ಮಂಜು ಕೋಟೆ
ಎಂಸಿಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸಲು ನಾಗನಹಳ್ಳಿ ಪಿಎಸಿಸಿಎಸ್ ನಿರ್ದೇಶಕರಾಗಿ ನೇಮಕ
ಎಚ್.ಡಿ.ಕೋಟೆ: ಎಂಸಿಡಿಸಿಸಿ ಬ್ಯಾಂಕಿನ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ತಾಲ್ಲೂಕಿನ ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರಾಗುವ ಮೂಲಕ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಸಹ ಕಾರ ಕ್ಷೇತ್ರವನ್ನು ಪ್ರವೇಶ ಮಾಡಿದ್ದಾರೆ.
ಜೂನ್ ೧೫ರಂದು ನಡೆಯಲಿರುವ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಚುನಾವಣೆಯಲ್ಲಿ ಈ ಬಾರಿ ಎಚ್.ಡಿ. ಕೋಟೆ ಕ್ಷೇತ್ರದಿಂದ ಶಾಸಕ ಅನಿಲ್ ಚಿಕ್ಕಮಾದು ಸ್ಪರ್ಧಿಸಿ ಗೆಲುವು ಸಾಧಿಸಿ ಸಹಕಾರ ಕ್ಷೇತ್ರವನ್ನು ಪ್ರವೇಶಿಸಲೇ ಬೇಕೆಂದು ಪಣ ತೊಟ್ಟಿದ್ದಾರೆ.
ಈ ನಿಟ್ಟಿನಲ್ಲಿ ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸಿಇಒ ನಾಗನಹಳ್ಳಿ ಪ್ರದೀಪ, ಅಧ್ಯಕ್ಷರಾದ ಉಪಕಾರಿ, ಉಪಾಧ್ಯಕ್ಷ ಮುದ್ದೇಗೌಡ, ನಿರ್ದೇಶಕರು, ಮತ್ತಿತರರು ತಮ್ಮ ಬ್ಯಾಂಕಿನಲ್ಲಿ ನಿರ್ದೇಶಕರೊಬ್ಬರು ನಿಧನರಾಗಿದ್ದ ಹಿನ್ನೆಲೆಯಲ್ಲಿ ತೆರವಾಗಿದ್ದ ಸ್ಥಾನಕ್ಕೆ ಅನಿಲ್ ಚಿಕ್ಕಮಾದು ಅವರನ್ನು ಎಲ್ಲ ದಾಖಲಾತಿಗಳೊಂದಿಗೆ ನೇಮಕ ಮಾಡಿಕೊಂಡಿದ್ದಾರೆ.
ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಚೇರಿಗೆ ಶಾಸಕ ಅನಿಲ್ ಚಿಕ್ಕಮಾದು ಭೇಟಿ ನೀಡಿ ಆಡಳಿತ ಮಂಡಳಿಯವರನ್ನು ಅಭಿನಂದಿಸಿ, ಮುಂದಿನ ಚುನಾವಣೆಯ ಕಾರ್ಯತಂತ್ರಗಳ ಬಗ್ಗೆ ಮುಖಂಡರು, ಹಿತೈಷಿಗಳ ಜತೆ ಚರ್ಚೆ ಮತ್ತು ಸಭೆ ನಡೆಸಿದ್ದಾರೆ. ಅನಿಲ್ ಚಿಕ್ಕಮಾದು ಅವರ ಸ್ಪರ್ಧೆಯಿಂದ ಮೈಸೂರು ಮತ್ತು ಚಾ.ನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಚುನಾವಣೆ ತೀವ್ರ ಪೈಪೋಟಿಯಿಂದ ಕೂಡಿರುವ ಸಾಧ್ಯತೆ ಇದೆ.
” ಸಹಕಾರ ಕ್ಷೇತ್ರದಿಂದಲೂ ಎಚ್.ಡಿ. ಕೋಟೆ ಕ್ಷೇತ್ರಕ್ಕೆ ಮತ್ತು ರೈತರಿಗೆ ಅನುಕೂಲ ಮಾಡುವುದಕ್ಕಾಗಿ ನಾನು ಸಹಕಾರ ಕ್ಷೇತ್ರವನ್ನು ಪ್ರವೇಶ ಮಾಡುತ್ತಿದ್ದೇನೆ. ಎಂಸಿಡಿಸಿಸಿ ಬ್ಯಾಂಕ್‌ನ ನಿರ್ದೇಶಕರ ಸ್ಥಾನಕ್ಕೆ ಸ್ಪರ್ಧಿಸುವ ಸಲುವಾಗಿ ನಾಗನಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕನಾಗಿ ಈಗಾಗಲೇ ಆಯ್ಕೆಯಾಗಿದ್ದೇನೆ. ಎಲ್ಲಾ ರಂಗಗಳಲ್ಲೂ ತಾಲ್ಲೂಕು, ಜನಸಾಮಾನ್ಯರು, ರೈತರು ಅಭಿವೃದ್ಧಿ ಹೊಂದಬೇಕು ಎಂಬುದು ನನ್ನ ಗುರಿಯಾಗಿದೆ.”
-ಅನಿಲ್ ಚಿಕ್ಕಮಾದು, ಶಾಸಕರು.
ಬೆಂಗಳೂರು : 38 ತಿಂಗಳ ವೇತನ ಬಾಕಿ ಹಣ ನೀಡಬೇಕು ಎನ್ನುವುದೂ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕೆಎಸ್‌ಆರ್‌ಟಿಸಿಯ…
ಬೆಂಗಳೂರು : ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳ ಕಾರ್ಯವ್ಯಾಪ್ತಿಯನ್ನು ನಿರ್ಬಂಧಿಸುವ ಕುರಿತು ವಾರ್ತಾ ಇಲಾಖೆಗೆ ಸರ್ಕಾರ ಪತ್ರ ಬರೆದಿದೆ. ಪತ್ರದಲ್ಲಿ, ಮಾಧ್ಯಮಗಳು…
ಮೈಸೂರು : ನಾಗರಹೊಳೆ ಮತ್ತು ಬಂಡೀಪುರ ರಾಷ್ಟ್ರೀಯ ಉದ್ಯಾನವನಗಳಲ್ಲಿ ಫೆಬ್ರವರಿ 19ರಿಂದ ಸಫಾರಿ ಪುನರಾರಂಭವಾಗಲಿದೆ ಎಂದು ಅರಣ್ಯ ಸಚಿವ ಈಶ್ವರ…
ಮೈಸೂರು : ಸ್ವಚ್ಛ ಸರ್ವೇಕ್ಷಣೆ-2026ರ ಅಂಗವಾಗಿ ನಗರಪಾಲಿಕೆ ವತಿಯಿಂದ ಶೌಚಾಲಯ ಬಳಕೆ ಹಾಗೂ ಸ್ವಚ್ಛತೆ ಕುರಿತು ವಿದ್ಯಾರ್ಥಿಗಳಿಂದ ಜಾಥಾ ಹಾಗೂ…
ಮೈಸೂರು : ಇಂದಿನ ಕಾಲದಲ್ಲಿ ಜ್ಞಾನದ ಜೊತೆಗೆ ಕೌಶಲ ತುಂಬಾ ಮುಖ್ಯವಾಗಿದೆ. ಈ ನಿಟ್ಟಿನಲ್ಲಿ ರಾಷ್ಟ್ರೀಯ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,…
ಮಂಡ್ಯ: ಸಚಿವ ಎಚ್.ಸಿ.ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಶಾಸಕ…