Andolana originals

ಮನ್ರೆಗಾ ಓಕೆ… ವಿಬಿ ಜೀ ರಾಮ್ ಜೀ ಯಾಕೆ?

ಮೈಸೂರು: ಕೇಂದ್ರದ ಯುಪಿಎ ಸರ್ಕಾರ ೨೦೦೫ರಲ್ಲಿ ಜಾರಿಗೆ ತಂದ ರಾಷ್ಟ್ರೀಯ ಉದ್ಯೋಗ ಖಾತರಿ ಕಾಯ್ದೆಯಡಿ ಗ್ರಾಮೀಣ ಕುಟುಂಬಗಳಲ್ಲಿ ಜೀವನೋಪಾಯಕ್ಕೆ ಭದ್ರತೆ ಒದಗಿಸಲು ಗ್ರಾಮೀಣ ಪ್ರದೇಶದ ಕುಟುಂಬದ ಕೌಶಲ್ಯರಹಿತ ವಯಸ್ಕ ಸದಸ್ಯರಿಗೆ ಕನಿಷ್ಠ ೧೦೦ ದಿನಗಳ ಉದ್ಯೋಗ ಒದಗಿಸುವ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ(ಮನ್ರೇಗಾ) ಹೆಸರನ್ನು ಎನ್‌ಡಿಎ ಸರ್ಕಾರ ‘ವಿಕಸಿತ ಭಾರತ್-ಉದ್ಯೋಗ ಖಾತರಿ ಅಜೀವಿಕಾ ಮಿಷನ್(ಗ್ರಾಮೀಣ) ‘ವಿಬಿ ಜೀ ರಾಮ್ ಜೀ’ ಎಂದು ಬದಲಾವಣೆ ಮಾಡಲು ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ನಗರದ ವಿವಿಧ ಕ್ಷೇತ್ರಗಳ ಮುಖಂಡರು ವಿರೋಧ ವ್ಯಕ್ತಪಡಿಸಿದ್ದಾರೆ. ಕೆಲವರು ‘ಆಂದೋಲನ’ ದಿನಪತ್ರಿಕೆ ಯೊಂದಿಗೆ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಮನ್ರೇಗಾ ಹೆಸರು ಬದಲಾವಣೆಗೆ ವಿವಿಧ ಕ್ಷೇತ್ರಗಳ ಮುಖಂಡರ ವಿರೋಧ; ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಆಕ್ಷೇಪ

” ಮಹತ್ತರವಾದ ಮನ್ರೇಗಾ ಯೋಜನೆ ಬಡವರಿಗಾಗಿ ಇದ್ದದ್ದು. ಅದನ್ನು ಬದಲಾವಣೆ ಮಾಡುವುದಾದರೂ ಏಕೆ? ಬಿಜೆಪಿ ಮುಖಂಡರಿಗೆ ಮಹಾತ್ಮ ಗಾಂಧಿ, ನೆಹರು ಬಗ್ಗೆ ವೈರತ್ವ, ದ್ವೇಷ ಇದೆ. ಹಾಗಾಗಿ, ದ್ವೇಷ ಹೆಚ್ಚಿಸುವ ಕೆಲಸ ಮಾಡುತ್ತಿದ್ದಾರೆ. ಜೊತೆಗೆ ಯೋಜನೆಯನ್ನು ದುರ್ಬಲಗೊಳಿಸುತ್ತಿದ್ದಾರೆ. ಕೇಂದ್ರ ಸರ್ಕಾರದ ಈ ನಡೆ ಖಂಡನೀಯ. ಹೆಸರು ಬದಲಾಯಿಸಿದಲ್ಲಿ ಹೋರಾಟ ನಡೆಸಬೇಕಾಗುತ್ತದೆ.”

-ಬಿ.ಎಂ.ರಾಮು, ಜಿಪಂ ಮಾಜಿ ಅಧ್ಯಕ್ಷ 

” ಗೋಡ್ಸೆ ಪೂಜೆ ಮಾಡುವವರು ಸಹಜವಾಗಿ ಗಾಂಧೀಜಿಯನ್ನು ದ್ವೇಷಿಸುತ್ತಾರೆ. ಇವರಿಂದ ಏನನ್ನು ನಿರೀಕ್ಷಿಸಲು ಸಾಧ್ಯ? ಒಡೆದಾಳುವ ಸಂಪ್ರದಾಯವನ್ನು ಬಿಜೆಪಿ ಮುಂದುವರಿಸಿದೆ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಮನ್ರೇಗಾ ಯೋಜನೆ ಜಾರಿಗೆ ತಂದಿತ್ತು. ಯೋಜನೆಯಲ್ಲಿ ಯಾವುದೇ ಬದಲಾವಣೆ ಇಲ್ಲ. ಹೆಸರು ಮಾತ್ರ ಬದಲಾವಣೆ ಏಕೆ ಎಂಬುದೇ ಅರ್ಥವಾಗುತ್ತಿಲ್ಲ.”

-ಬಾಲಕೃಷ್ಣ ಸಂಗಾಪುರ, ಹೂಟಗಳ್ಳಿ ನಿವಾಸಿ

” ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬಂದ ಮೇಲೆ ಯೋಜನೆಗಳ ಹೆಸರುಗಳನ್ನು ಬದಲಾವಣೆ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಹೋರಾಟ ಮಾಡಿದವರ ಹೆಸರನ್ನು ತೆಗೆಯುವ ಕೆಲಸವಾಗುತ್ತಿದೆ. ಇದು ತಪ್ಪು. ಅವರ ಸರ್ಕಾರ ಹೊಸ ಯೋಜನೆಗಳನ್ನು ತಂದು ಯಾವುದಾದರೂ ಹೆಸರಿಡಲು ಅಭ್ಯಂತರವಿಲ್ಲ. ಮೊದಲೇ ಇಟ್ಟ ಹೆಸರನ್ನು ಬದಲಾಯಿಸಬಾರದು.”

-ರಾಘವೇಂದ್ರ, ವಿಜಯನಗರ ನಿವಾಸಿ

” ಒಂದು ಯೋಜನೆಗೆ ಮಹಾತ್ಮ ಗಾಂಧಿ ಅವರ ಹೆಸರಿಟ್ಟ ಮೇಲೆ ಯಾರೇ ಆದರೂ ಸರಿಯೇ ಬದಲಾವಣೆ ಮಾಡಬಾರದು. ಇದು ತಪ್ಪು ಸಂದೇಶವನ್ನು ನೀಡುತ್ತದೆ. ಗಾಂಧೀಜಿ ಅವರು ನಮಗೆ ಸ್ವಾತಂತ್ರ್ಯ ತಂದು ಕೊಟ್ಟವರು. ಇಡೀ ವಿಶ್ವಕ್ಕೆ ಅವರ ಮೇಲೆ ಅಪಾರ ಗೌರವವಿದೆ. ಅದನ್ನು ಉಳಿಸುವ ಕೆಲಸವನ್ನು ಮಾತ್ರ ನಾವು ಮಾಡಬೇಕಿದೆ.”

-ಸಿ.ನಾರಾಯಣಗೌಡ, ಅಧ್ಯಕ್ಷರು, ಮೈಸೂರು ಹೋಟೆಲ್ ಮಾಲೀಕರ ಸಂಘ

” ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಪ್ರಥಮ ಭಾಷಣದಲ್ಲಿ ಮನ್ರೇಗಾ ಯೋಜನೆ ಕುರಿತು ಟೀಕೆ ಮಾಡಿದ್ದರು. ಮಹಾತ್ಮ ಗಾಂಧಿ ಹೆಸರಿನ ಬಗ್ಗೆ ಅವರಿಗೆ ಪ್ರೀತಿ, ಪ್ರೇಮ ಇಲ್ಲ. ಕಾರ್ಮಿಕ ವರ್ಗಕ್ಕೆ ಕೂಲಿ ಹಣ ಹೆಚ್ಚಾಗಲು ಈ ಯೋಜನೆ ಕಾರಣ. ದೇಶದಲ್ಲಿ ಸರ್ವಾಧಿಕಾರಿ ಧೋರಣೆ ಇದೆ. ಇದರ ಬಗ್ಗೆ ಹೋರಾಟ ಮಾಡಲೇಬೇಕು.

-ಡಾ.ಬಿ.ಜೆ.ವಿಜಯಕುಮಾರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರು.

” ಇದು ನಿಜಕ್ಕೂ ಬೇಕಿರಲಿಲ್ಲ. ಮಹಾತ್ಮ ಗಾಂಧಿಜಿ ಅವರಿಗೆ ಅಗೌರವ ತೋರುವುದನ್ನು ಯಾರೂ ಮಾಡಬಾರದು. ಒಂದು ಯೋಜನೆಗೆ ಅವರ ಹೆಸರನ್ನು ಇಟ್ಟ ಮೇಲೆ ಯಾವ ಸರ್ಕಾರವೂ ಅದನ್ನು ಬದಲಾವಣೆ ಮಾಡಬಾರದು. ಕೇಂದ್ರ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೊಳಿಸಲಿ. ಅದಕ್ಕೆ ಯಾವುದಾದರೂ ಹೆಸರಿಡಲಿ. ಆದರೆ, ಗಾಂಧಿಜಿ ಅವರ ಹೆಸರನ್ನು ತೆಗೆದಿದ್ದು ತಪ್ಪು.

-ಕೆ.ಬಿ.ಲಿಂಗರಾಜು, ಅಧ್ಯಕ್ಷರು, ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ 

 

ಆಂದೋಲನ ಡೆಸ್ಕ್

Recent Posts

ಗಣೇಶ ಮೆರವಣಿಗೆಗೆ ಮುಸ್ಲಿಮರ ಸಾರಥ್ಯ ; ನಾಗಮಂಗಲದಲ್ಲಿ ಕೋಮು ಸೌಹಾರ್ದದ ಮೆರವಣಿಗೆ

ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…

9 hours ago

ಇ-ಕೆವೈಸಿಗೆ ಗಡುವು ವಿಸ್ತರಣೆ

ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…

21 hours ago

ಯುಪಿಐ ಶುಲ್ಕ | ನಮ್ಮ ಕಿಸೆಯೊಳಗೆ ಸರ್ಕಾರದ ಕೈ

ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…

22 hours ago

ಓದಗರ ಪತ್ರ | ಮರಳಿಗೆ ಮೊಳೆ ಹೊಡೆಯದೇ ದೀಪಾಲಂಕಾರಕ್ಕೆ ಪರ್ಯಾಯ ವ್ಯವಸ್ಥೆ ಮಾಡಲಿ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…

22 hours ago

ಓದುಗರ ಪತ್ರ | ಮುಷ್ಕರದ ಉದ್ದೇಶವೇ ಭಂಗಗೊಳಿಸುವುದಲ್ಲವೇ ?

ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…

22 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಅನಂತ್‌ಗೆ ಫಾಲ್ಕೆ : ಕನ್ನಡ ಚಿತ್ರರಂಗಕ್ಕೆ ಅತ್ಯುನ್ನತ ಗೌರವ

ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…

22 hours ago