Mysore
15
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಕೋಟೆಯಲ್ಲಿ ಜನಾಕರ್ಷಿಸುತ್ತಿರುವ ಮಿನಿ ದಸರಾ

ಮಂಜು ಕೋಟೆ

ವರದರಾಜಸ್ವಾಮಿ ದೇವಾಲಯ, ಚಾಮುಂಡೇಶ್ವರಿ ದೇವಾಲಯದಲ್ಲಿ ಪ್ರತಿನಿತ್ಯ ಸಾಂಸ್ಕೃತಿಕ ಕಾರ್ಯಕ್ರಮಗಳು 

ಎಚ್.ಡಿ.ಕೋಟೆ: ಜಿಲ್ಲೆಯ ಕೇಂದ್ರ ಸ್ಥಾನವಾದ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವ ಅದ್ಧೂರಿಯಾಗಿ ನಡೆಯುತ್ತಿದ್ದರೆ ತಾಲ್ಲೂಕಿನ ಕೇಂದ್ರ ಸ್ಥಾನವಾದ ಎಚ್.ಡಿ.ಕೋಟೆ ಪಟ್ಟಣದಲ್ಲಿ ಮಿನಿ ದಸರಾ ಮಹೋತ್ಸವ ಸಡಗರದಿಂದ ನಡೆಯುತ್ತಿದ್ದು ಜನಾಕರ್ಷಿಸುತ್ತಿದೆ.

ಚೋಳರ ಕಾಲದ ಹಾಗೂ ಮುಜರಾಯಿ ಇಲಾಖೆಗೆ ಸೇರಿದ ಪಟ್ಟಣದ ಮೊದಲನೇ ಮುಖ್ಯ ರಸ್ತೆಯಲ್ಲಿರುವ ಶ್ರೀ ವರದರಾಜಸ್ವಾಮಿ ದೇವಸ್ಥಾನದಲ್ಲಿ ಹಾಗೂ ಹೌಸಿಂಗ್ ಬೋರ್ಡಿನಲ್ಲಿರುವ ಶ್ರೀ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪ್ರತಿನಿತ್ಯವೂ ದಸರಾ ಮತ್ತು ನವರಾತ್ರಿ ಮಹೋತ್ಸವ ಅರ್ಥಪೂರ್ಣವಾಗಿ ನಡೆಯುತ್ತಿದೆ.

ವರದರಾಜಸ್ವಾಮಿ ದೇವಸ್ಥಾನದಲ್ಲಿ ಬೊಂಬೆಗಳ ಪೂಜೆ, ಶ್ರೀ ಕೃಷ್ಣ ರಾಸಲೀಲೆ ಹಾಗೂ ಕಲ್ಯಾಣೋತ್ಸವ ಲಕ್ಷ್ಮೀಪೂಜೆ, ವರದರಾಜಸ್ವಾಮಿ, ಶ್ರೀದೇವಿ, ಭೂದೇವಿ ದೇವರ ವಿಗ್ರಹಗಳ ಪೂಜೆ, ವಿವಿಧ ಸಾಂಸ್ಕ ತಿಕ ಕಾರ್ಯಕ್ರಮಗಳು ಪ್ರತಿ ಸಮುದಾಯ, ಅಧಿಕಾರಿಗಳು, ಜನಪ್ರತಿನಿಧಿಗಳ ಮುಖಾಂತರ ನಡೆಯುತ್ತಿದೆ.

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಚಾಮುಂಡೇಶ್ವರಿ ದೇವಿಗೆ ಪ್ರತಿನಿತ್ಯ ಬಗೆಬಗೆಯ ಅಲಂಕಾರ, ಪೂಜೆ, ಹೋಮ-ಹವನಗಳನ್ನು ನಡೆಸಲಾಗುತ್ತಿದೆ. ಮೊದಲನೇ ಮುಖ್ಯ ರಸ್ತೆ ಮತ್ತು ಚಾಮುಂಡೇಶ್ವರಿ ದೇವಸ್ಥಾನದ ಮುಖ್ಯರಸ್ತೆಯಲ್ಲಿನ ದೀಪಾಲಂಕಾರ ಜನರನ್ನು ಆಕರ್ಷಿಸುತ್ತಿದೆ. ಪ್ರತಿನಿತ್ಯ ಪೂಜೆ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಪಟ್ಟಣ ಸೇರಿದಂತೆ ವಿವಿಧ ಭಾಗಗಳಿಂದ ಜನರು ಮತ್ತು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.

ಈ ಎರಡೂ ದೇವಸ್ಥಾನಗಳ ಸಮಿತಿಯವರು ಮತ್ತು ಮುಖ್ಯಸ್ಥರು ದಸರಾ ಮಹೋತ್ಸವವನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ. ಹಲವು ವರ್ಷಗಳಿಂದ ಪಟ್ಟಣದಲ್ಲಿ ನಡೆಯುತ್ತಿರುವ ಮಿನಿ ದಸರಾ ಕಾರ್ಯಕ್ರಮ ವರ್ಷದಿಂದ ವರ್ಷಕ್ಕೆ ಜನ ಸಾಮಾನ್ಯರನ್ನು ಹೆಚ್ಚಾಗಿ ಆಕರ್ಷಿಸುತ್ತಿದೆ.

” ಮೈಸೂರು ನಗರವನ್ನು ಹೊರತುಪಡಿಸಿದರೆ ಎಚ್.ಡಿ. ಕೋಟೆ ಪಟ್ಟಣದಲ್ಲಿ ಮಾತ್ರ ಪೊಲೀಸರ ಗಾರ್ಡ್ ಆಫ್‌  ಆನರ್ ಮೂಲಕ ದಸರಾ ಮಹೋತ್ಸವ ಕಾರ್ಯಕ್ರಮ ನಡೆಯುವುದರಿಂದ ಶಾಸಕರು, ಸ್ಥಳೀಯ ಪ್ರತಿನಿಧಿಗಳು, ವರ್ತಕರು, ಅನೇಕ ಮುಖಂಡರು ಹೆಚ್ಚಿನ ಸಹಕಾರ ನೀಡಿದರೆ ಇಲ್ಲಿನ ಮಿನಿ ದಸರಾ ಮತ್ತಷ್ಟು ಅದ್ಧೂರಿಯಾಗಿ, ಅರ್ಥಪೂರ್ಣವಾಗಿ ನಡೆಯಲಿದೆ.”

-ಕನ್ನಡ ಪ್ರಮೋದ್, ಅಧ್ಯಕ್ಷರು ಕಸಾಪ 

” ಎಚ್.ಡಿ.ಕೋಟೆ ಪಟ್ಟಣದಲ್ಲಿ ಮಿನಿ ದಸರಾ ಮಹೋತ್ಸವ ಮತ್ತು ನವರಾತ್ರಿ ಉತ್ಸವ ನಿಮಿತ್ತ ದೇವಸ್ಥಾನಗಳಲ್ಲಿ ದೇವರಿಗೆ ಅನೇಕ ವಿಶೇಷ ಪೂಜೆ, ಅಭಿಷೇಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿರುವುದು ಸಂತಸ ಮೂಡಿಸಿದೆ.”

-ಸುಮತಿ, ಹೌಸಿಂಗ್ ಬೋರ್ಡ್ ನಿವಾಸಿ,

Tags:
error: Content is protected !!