Mysore
33
few clouds

Social Media

ಸೋಮವಾರ, 20 ಏಪ್ರಿಲ 2026
Light
Dark

ಮೆದಗನಾಣೆ ಗ್ರಾಮಕ್ಕೆ ಕೊನೆಗೂ ವಿದ್ಯುತ್ ಸಂಪರ್ಕ

೮ ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಆದಿವಾಸಿ ಹೋರಾಟ ಸಮಿತಿ

ಹನೂರು: ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯಮೆದಗನಾಣೆ ಗ್ರಾಮಕ್ಕೆ ಶುಕ್ರವಾರದಿಂದ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.

ಕೊಳ್ಳೇಗಾಲ ವಿಭಾಗ ವ್ಯಾಪ್ತಿಯ ೨೨ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಯೋಜನೆ ರೂಪಿಸಿ ಅನುದಾನ ನೀಡಲಾಗಿತ್ತು. ಕೆಲವು ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ನೀಡುವ ಕಾಮಗಾರಿ ಮುಗಿದಿರುವುದರಿಂದ ವಿದ್ಯುತ್ ಸಂಪರ್ಕ ನೀಡಲು ಕ್ರಮ ಕೈಗೊಳ್ಳಲಾಗಿದೆ. ಅದರಂತೆ ಮೆದಗನಾಣೆ ಗ್ರಾಮಕ್ಕೆ ಶುಕ್ರವಾರದಿಂದಲೇ ಸೆಸ್ಕ್ ವತಿಯಿಂದ ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ.

ಆದಿವಾಸಿ ಸಮುದಾಯದವರು ಗ್ರಾಮಕ್ಕೆ ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಆದಿವಾಸಿ ಹೋರಾಟ ಸಮಿತಿ ಅಧ್ಯಕ್ಷ ನಾಗೇಂದ್ರ ಹಾಗೂ ಗಿರೀಶ್ ನೇತೃತ್ವದಲ್ಲಿ ಕಳೆದ ೮ ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಇದೀಗ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಶುಕ್ರವಾರ ಸಂಜೆಯಿಂದಲೇ ವಿದ್ಯುತ್ ಸಂಪರ್ಕ ನೀಡಲಾಗಿದೆ.

” ವಿದ್ಯುತ್ ಸೇರಿದಂತೆ ಅಗತ್ಯ ಮೂಲಸೌಲಭ್ಯ ಕಲ್ಪಿಸುವಂತೆ ಒತ್ತಾಯಿಸಿ ಆದಿವಾಸಿ ಹೋರಾಟ ಸಮಿತಿ ಅಧ್ಯಕ್ಷ ನಾಗೇಂದ್ರ ಹಾಗೂ ಗಿರೀಶ್ ನೇತೃತ್ವದಲ್ಲಿ ಕಳೆದ ೮ ದಿನಗಳಿಂದ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಜಿಲ್ಲಾಧಿಕಾರಿಗಳ ಸೂಚನೆಯ ಮೇರೆಗೆ ಶುಕ್ರವಾರ ಸಂಜೆಯಿಂದಲೇ ವಿದ್ಯುತ್ ಸಂಪರ್ಕ ನೀಡಲಾಗಿದೆ.

” ಹನೂರು ಕ್ಷೇತ್ರದ ಅರಣ್ಯ ವ್ಯಾಪ್ತಿಯಲ್ಲಿ ಬರುವ ಇಂಡಿಗನತ್ತ, ತುಳಸಿಕೆರೆ, ತೋಕೆರೆ, ದೊಡ್ಡಾಣೆ, ಮೆಂದಾರೆ, ಕೊಕ್ಕಬರೆ, ಪಡಸಲನತ್ತ, ಗೊಂಬೆಗಲ್ಲು, ನೆಲ್ಲಿಕತ್ರಿ, ಕೆರೆದಿಂಬ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲಾಗಿತ್ತು. ಆದರೆ ಅರಣ್ಯ ಇಲಾಖೆಯಿಂದ ಅನುಮತಿ ನೀಡಲು ವಿಳಂಬವಾದ್ದರಿಂದ ವಿದ್ಯುತ್ ಸಂಪರ್ಕ ಕಲ್ಪಿಸಲು ಸಾಧ್ಯವಾಗಿಲ್ಲ. ಇದೀಗ ಕೇಂದ್ರದ ಅಽಕಾರಿಗಳ ತಂಡ ಪರಿಶೀಲನೆ ನಡೆಸಿ ಅನುಮತಿ ನೀಡಿರುವುದರಿಂದ ಹಂತ ಹಂತವಾಗಿ ಹಾಡಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುತ್ತಿದೆ. ಇದಲ್ಲದೆ ಮೆಂದಾರೆ ಗ್ರಾಮ ಸ್ಥಳಾಂತರ ಮಾಡುವ ಬಗ್ಗೆಯೂ ಚರ್ಚೆ ನಡೆಸಲಾಗುತ್ತಿದೆ. ಎಲ್ಲ ಹಾಡಿಗಳಿಗೂ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ.”

-ಎಂ.ಆರ್.ಮಂಜುನಾಥ್, ಶಾಸಕರು

 

 

Tags:
error: Content is protected !!