Child marriage
ಮೈಸೂರು: ಬಾಲ್ಯ ವಿವಾಹ ಮತ್ತು ಹದಿಹರಯದ ಗರ್ಭಧಾರಣೆಯ ಬಗ್ಗೆ ಸಾಕಷ್ಟು ಕಳವಳ ವ್ಯಕ್ತವಾದ ಕಾರಣ ಶಿವಮೊಗ್ಗ ಜಿಲ್ಲಾಡಳಿತವು ಮಿಷನ್ ಸುರಕ್ಷಾ ಅಭಿಯಾನವನ್ನು ನಡೆಸಲು ಮುಂದಾಗಿರುವುದು ಸರಿಯಾದ ಕ್ರಮವಲ್ಲ ಎಂದು ಅಖಿಲ ಭಾರತ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ (ಎಐಪಿಡಬ್ಲ್ಯೂಎ) ಅಸಮಾಧಾನ ವ್ಯಕ್ತಪಡಿಸಿದೆ.
ಸುರಕ್ಷಾ ಅಭಿಯಾನ ಕೈಗೊಳ್ಳುವ ಸಂಬಂಧ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎನ್. ಹೇಮಂತ್ ಅವರು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಮತ್ತು ಜಿಲ್ಲೆಯ ಐಟಿಐ ಮತ್ತು ಡಿಪ್ಲೊಮಾ ಕಾಲೇಜುಗಳ ಪ್ರಾಂಶುಪಾಲರಿಗೆ ಜ್ಞಾಪಕ ಪತ್ರವನ್ನು ಬಿಡುಗಡೆ ಮಾಡಿದ್ದಾರೆ.
ಇದರ ಅನ್ವಯ ಇನ್ನು ಮುಂದೆ ಕಾಲೇಜುಗಳು ವಿದ್ಯಾರ್ಥಿನಿಯರ ಮುಟ್ಟಿನ ಚಕ್ರದ ಬಗ್ಗೆ ದಾಖಲೆಯನ್ನು ನಿರ್ವಹಿಸಬೇಕು ಎಂಬುದು ಒಪ್ಪುವಂತಹ ವಿಷಯವಲ್ಲ ಎಂದು ಅಖಿಲ ಭಾರತ ಮಹಿಳಾ ದೌರ್ಜನ್ಯ ವಿರೋಧಿ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾದ ಡಾ.ಇ.ರತಿ ರಾವ್, ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಸುಮನಾ, ಸಬಿಹಾ, ನಾ.ದಿವಾಕರ್, ಸರಸ್ವತಿ, ಶಬಾನಾ ಹೇಳಿದ್ದಾರೆ. ಶಿವಮೊಗ್ಗ ಜಿಲ್ಲಾಡಳಿತದ ಈ ಮಿಷನ್ ಅಭಿಯಾನದ ಉದ್ದೇಶ ಒಳ್ಳೆಯದೇ ಎಂದು ಹಲವರು ಭಾವಿಸಿದ್ದುಂಟು. ಆದರೆ ವಿದ್ಯಾರ್ಥಿ ನಿಯರ ಮುಟ್ಟಿನ ಚಕ್ರದ ಮಾಹಿತಿಯನ್ನು ಸಂಗ್ರಹಿಸುವುದು ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ.
ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವ ಉದ್ದೇಶಕ್ಕೋಸ್ಕರ ಗ್ರಾಮ ಮಟ್ಟದ ಸಮಿತಿಗಳೊಂದಿಗೆ ಈ ಸೂಕ್ಷ್ಮ ಡೇಟಾವನ್ನು ಕಾಲೇಜು ಆಡಳಿತ ಹಂಚಿಕೊಳ್ಳುವುದು ಅಗತ್ಯ ಎಂದು ಜ್ಞಾಪಕ ಪತ್ರದಲ್ಲಿ ಸೂಚಿಸಲಾಗಿದೆ. ಹೀಗಾಗಿ ಈ ಸುರಕ್ಷಾ ಅಭಿಯಾನವು ಸಂಪೂರ್ಣವಾಗಿ ಸ್ಪಷ್ಟತೆಯ ಕೊರತೆಯಿಂದ ಕೂಡಿದೆ ಎಂದು ದೂರಿದ್ದಾರೆ. ಈ ಅಭಿಯಾನವೇ ಅಸಂಬದ್ಧ ಕ್ರಮವಾಗಿರುವ ಕಾರಣ ಮುಟ್ಟಿನ ಚಕ್ರದ ಬಗ್ಗೆ ಡೇಟಾವನ್ನು ಸಂಗ್ರಹಿಸುವುದು ಅನಗತ್ಯ ನಡೆಯಾಗಿದೆ. ಬದಲಾಗಿ ವೈಜ್ಞಾನಿಕ ಆಧಾರದ ಮೇಲೆ ಪುರುಷ ಮತ್ತು ಮಹಿಳೆಯ ದೇಹ ರಚನೆ, ಅಂಗಾಂಗಗಳ ಕಾರ್ಯನಿರ್ವಹಣೆ ಕುರಿತು ವಿದ್ಯಾರ್ಥಿಗಳಲ್ಲಿ, ಜನರಲ್ಲಿ ಆಡಳಿತದ ಎಲ್ಲ ವಿಭಾಗವೂ ಜಾಗೃತಿ ಮೂಡಿಸಬೇಕಾಗಿದೆ.
ಹದಿಹರೆಯದ ಗಂಡು ಮತ್ತು ಹೆಣ್ಣು ಮಕ್ಕಳು ಇಬ್ಬರೂ ಅನುಭವಿಸುವ ದೈಹಿಕ ಮತ್ತು ಮಾನಸಿಕ ಬದಲಾವಣೆಗಳು ಮತ್ತು ಅವುಗಳನ್ನು ಹೇಗೆ ಎದುರಿಸಬೇಕು ಎಂಬುದರ ಬಗ್ಗೆ ಪೋಷಕರು ಮತ್ತು ಶಿಕ್ಷಕರನ್ನು ಸಂವೇದನಾಶೀಲರನ್ನಾಗಿ ಮಾಡುವ ಅಗತ್ಯ ಇದೆ. ಜತೆಗೆ ಈ ಅಭಿಯಾನದಲ್ಲಿ ಹುಡುಗ ಮತ್ತು ಹುಡುಗಿಯರು ಇಬ್ಬರೂ ಭಾಗಿಯಾಗಬೇಕಾಗಿದೆ ಎಂದು ಒತ್ತಾಯಿಸಿದ್ದಾರೆ. ಸಂತಾನೋತ್ಪತ್ತಿ ಪ್ರಕ್ರಿಯೆಯ ವೈಜ್ಞಾನಿಕ ಅರಿವಿನ ಕೊರತೆಯಿಂದಾಗಿ ಬಾಲ್ಯವಿವಾಹ, ಹದಿಹರೆಯದ ಗರ್ಭಧಾರಣೆಗಳು, ಲೈಂಗಿಕ ದೌರ್ಜನ್ಯಗಳು ಸಮಾಜದಲ್ಲಿ ವ್ಯಾಪಕವಾಗಿವೆ.
ಮುಖ್ಯವಾಗಿ ಪ್ರಾರಂಭಿಕವಾಗಿ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾ ಅಽಕಾರಿಗಳಿಗೆ ಜಾಗೃತಿ ತರಗತಿಯನ್ನು ನೀಡಬೇಕಾಗಿದೆ. ಹೆಣ್ಣು ಮಕ್ಕಳ ಮುಟ್ಟಿನ ಚಕ್ರವನ್ನು ಗುರಿಯಾಗಿರಿಸಿ ಕೊಂಡು ಏಕೆ ಹೀಗೆ ಚಿಂತನೆ ನಡೆಸಿದ್ದಾರೆ ಎಂಬುದು ನಿಜಕ್ಕೂ ಆಘಾತಕಾರಿಯಾದ ಸಂಗತಿ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಋತುಚಕ್ರದ ದತ್ತಾಂಶ ಸಂಗ್ರಹ ಕಾರ್ಯ ನಿಲ್ಲಿಸಲು ಆಗ್ರಹ:“ಋತುಚಕ್ರದ ಬಗ್ಗೆ ದತ್ತಾಂಶ ಸಂಗ್ರಹ ಕಾರ್ಯವನ್ನು ನಿಲ್ಲಿಸಬೇಕು. ‘ನನ್ನ ದೇಹ ನನ್ನ ಹಕ್ಕು’ ಮತ್ತು ‘ಲೈಂಗಿಕ ಕಿರುಕುಳ ತಡೆಗಟ್ಟುವಿಕೆ’ ಕುರಿತು ಸಮಾಜದ ಎಲ್ಲಾ ಹಂತಗಳಲ್ಲಿ ಜಾಗೃತಿ ಅಭಿಯಾನವನ್ನು ಪ್ರಾರಂಭಿಸಬೇಕು. ಇದರಲ್ಲಿ ವೈದ್ಯಕೀಯ ತಂಡದ ಒಳಗೊಳ್ಳುವಿಕೆಯೂ ಅತ್ಯಗತ್ಯ. ಹೀಗಾಗಿ ಪುರುಷ ಮತ್ತು ಸ್ತ್ರೀ ದೇಹಗಳ ಸುತ ಲಿನ ವೈಜ್ಞಾನಿಕ ಪರಿಕಲ್ಪನೆಗಳು, ಬಾಲ್ಯವಿವಾಹ ಮತ್ತು ಹದಿಹರೆಯದ ಗರ್ಭಧಾರಣೆಗಳು ಸೇರಿದಂತೆ ಎಲ್ಲ ರೀತಿಯ ಮಹಿಳಾ ದೌರ್ಜನ್ಯಗಳನ್ನು ತಡೆಗಟ್ಟುವಲ್ಲಿ ಪ್ರತಿಯೊಬ್ಬ ನಾಗರಿಕನ ಸಾಮಾಜಿಕ ಜವಾಬ್ದಾರಿಯನ್ನು ಜನಪ್ರಿಯಗೊಳಿಸಲು ಮಿಷನ್ ಸುರಕ್ಷಾ ಅಗಾಧ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಬಹುದಾಗಿದೆ ಎಂದು ರತಿ ರಾವ್ ಹಾಗೂ ಕರ್ನಾಟಕ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟದ ಸುಮನಾ, ಸಬಿಹಾ, ನಾ.ದಿವಾಕರ್, ಸರಸ ತಿ, ಶಬಾನಾ ಅವರು ತಿಳಿಸಿದ್ದಾರೆ. “
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…
ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…
ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…