Andolana originals

ಹಾಲಿನ ದರ ಹೆಚ್ಚಳ; ರೈತರಲ್ಲಿ ಹರ್ಷ

ಮಹೇಂದ್ರ ಹಸಗೂಲಿ

ಗುಂಡ್ಲುಪೇಟೆ: ಹಾಲಿನ ದರ ಹೆಚ್ಚಳದಿಂದ ಒಂದೆಡೆ ಗ್ರಾಹಕರಿಗೆ ಬೇಸರವಾಗಿದ್ದರೆ ರೈತರಲ್ಲಿ ಸಂತಸ ಮೂಡಿಸಿದೆ.

ಚಾಮುಲ್ ವತಿಯಿಂದ ಜಿಲ್ಲಾ ಹೈನುಗಾರರಿಗೆ ಯುಗಾದಿ ಹಬ್ಬದ ಪ್ರಯುಕ್ತ ಖರೀದಿ ದರವನ್ನು ೪ ರೂ. ಹೆಚ್ಚಳ ಮಾಡುವ ಮೂಲಕ ಯುಗಾದಿ ಉಡುಗೊರೆ ನೀಡಲಾಗಿದೆ.

ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟವು ಒಟ್ಟು ೪೬೧ ಹಾಲು ಉತ್ಪಾದಕ ಸಹಕಾರ ಸಂಘಗಳಿಂದ ಪ್ರತಿನಿತ್ಯ ೨.೬೧ ಲಕ್ಷ ಕೆಜಿ ಹಾಲು ಸಂಗ್ರಹಿಸುತ್ತಿದೆ. ಒಕ್ಕೂಟ ವ್ಯಾಪ್ತಿಯಲ್ಲಿ ಹಾಗೂ ತಮಿಳುನಾಡು, ಕೇರಳ ಮಾರುಕಟ್ಟೆಗಳಿಗೆ ಪ್ರತಿದಿನ ೬೫ ಸಾವಿರ ಲೀಟರ್ ಹಾಲು, ೧೬,೮೪೫ ಕೆಜಿ ಮೊಸರು, ದೇಶದ ವಿವಿಧ ಭಾಗಗಳಿಗೆ ೬೪,೭೮೯ ಲೀಟರ್ ಯುಹೆಚ್‌ಟಿ ಹಾಲನ್ನು ಮಾರಾಟ ಮಾಡಲಾಗುತ್ತಿದೆ.

ಸರ್ಕಾರದ ಕ್ಷೀರ ಭಾಗ್ಯ ಯೋಜನೆಗೆ ಹಾಲಿನ ಪುಡಿ ಸರಬರಾಜು ಮಾಡಲಾಗುತ್ತಿದೆ. ಹೈನುಗಾರರ ಹಿತದೃಷ್ಟಿಯಿಂದ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಲು ಮಾ.೨೯ ರಂದು ಜಿಲ್ಲಾ ಹಾಲು ಒಕ್ಕೂಟದ ಆಡಳಿತ ಮಂಡಳಿ ಸಭೆಯಲ್ಲಿ ಒಕ್ಕೂಟದ ವ್ಯಾಪ್ತಿಯ ಹಾಲು ಉತ್ಪಾದಕರಿಗೆ ಪ್ರತಿ ಲೀಟರ್‌ಗೆ ೪ ರೂ.ಗಳನ್ನು ಏಪ್ರಿಲ್ ೧ರಿಂದ ಅನ್ವಯವಾಗುವಂತೆ ಹೆಚ್ಚಿಸಲಾಗಿದೆ.

ಹಾಲು ಉತ್ಪಾದಕರು ಸರಬರಾಜು ಮಾಡುವ ಶೇ.೪.೦ ಜಿಡ್ಡು ಹಾಗೂ ೮.೫ ಜಿಡ್ಡೇತರ ಘನಾಂಶದ ಪ್ರತಿ ಲೀಟರ್ ಹಾಲಿಗೆ ಒಕ್ಕೂಟದಿಂದ ೩೫.೨೦ ರೂ. ಹಾಗೂ ಸರ್ಕಾರದ ಪ್ರೋತ್ಸಾಹಧನ ಪ್ರತಿ ಲೀಟರ್‌ಗೆ ೫ ರೂ. ಸೇರಿದಂತೆ ಉತ್ಪಾದಕರಿಗೆ ಒಟ್ಟು ೪೦.೨೦ ರೂ. ಪಾವತಿಯಾಗಲಿದೆ.

ಒಟ್ಟಾರೆ ಜೀವನೋಪಾಯಕ್ಕಾಗಿ ಒಂದೆರಡು ಹಸುಗಳನ್ನು ಸಾಕುವ ರೈತರಿಗೆ ಇದರಿಂದ ಅನುಕೂಲವಾಗಿದೆ.

” ಲೀಟರ್‌ಗೆ ೪ ರೂ. ಹೆಚ್ಚಳವಾಗಿರುವುದಕ್ಕೆ ನಮಗ ಬೇಸರವಿಲ್ಲ. ಏಕೆಂದರೆ ಅದು ನೇರವಾಗಿ ರೈತರಿಗೆ ತಲುಪುತ್ತದೆ. ರೈತರ ಶ್ರಮದ ಮುಂದೆ ಹಾಲಿನ ದರ ಹೆಚ್ಚಳ ಮಾಡಿರುವುದು ಅಂತಹ ಹೊರೆಯಾಗದು.”

-ಮಂಜುನಾಥ್, ಗ್ರಾಹಕ.

” ರೈತರು ಕಷ್ಟಪಟ್ಟು ಹಸು ಸಾಕಿ ಜೀವನ ಸಾಗಿಸುತ್ತಾರೆ. ಒಂದು ಲೀಟರ್ ನೀರಿನ ಬೆಲೆಯೇ ೨೦ ರೂ. ಇದೆ. ಈಗ ಕೇವಲ ೪ ರೂ. ಹಾಲಿನ ಬೆಲೆ ಹೆಚ್ಚಳ ಮಾಡಿದ್ದು ದೊಡ್ಡದಲ್ಲ. ರೈತರಿಗೆ ತಕ್ಕಮಟ್ಟಿಗೆ ಸಮಾಧಾನ ತಂದಿದೆ.”

-ಮಹೇಶ್, ರೈತ

ಆಂದೋಲನ ಡೆಸ್ಕ್

Recent Posts

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

3 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

3 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

3 hours ago

ಸುಬ್ಬಮ್ಮ ಜೋಯಿಸ್ ಮೈಸೂರಿನಲ್ಲಿ ತ್ರಿವರ್ಣಧ್ವಜ ಹಾರಿಸಿದ್ದು

ಸೋನಿಯಾ ಎಮ್.ವಿ., ಉಪನ್ಯಾಸಕಿ, ಟೆರಿಷಿಯನ್ ಕಾಲೇಜ್ ಎಮ್. ಎನ್. ಜೋಯಿಸ್ ಮತ್ತು ಸುಬ್ಬಮ್ಮ ಜೋಯಿಸ್ ಮೈಸೂರಿನ ಸ್ವತಂತ್ರ ಹೋರಾಟಗಾರರಲ್ಲಿ ತಮ್ಮ…

3 hours ago

ಉರಿ ಉಂಡ ಕರ್ಪೂರ ಟಿ.ಎಸ್.ಸುಬ್ಬಣ್ಣ

ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…

3 hours ago

ಬ್ಯಾರಿಸ್ಟರ್ ಏನೋ ಆದೆ ಆದರೆ ಆಮೇಲೆ?

ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…

3 hours ago