Andolana originals

ಕಲಿಕಾ ಓಟದಲ್ಲಿ ಮುಂದಿರುವ ಮೇದನಿ ಸರ್ಕಾರಿ ಶಾಲೆ

ಟಿ.ಎ.ಸಾದಿಕ್ ಪಾಷಾ

ಬೆಳಿಗ್ಗೆ ೮.೩೦ಕ್ಕೇ ಪಾಠ ಪ್ರವಚನ ಆರಂಭ; ಫಲಿತಾಂಶ ಸುಧಾರಣೆಗೆ ಶಿಕ್ಷಕರ ಶ್ರಮ

ತಲಕಾಡು: ಹೋಬಳಿಯ ಮೇದನಿ ಸರ್ಕಾರಿ ಪ್ರೌಢಶಾಲೆ ಕಲಿಕಾ ಓಟದಲ್ಲಿ ಮುಂದಿದೆ. ಸಾಮಾನ್ಯವಾಗಿ ಸರ್ಕಾರಿ ಶಾಲೆಗಳು ಬೆಳಿಗ್ಗೆ ೧೦ರಿಂದ ಸಂಜೆ ೪.೩೦ರವರೆವಿಗೆ ಪಾಠ ಪ್ರವಚನ ಮಾಡುವುದು ವಾಡಿಕೆ. ಆದರೆ ಮೇದನಿ ಸರ್ಕಾರಿ ಪ್ರೌಢಶಾಲೆ ಬೆಳಿಗ್ಗೆ ೮.೩೦ಕ್ಕೆ ಬಾಗಿಲು ತೆಗೆದು ಸಂಜೆ ೫.೩೦ರವರೆಗೂ ಕಾರ್ಯ ನಿರ್ವಹಣೆ ಮಾಡುತ್ತಿರುವುದರಿಂದ ಸಾರ್ವಜನಿಕರ ಗಮನ ಸೆಳೆಯುತ್ತಿದೆ.

ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶದಲ್ಲಿ ಸುಧಾರಣೆ ಕಾಣಲು ಇಡೀ ಶಾಲೆಯ ಶಿಕ್ಷಕರು ಒಂದು ತಂಡವಾಗಿ ಕೆಲಸ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆಯ ೨೯ ಅಂಶಗಳ ಕಾರ್ಯಕ್ರಮವನ್ನು ಪ್ರಾಮಾಣಿಕವಾಗಿ ಶಾಲೆಯಲ್ಲಿ ಅಳವಡಿಸಿಕೊಂಡಿರುವುದಕ್ಕೆ ಹೊಸದೊಂದು ಮನ್ವಂತರದ ಫಲಿತಾಂಶವನ್ನು ಮೇದನಿ ಗ್ರಾಮಸ್ಥರು ನಿರೀಕ್ಷೆ ಮಾಡುತ್ತಿದ್ದಾರೆ.

ಈ ಹಿಂದೆಯೂ ಉತ್ತಮ ಶಾಲೆಯೆಂದು ಮೇದನಿ ಪ್ರೌಢಶಾಲೆ ಹೆಸರು ಮಾಡಿತ್ತು. ಫಲಿತಾಂಶ ಮತ್ತು ಕ್ರೀಡಾ ಚಟುವಟಿಕೆಗಳಲ್ಲಿ ರಾಷ್ಟ್ರಮಟ್ಟದಲ್ಲಿ ಈ ಶಾಲೆಯ ವಿದ್ಯಾರ್ಥಿಗಳು ಹೆಸರು ಮಾಡಿದ್ದರು. ಕಳೆದ ವರ್ಷ ರಾಷ್ಟ್ರಮಟ್ಟದ ಥ್ರೋ ಬಾಲ್ನಲ್ಲಿ ಪ್ರಶಸ್ತಿ ಬಾಚಿಕೊಂಡ ಈ ಶಾಲೆಯ ವಿದ್ಯಾರ್ಥಿಗಳು ಬದಲಾದ ಸರ್ಕಾರದ ನಿಲುವಿಗೆ ಹೊಂದಿಕೊಳ್ಳಲು ಎಸ್‌ಎಸ್ ಎಲ್‌ಸಿ ಪರೀಕ್ಷೆ ಫಲಿತಾಂಶದಲ್ಲಿ ಹೋರಾಟ ಮಾಡಿ ಶೇ.೬೦ರಷ್ಟಿನ ಗುರಿ ಮಾತ್ರ ತಲುಪಿತ್ತು.

ಈಗ ಮುಂದಿನ ಪರೀಕ್ಷೆಯಲ್ಲಿ ಇದರ ಫಲಿತಾಂಶ ಮತ್ತಷ್ಟು ಸುಧಾರಣೆ ಮಾಡಲೇ ಬೇಕೆಂದು ಮಾಡಿರುವ ದೃಢಸಂಕಲ್ಪದ ಪ್ರತಿಫಲ ಎಂಬಂತೆ ೨ ತಾಸುಗಳ ಕಾಲ೧೦ನೇ ತರಗತಿಯ ವಿದ್ಯಾರ್ಥಿಗಳಿಗೆ ವಿಶೇಷ ಬೋಧನೆಗೆ ಮುಂದಾಗಿದೆ. ೮ ಮತ್ತು ೯ನೇ ತರಗತಿಯ ವಿದ್ಯಾರ್ಥಿಗಳಿಗೂ ಕ್ರೀಡಾ ಚಟುವಟಿಕೆಗಳನ್ನು ಮೇದನಿ ಶಾಲೆ ಹಮ್ಮಿಕೊಂಡು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

” ಈ ಶಾಲೆಯ ಫಲಿತಾಂಶ ಸುಧಾರಣೆಗೆ ಶಾಲಾ ಶಿಕ್ಷಕರಾದ ಹರಿಕುಮಾರ್, ಮಾದಲಾಂಬಿಕಾ, ಮಹಾದೇವ ಪ್ರಸಾದ್, ಸುರೇಶ್ ಕುಮಾರ್, ಕಾವ್ಯ, ಸಿದ್ದೇಶ್, ಶಿಲ್ಪಶ್ರೀ ಅವರ ಜೊತೆಗೆ ಮೇದನಿ ಗ್ರಾಮಸ್ಥರು, ಎಸ್‌ಡಿಎಂಸಿ ಆಡಳಿತ ಮಂಡಳಿಯ ಸದಸ್ಯರು ಹೆಚ್ಚು ಆಸಕ್ತಿ ವಹಿಸಿದ್ದಾರೆ.”

-ಶಿವನಂಜು, ಮುಖ್ಯ ಶಿಕ್ಷಕ

” ಫಲಿತಾಂಶ ಸುಧಾರಣೆಗೆ ಬಿಇಒ ಶಿವಮೂರ್ತಿ ಅವರ ಮಾರ್ಗದರ್ಶನದಲ್ಲಿ ಮುಖ್ಯಶಿಕ್ಷಕ ಶಿವನಂಜುರವರು ಬಹಳ ಶ್ರಮ ಪಡುತ್ತಿದ್ದಾರೆ. ಗ್ರಾಮದಲ್ಲಿ ವ್ಯಾಸಂಗ ಮಾಡಿದ ಹಳೇ ವಿದ್ಯಾರ್ಥಿಗಳು ಮತ್ತು ವಿವಿಧೆಡೆ ನೌಕರಿ ಮಾಡುತ್ತಿರುವ ಜನರು ಸಲಹೆ, ಸಹಾಯ ನೀಡುವಂತಾಗಲಿ.”

-ಕುಮಾರ್, ಎಸ್‌ಡಿಎಂಸಿ ಅಧ್ಯಕ್ಷರು

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

1 hour ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

1 hour ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

1 hour ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

2 hours ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

2 hours ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

2 hours ago