ ಅಲ್ಲಿ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲು ಪಂಚಾಯ್ತಿಗೆ ಸಾಧ್ಯವಿರಲಿಲ್ಲ. ಆದರೆ ಇತ್ತೀಚೆಗೆ ನಡೆಸಿದ ಸರ್ವೆಯಿಂದ ಮಾಂದಲಪಟ್ಟಿ ಟಿಕೆಟ್ ಕೌಂಟರ್ ಜಂಕ್ಷನ್ ಇರುವ ಪ್ರದೇಶ ಅರಣ್ಯ ಇಲಾಖೆಗೆ ಒಳಪಡುವುದಿಲ್ಲ ಎಂದು ತಿಳಿದು ಬಂದಿದ್ದು, ಅಲ್ಲಿ ಈಗ ಪಂಚಾಯಿತಿಯಿಂದ ಮೂಲ ಸೌಕರ್ಯ ಕಲ್ಪಿಸುವ ನಿಟ್ಟಿನಲ್ಲಿ ಚಿಂತನೆ ನಡೆದಿದೆ. ಇದಕ್ಕಾಗಿ ಕ್ರಿಯಾ ಯೋಜನೆಯೂ ಸಿದ್ಧವಾಗಿದೆ. ಪಂಚಾಯಿತಿಯಿಂದ ೧.೩ ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಪ್ರವಾಸೋದ್ಯಮ ಇಲಾಖೆ ಶಿಫಾರಸು ಮಾಡಿದೆ.

ಮಾಂದಲಪಟ್ಟಿ ತಾಣ ಅರಣ್ಯ ಇಲಾಖೆ ವ್ಯಾಪ್ತಿಗೆ ಒಳಪಡುವುದರಿಂದ ಅಲ್ಲಿ ರಸ್ತೆ, ವ್ಯೂವ್ ಪಾಂಯಿಂಟ್, ಶೌಚಾಲಯ ಮುಂತಾದ ಯಾವುದೇ ಸೌಲಭ್ಯವನ್ನು ಕಲ್ಪಿಸಬೇಕಾದರೆ ಅದು ಅರಣ್ಯ ಇಲಾಖೆಯಿಂದಲೇ ಆಗಬೇಕಿದೆ. ಹೀಗಾಗಿ ಅರಣ್ಯ ಇಲಾಖೆ ಜತೆ ಶಾಸಕರು ಚರ್ಚೆ ನಡೆಸಿದ್ದು, ಅಂದಾಜು ೩ ಕೋಟಿ ರೂ. ವೆಚ್ಚದಲ್ಲಿ ರಸ್ತೆ ಸೇರಿದಂತೆ ನಾನಾ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಯೋಜಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿದ್ದಾರೆ.

” ಮಾಂದಲಪಟ್ಟಿಗೆ ಪ್ರತಿ ವರ್ಷ ೩೦ ರಿಂದ ೪೦ ಲಕ್ಷದಷ್ಟು ಪ್ರವಾಸಿಗರು ಭೇಟಿ ನೀಡುತ್ತಾರೆ. ಆದರೆ ಈ ತಾಣಕ್ಕೆಸಂಪರ್ಕ ಕಲ್ಪಿಸುವ ಮತ್ತು ಒಳಭಾಗದ ರಸ್ತೆಗಳೇ ಸರಿಯಿಲ್ಲದ ಕಾರಣ, ಇಲ್ಲಿ ಪ್ರವಾಸಿಗರು ಜೀಪ್ಸಫಾರಿಯನ್ನೇ ಅವಲಂಬಿಸಬೇಕಿದೆ. ಇಂತಹ ಸಂದರ್ಭಗಳಲ್ಲಿ ಕೆಲವು ಜೀಪ್ ಚಾಲಕರು ಮತ್ತು ಪ್ರವಾಸಿಗರ ನಡುವೆ ವಾಗ್ವಾದ, ಘರ್ಷಣೆಗಳು ನಡೆದಿವೆ. ಇಂತಹ ಘಟನೆಗಳು ಕೊಡಗು ಪ್ರವಾಸೋದ್ಯಮದ ಮೇಲೆ ನೇರ ಪರಿಣಾಮ ಬೀರುತ್ತವೆ. ಇದಲ್ಲದೆ ಅಲ್ಲಿ ಮೂಲ ಸೌಲಭ್ಯಗಳ ಕೊರತೆಯೂ ಇದೆ, ಹೀಗಾಗಿ ಮಾಂದಲಪಟ್ಟಿ ಅಭಿವೃದ್ಧಿ ಕೊಡಗು ಪ್ರವಾಸೋದ್ಯಮ ಬೆಳವಣಿಗೆಯ ದೃಷ್ಟಿಯಿಂದ ಅನಿವಾರ್ಯವಾಗಿದೆ.”

” ಮಾಂದಲಪಟ್ಟಿ ಪ್ರವಾಸಿ ತಾಣಕ್ಕೆ ಅತಿ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಾರೆ. ಹೀಗಾಗಿ ಈತಾಣವನ್ನು ಒಂದು ಜಿಲ್ಲೆ ಒಂದುತಾಣ ಯೋಜನೆಯಡಿ ಅಭಿವೃದ್ಧಿಪಡಿಸಲು ಗುರುತಿಸಲಾಗಿದೆ. ಪ್ರವಾಸೋದ್ಯಮ ಇಲಾಖೆ ಮತ್ತು ಗ್ರಾಮ ಪಂಚಾಯಿತಿಯಿಂದಲೂ ಅಭಿವೃದ್ಧಿ ಕೆಲಸಗಳನ್ನು ಕೈಗೊಳ್ಳಲಿದ್ದು, ಒಳಭಾಗದ ರಸ್ತೆ,ಮೂಲ ಸೌಕರ್ಯ ಅಭಿವೃದ್ಧಿಗೆ ಅರಣ್ಯ ಇಲಾಖೆ ಚಿಂತನೆ ನಡೆಸಿದೆ.”

ಅನಿತಾ ಭಾಸ್ಕರ್, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕಿ.

ಆಂದೋಲನ ಡೆಸ್ಕ್

Recent Posts

ಮೈಸೂರು ಸೇರಿದಂತೆ 4ಜಿಲ್ಲೆಗಳಲ್ಲಿ ಮೂರು ದಿನ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮೂನ್ಸೂಚನೆ

ಮೈಸೂರು : ಮೈಸೂರು ಸೇರಿದಂತೆ ದಕ್ಷಿಣ ಒಳನಾಡಿನ ನಾಲ್ಕು ಜಿಲ್ಲೆಗಳಲ್ಲಿ ಡಿ.31ರಿಂದ ಎರಡು ದಿನ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ…

4 hours ago

ಕೇಂದ್ರ ಬಜೆಟ್‌ | ನಾಳೆ ಆರ್ಥಿಕ ತಜ್ಞರ ಭೇಟಿ ಮಾಡಲಿರುವ ಮೋದಿ

ಹೊಸದಿಲ್ಲಿ : ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಆರ್ಥಿಕ ತಜ್ಞರು…

5 hours ago

ಗಗನಚುಕ್ಕಿ | ಕಾಡಾನೆ ದಾಳಿಗೆ ಸ್ಟೀಲ್‌ ಕಂಬಿಗಳು ನಾಶ

ಮಳವಳ್ಳಿ : ತಾಲ್ಲೂಕಿನ ಗಗನಚುಕ್ಕಿ ಜಲಪಾತದ ಆವರಣಕ್ಕೆ ನುಗ್ಗಿದ್ದ ಕಾಡಾನೆಗಳು ಪ್ರವಾಸಿಗರು ಜಲಪಾತ ವೀಕ್ಷಣೆಗೆ ಇಳಿಯುವ ಎರಡು ಕಡೆಗಳಲ್ಲೂ ಹಾಕಲಾಗಿದ್ದ…

5 hours ago

ಮೈಸೂರು | ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಪ್ರಕಟ ; ಬೆಟ್ಟಕ್ಕಿಲ್ಲ ಪ್ರವೇಶ?

ಮೈಸೂರು : ಇನ್ನೇನು ಹೊಸ ವರ್ಷಾಚರಣೆಗೆ ಕೆಲವೇ ದಿನಗಳು ಬಾಕಿ ಇದೆ. ಆದ್ದರಿಂದ ಸಾರ್ವಜನಿಕ ಹಿತದೃಷ್ಟಿಯಿಂದ ಮೈಸೂರು ನಗರ ಪೊಲೀಸ್‌…

5 hours ago

ಕೋಗಿಲು ಕಲಹ | ಅರ್ಹರಿಗೆ ಪರ್ಯಾಯ ಮನೆ ಹಂಚಿಕೆ ; ಸಿಎಂ ಘೋಷಣೆ

ಬೆಂಗಳೂರು : ಬೆಂಗಳೂರಿನ ಕೋಗಿಲು ಬಡಾವಣೆಯಲ್ಲಿ ಸೂರು ಕಳೆದುಕೊಂಡವರಿಗೆ ಬೈಯ್ಯಪ್ಪನಹಳ್ಳಿಯಲ್ಲಿ ಪರ್ಯಾಯ ಮನೆ ಹಂಚಿಕೆ ಮಾಡಲು ಸಿಎಂ ಸಿದ್ದರಾಮಯ್ಯ ತೀರ್ಮಾನಿಸಿದ್ದಾರೆ.…

5 hours ago

ಚಾಮರಾಜನಗರ ಹೇಮಂತ್‌ಗೆ ಮಿಸ್ಟರ್‌ ಇಂಡಿಯಾ ಕಿರೀಟ!

ಚಾಮರಾಜನಗರ : ರಾಷ್ಟ್ರ ಮಟ್ಟದ ಪುರುಷರ ಮೈಕಟ್ಟು ಸ್ಪರ್ಧೆಯಲ್ಲಿ ವಿಜೇತರಾಗುವ ಮೂಲಕ ತಾಲ್ಲೂಕಿನ ಕೋಡಿಮೋಳೆ ಬಸವನಪುರ ಬಿ.ಆರ್.ಹೇಮಂತ್ ಅವರು ಮಿಸ್ಟರ್…

6 hours ago