Mysore
28
overcast clouds

Social Media

ಬುಧವಾರ, 09 ಜುಲೈ 2025
Light
Dark

ಮಿಷನ್ ಆಸ್ಪತ್ರೆ ಕಾರ್ಮಿಕರ ಪ್ರತಿಭಟನೆ: ಜಿಲ್ಲಾಧಿಕಾರಿಗೆ ಮನವಿ

ಮೈಸೂರು: ತಮ್ಮ ನ್ಯಾಯಯುತ ಬೇಡಿಕೆಗಳಿಗೆ, ಸಮಸ್ಯೆಗಳಿಗೆ ಮೈಸೂರಿನ ಸಿಎಸ್‌ಐ ಮೆಮೋರಿಯಲ್ ಹೋಲ್ಡ್ ವರ್ತ್ (ಮಿಷನ್ ) ಆಸ್ಪತ್ರೆ ಆಡಳಿತ ವರ್ಗ ಸ್ಪಂದಿಸದೆ, ನಿರ್ಲಕ್ಷ್ಯ ಧೋರಣೆಯನ್ನು ತಾಳುತ್ತಿದೆ. ಜಿಲ್ಲಾಧಿಕಾರಿಗಳು ಮಧ್ಯ ಪ್ರವೇಶಿಸಿ ಕಾರ್ಮಿಕರು ಅನುಭವಿಸುತ್ತಿರುವ ಸಂಕಷ್ಟ, ಸಮಸ್ಯೆಗಳನ್ನು ಬಗೆಹರಿಸಿಕೊಡಬೇಕೆಂದು ಆಸ್ಪತ್ರೆಯ ಮುಷ್ಕರ ನಿರತ ಎಂಪ್ಲಾಯಿಸ್ ಯೂನಿಯನ್ ಸದಸ್ಯರು ಎಐಟಿಯುಸಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಬುಧವಾರ ಮನವಿ ಸಲ್ಲಿಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಮಾತನಾಡಿದ ಮುಖಂಡರು, ಆಸ್ಪತ್ರೆಯ ಆಡಳಿತಾಧಿಕಾರಿ ವಿನ್ವೆಂಟ್ ಪಾಲ್ ಅವರ ದುರಾಡಳಿತದಿಂದ ಆಸ್ಪತ್ರೆ ಕಾರ್ಯಚಟುವಟಿಕೆಗಳು ಸಮರ್ಪಕವಾಗಿ ನಡೆಯುತ್ತಿಲ್ಲ. ಕಾರ್ಮಿಕರಿಗೆ ನೀಡಬೇಕಾದ ಸೌಲಭ್ಯಗಳನ್ನು ನೀಡದೇ ವಂಚಿಸಲಾಗುತ್ತಿದೆ. ಅಲ್ಲದೇ ಕಾರ್ಮಿಕ ಸಂಘ ನೀಡಿರುವ ವೇತನ ಪರಿಷ್ಕರಣೆ ಮತ್ತು ಇತರೆ ಸೌಲಭ್ಯ ಹೆಚ್ಚಿಸಲು ನೀಡಿರುವ ಬೇಡಿಕೆ ಪತ್ರಕ್ಕೆ ಸ್ಪಂದಿಸದೆ ನಿರ್ಲಕ್ಷ್ಯ ವಹಿಸಲಾಗಿದೆ. ಕಳೆದ ಏಪ್ರಿಲ್ ತಿಂಗಳಿಂದ ಕಾರ್ಮಿಕರಿಗೆ ವೇತನವನ್ನೂ ನೀಡಿಲ್ಲ. ಹೀಗಾಗಿ ಕಾರ್ಮಿಕರ ಸಮಸ್ಯೆ ಪರಿಹಾರಕ್ಕಾಗಿ ಕಾನೂನಿನ್ವಯ ಕಳೆದ ಜುಲೈ 15ರಂದು ನೋಟಿಸ್ ಮುಷ್ಕರ ನಡೆಸಲಾಗುತ್ತಿದೆ. ಆದರೆ ಕಾರ್ಮಿಕರೊಂದಿಗೆ ಮಾತುಕತೆ ನಡೆಸಿ ಸಮಸ್ಯೆಯನ್ನು ಬಗೆಹರಿಸುವ ಬದಲು ಆಡಳಿತ ಮಂಡಳಿಯು ಕಾರ್ಮಿಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ದೂರಿದರು.

ಸಿಎಸ್‌ಐ ಹೋಲ್ಡ್ ವರ್ತ್ ಮೆಮೋರಿಯಲ್ 62 ಆಸ್ಪತ್ರೆ ಎಂಪ್ಲಾಯೀಸ್ ಯೂನಿಯನ್ ಉಪಾಧ್ಯಕ್ಷ ರಾದ ದಯಾಪ್ರಕಾಶ್, ಸಿ.ಶಂಕರ್, ಪ್ರಧಾನ ಕಾರ್ಯದರ್ಶಿ ವಿಲ್ಲನ್ ಪ್ರಭಾಕರ್, ಕಾರ್ಯದರ್ಶಿ ಪಾಲ್ ಡೇವಿಡ್, ಸಹ ಕಾರ್ಯದರ್ಶಿ ಆ‌ರ್. ಸಿದ್ದರಾಜು, ಖಜಾಂಚಿ ಮ್ಯಾನ್ಯುಯಲ್, ಜೋಸೆಫ್ ಮತ್ತಿತರರು ಹಾಜರಿದ್ದರು.

ಬೇಡಿಕೆಗಳು

• ಬಾಕಿ ಉಳಿಸಿಕೊಂಡಿರುವ 4 ತಿಂಗಳ ವೇತನವನ್ನು ಕೂಡಲೇ ಪಾವತಿಸಬೇಕು

• ವೇತನ ಪರಿಷ್ಕರಣೆಯನ್ನು ನಿಗದಿತ ಅವಧಿಯೊಳಗೆ ಮಾತುಕತೆಯ ಮೂಲಕ ಬಗೆಹರಿಸಬೇಕು

• ಸರ್ಕಾರ ನಿಗದಿಪಡಿಸಿರುವ ಕನಿಷ್ಠ ವೇತನವನ್ನು ಕೂಡಲೇ ಜಾರಿಗೊಳಿಸಲು ಕ್ರಮ ತೆಗೆದುಕೊಳ್ಳಬೇಕು

• ಈಗಾಗಲೇ ನಿವೃತ್ತರಾದ ಕಾರ್ಮಿಕರಿಗೆ (ಉಪಧನ) ಉಳಿಸಿಕೊಂಡಿದ್ದು, ಕೂಡಲೇ ಪಾವತಿಸಲು ಕ್ರಮ ತೆಗೆದುಕೊಳ್ಳಬೇಕು

Tags:
error: Content is protected !!