ಮಂಜು ಕೋಟೆ
ಲಕ್ಷ್ಮೀ ವರದರಾಜಸ್ವಾಮಿ, ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿಜಯದಶಮಿ ಉತ್ಸವ, ನವರಾತ್ರೋತ್ಸವಕ್ಕೆ ಸಿದ್ಧತೆ
ಎಚ್.ಡಿ.ಕೋಟೆ: ಪಟ್ಟಣದ ಮುಜರಾಯಿ ಇಲಾಖೆಯ ಲಕ್ಷ್ಮೀ ವರದರಾಜಸ್ವಾಮಿ ದೇವಸ್ಥಾನ ಮತ್ತು ಹೌಸಿಂಗ್ ಬೋರ್ಡಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಸೆ.೨೧ರಿಂದ ವಿಜಯದಶಮಿ ಉತ್ಸವ ಮತ್ತು ನವರಾತ್ರೋತ್ಸವ ಕಾರ್ಯಕ್ರಮಗಳನ್ನು ನಡೆಸಲು ಸಮಿತಿಯವರು ಸಕಲ ಸಿದ್ಧತೆ ನಡೆಸಿದ್ದಾರೆ.
ಮಿನಿ ದಸರಾ ಹಿನ್ನೆಲೆಯಲ್ಲಿ ಶ್ರೀ ವರದರಾಜ ಸ್ವಾಮಿ ದೇವಸ್ಥಾನ ಹಾಗೂ ಚಾಮುಂಡೇಶ್ವರಿ ದೇವಸ್ಥಾನಗಳಿಗೆ ಸುಣ್ಣ ಬಣ್ಣ ಹೊಡೆದು ಅಲಂಕರಿಸಿದ್ದು, ಪ್ರಮುಖ ರಸ್ತೆಗಳಲ್ಲಿ ಎರಡೂ ದೇವಸ್ಥಾನಗಳಿಂದ ಪ್ರತ್ಯೇಕವಾಗಿ ವಿದ್ಯುತ್ ದೀಪಾಲಂಕಾರ ಮಾಡಲಾಗಿದೆ.
ಶ್ರೀ ವರದರಾಜಸ್ವಾಮಿ ದೇವಸ್ಥಾನದಲ್ಲಿ ವರದರಾಜಸ್ವಾಮಿ, ಶ್ರೀದೇವಿ, ಭೂದೇವಿ ಲಕ್ಷ್ಮೀ ದೇವರ ಮೂರ್ತಿಗೆ ಹಾಗೂ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಚಾಮುಂಡೇಶ್ವರಿ ದೇವರ ಮೂರ್ತಿಗೆ ಭಾನುವಾರದಿಂದ ಪ್ರತಿನಿತ್ಯ ಬೆಳಿಗ್ಗೆ ಮತ್ತು ಸಂಜೆ ವಿಶೇಷ ಪೂಜೆ, ಉಯ್ಯಾಲೋತ್ಸವ, ಕಲ್ಯಾಣೋತ್ಸವ ಇತ್ಯಾದಿ ಕಾರ್ಯಕ್ರಮಗಳು ನಡೆಯಲಿವೆ.
ಅ.೨ರ ಗುರುವಾರ ವಿಜಯದಶಮಿ ದಿನದಂದು ಸಂಜೆ ೫ ಗಂಟೆಗೆ ಮಿನಿ ದಸರಾದಲ್ಲಿ ಎರಡೂ ದೇವಸ್ಥಾನಗಳ ಮೂಲ ದೇವರುಗಳ ಮೂರ್ತಿಗಳೊಂದಿಗೆ ಮೆರವಣಿಗೆ ನಡೆಸಲಾಗುತ್ತದೆ. ಇದರಲ್ಲಿ ಅನೇಕ ಕಲಾತಂಡಗಳು, ಸ್ತಬ್ಧಚಿತ್ರಗಳು ಭಾಗವಹಿಸಲಿವೆ. ನಂತರ ಪೊಲೀಸ್ ಇಲಾಖೆ ಮೂಲಕ ಬನ್ನಿಮರಕ್ಕೆ ಪೊಲೀಸ್ ಪೂಜೆ ನೆರವೇರಲಿದೆ.
ಈ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಶಾಸಕ ಅನಿಲ್ ಚಿಕ್ಕಮಾದು, ತಹಸಿಲ್ದಾರ್ ಶ್ರೀನಿವಾಸ್, ಪುರಸಭಾ ಅಧ್ಯಕ್ಷರಾದ ಶಿವಮ್ಮ ಚಾಕಹಳ್ಳಿ ಕೃಷ್ಣ, ಉಪಾಧ್ಯಕ್ಷರಾದ ಆಸಿಫ್, ಮಧುಕುಮಾರ್, ದೇವಸ್ಥಾನ ಸಮಿತಿಯ ಮುಖ್ಯಸ್ಥರಾದ ಬಿ.ಎಸ್.ರಂಗ ಅಯ್ಯಂಗಾರ್, ಪ್ರಸಾದಿ, ನಟರಾಜ್, ಸತೀಶ್, ತಿರುಮಲಾಚಾರ್, ಶ್ರೀಧರ್, ಡೇರಿ ಶ್ರೀಕಾಂತ್, ಜಯಂತ್, ಡಿಶ್ ದೇವರಾಜು, ಪೂರ್ಣೇಶ್, ಪ್ರಮೋದ್, ಕೆಂಡಗಣ್ಣ, ಪರಶಿವ, ಮಂಜುನಾಥ್, ವೆಂಕಟೇಶ್, ನಾಗರಾಜು, ಸಿದ್ದರಾಜು, ನಾಗಣ್ಣ, ಬ್ಯಾಂಕ್ ವೀರಪ್ಪ, ಪುರಸಭೆ ಸದಸ್ಯರು, ಎಲ್ಲಾ ಸಮುದಾಯದವರು ಮುಂದಾಗಿದ್ದಾರೆ.
” ಎಲ್ಲಾ ಕಾರ್ಯಕ್ರಮಗಳು ಪಕ್ಷಾತೀತವಾಗಿ, ಜಾತ್ಯತೀತವಾಗಿ ಎಲ್ಲಾ ಸಮುದಾಯದವರ ಸಮ್ಮುಖದಲ್ಲಿ ವಿಜೃಂಭಣೆಯಿಂದ ನೆರವೇರಲಿವೆ ಎಂದು ದೇವಸ್ಥಾನ ಸಮಿತಿಯವರು ತಿಳಿಸಿದ್ದಾರೆ.”
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…