Mysore
32
scattered clouds

Social Media

ಶುಕ್ರವಾರ, 20 ಫೆಬ್ರವರಿ 2026
Light
Dark

ಸಹಕಾರ ಕ್ಷೇತ್ರ ಪ್ರವೇಶಿಸಿದ ಶಾಸಕ ಅನಿಲ್ ಚಿಕ್ಕಮಾದು

ಮಂಜು ಕೋಟೆ

ಎಂಸಿಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸಲು ನಾಗನಹಳ್ಳಿ ಪಿಎಸಿಸಿಎಸ್ ನಿರ್ದೇಶಕರಾಗಿ ನೇಮಕ 

ಎಚ್.ಡಿ.ಕೋಟೆ: ಎಂಸಿಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ತಾಲ್ಲೂಕಿನ ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗುವ ಮೂಲಕ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಸಹ ಕಾರ ಕ್ಷೇತ್ರವನ್ನು ಪ್ರವೇಶ ಮಾಡಿದ್ದಾರೆ.

ಜೂನ್ ೧೫ರಂದು ನಡೆಯಲಿರುವ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಚುನಾವಣೆಯಲ್ಲಿ ಈ ಬಾರಿ ಎಚ್.ಡಿ. ಕೋಟೆ ಕ್ಷೇತ್ರದಿಂದ ಶಾಸಕ ಅನಿಲ್ ಚಿಕ್ಕಮಾದು ಸ್ಪರ್ಧಿಸಿ ಗೆಲುವು ಸಾಧಿಸಿ ಸಹಕಾರ ಕ್ಷೇತ್ರವನ್ನು ಪ್ರವೇಶಿಸಲೇ ಬೇಕೆಂದು ಪಣ ತೊಟ್ಟಿದ್ದಾರೆ.

ಈ ನಿಟ್ಟಿನಲ್ಲಿ ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ನಾಗನಹಳ್ಳಿ ಪ್ರದೀಪ, ಅಧ್ಯಕ್ಷರಾದ ಉಪಕಾರಿ, ಉಪಾಧ್ಯಕ್ಷ ಮುದ್ದೇಗೌಡ, ನಿರ್ದೇಶಕರು, ಮತ್ತಿತರರು ತಮ್ಮ ಬ್ಯಾಂಕಿನಲ್ಲಿ ನಿರ್ದೇಶಕರೊಬ್ಬರು ನಿಧನರಾಗಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಅನಿಲ್ ಚಿಕ್ಕಮಾದು ಅವರನ್ನು ಎಲ್ಲ ದಾಖಲಾತಿಗಳೊಂದಿಗೆ ನೇಮಕ ಮಾಡಿಕೊಂಡಿದ್ದಾರೆ.

ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಗೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ನೀಡಿ ಆಡಳಿತ ಮಂಡಳಿಯವರನ್ನು ಅಭಿನಂದಿಸಿ, ಮುಂದಿನ ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ ಮುಖಂಡರು, ಹಿತೈಷಿಗಳ ಜತೆ ಚರ್ಚೆ ಮತ್ತು ಸಭೆ ನಡೆಸಿದ್ದಾರೆ. ಅನಿಲ್ ಚಿಕ್ಕಮಾದು ಅವರ ಸ್ಪರ್ಧೆಯಿಂದ ಮೈಸೂರು ಮತ್ತು ಚಾ.ನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಚುನಾವಣೆ ತೀವ್ರ ಪೈಪೋಟಿಯಿಂದ ಕೂಡಿರುವ ಸಾಧ್ಯತೆ ಇದೆ.

” ಸಹಕಾರ ಕ್ಷೇತ್ರದಿಂದಲೂ ಎಚ್.ಡಿ. ಕೋಟೆ ಕ್ಷೇತ್ರಕ್ಕೆ ಮತ್ತು ರೈತರಿಗೆ ಅನುಕೂಲ ಮಾಡುವುದಕ್ಕಾಗಿ ನಾನು ಸಹಕಾರ ಕ್ಷೇತ್ರವನ್ನು ಪ್ರವೇಶ ಮಾಡುತ್ತಿದ್ದೇನೆ. ಎಂಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುವ ಸಲುವಾಗಿ ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕನಾಗಿ ಈಗಾಗಲೇ ಆಯ್ಕೆಯಾಗಿದ್ದೇನೆ. ಎಲ್ಲಾ ರಂಗಗಳಲ್ಲೂ ತಾಲ್ಲೂಕು, ಜನಸಾಮಾನ್ಯರು, ರೈತರು ಅಭಿವೃದ್ಧಿ ಹೊಂದಬೇಕು ಎಂಬುದು ನನ್ನ ಗುರಿಯಾಗಿದೆ.”

-ಅನಿಲ್ ಚಿಕ್ಕಮಾದು, ಶಾಸಕರು.

Tags:
error: Content is protected !!