Andolana originals

ಆರೋಗ್ಯ ಸಿಬ್ಬಂದಿಗೆ ಮೊಬೈಲ್‌ ಹಾಜರಾತಿ ಕಡ್ಡಾಯ

ಮೈಸೂರು : ಕರ್ನಾಟಕ ಹಾಜರಾತಿ ನಿರ್ವಹಣಾ ವ್ಯವಸ್ಥೆ (ಕೆಎಎಂಎಸ್) ಮೂಲಕ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಜಿಲ್ಲೆಯ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರ (ಪಿಎಚ್‌ಸಿ)ಗಳಲ್ಲಿ ವೈದರೂ ಸೇರಿದಂತೆ ಸಿಬ್ಬಂದಿಗೆ ಮೊಬೈಲ್ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಿದೆ.

ಗ್ರಾಮೀಣ ಪ್ರದೇಶದ ಪಿಎಚ್‌ಸಿಗಳಲ್ಲಿ ವೈದ್ಯರು ಹಾಗೂ ಸಿಬ್ಬಂದಿ ಕೆಲಸದ ಅವಧಿಯಲ್ಲಿ ನಾಪತ್ತೆ ಯಾಗಿರುತ್ತಾರೆ ಎಂಬ ಸಾರ್ವಜನಿಕರ ದೂರುಗಳ ಹಿನ್ನೆಲೆಯಲ್ಲಿ ಕೆಎಎಂಎಸ್ ಮೊಬೈಲ್ ಹಾಜರಾತಿ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ.

ಬಯೋಮೆಟ್ರಿಕ್ ಹಾಜರಾತಿ ಸಮಸ್ಯೆಗೆ ತೆರೆ: ಈಗಾಗಲೇ ವೈದ್ಯರು ಸೇರಿದಂತೆ ಸಿಬ್ಬಂದಿ ಬಳಸುತ್ತಿರುವ ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯಲ್ಲಿ ಆಗಾಗ ಸಮಸ್ಯೆ ಕಂಡುಬರುತ್ತಿತ್ತು. ಹಾಗಾಗಿ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಜಾರಿಗೊಳಿಸಲು ನಿರ್ಧರಿಸಲಾಗಿದೆ. ಯಾವ ಪ್ರದೇಶದಿಂದ ಹಾಜರಾತಿ ಹಾಕಲಾಗುತ್ತಿದೆ ಎನ್ನುವುದನ್ನೂ ಪತ್ತೆ ಮಾಡುವ ನೂತನ ಯೋಜನೆಯನ್ನು ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿದೆ.

ಮೂವ್‌ಮೆಂಟ್ ರಿಜಿಸ್ಟರ್ ಪಾಲನೆಗೆ ಸೂಚನೆ: ಕಚೇರಿ ಸಮಯದಲ್ಲಿ ಕರ್ತವ್ಯದ ಕಾರಣಕ್ಕೆ ನ್ಯಾಯಾಲಯದ ಪ್ರಕರಣಗಳ ವಿಚಾರಣೆಗೆ ಹಾಜರು, ಸ್ಥಳ ಪರಿಶೀಲನೆ, ಸರ್ವೆ ಅಂತಹ ಕಾರ್ಯಕ್ಕೂ ತೆರಳಲು ವಿಭಾಗದ ಮುಖ್ಯಸ್ಥರ ಒಪ್ಪಿಗೆ ಪಡೆಯಬೇಕಾಗುತ್ತದೆ. ಇದಕ್ಕಾಗಿ ಆಯಾ ಕಚೇರಿಗಳಲ್ಲಿ ‘ಮೂವ್‌ಮೆಂಟ್ ರಿಜಿಸ್ಟರ್’ ಅನ್ನು ತೆರೆದು ಅದರಲ್ಲಿ ಹೊರ ಹೋಗುವ ಹಾಗೂ ವಾಪಸ್ ಬರುವ ಸಮಯವನ್ನು ನಮೂದಿಸುವಂತೆ ಸೂಚಿಸಲಾಗಿದೆ.

ನಕಲಿ ಹಾಜರಾತಿ ಬಂದ್: ಇತ್ತೀಚೆಗೆ ಕೆಲವು ವೈದ್ಯರು ಹಾಗೂ ಸಿಬ್ಬಂದಿ ಹಾಜರಾತಿಯಲ್ಲಿ ಅಶಿಸ್ತು ಹೆಚ್ಚಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವು. ಹಲವೆಡೆ, ವೈದ್ಯರು, ಸಿಬ್ಬಂದಿ ಆಸ್ಪತ್ರೆಯಲ್ಲಿ ಗೈರಾಗಿದ್ದರೂ, ಹಾಜರಾಗಿರುವಂತೆ ತಪ್ಪು ಮಾಹಿತಿ ನೀಡಲಾಗುತ್ತಿತ್ತು. ಈ ಕುರಿತು ಆಸ್ಪತ್ರೆಗೆ ಬಂದಂತಹ ರೋಗಿಗಳು ಹಾಗೂ ಸಾರ್ವಜನಿಕರು ಹಿರಿಯ ಅಽಕಾರಿಗಳಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪಿಎಚ್‌ಸಿ ವೈದ್ಯರು, ಸಿಬ್ಬಂದಿಗೆ ಮೊಬೈಲ್ ಹಾಜರಾತಿಯನ್ನು ಕಡ್ಡಾಯಗೊಳಿಸಿ ಆದೇಶಿಸಿದ್ದಾರೆ. ಬಹುತೇಕ ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಲ ವೈದ್ಯರು, ಸಿಬ್ಬಂದಿ ಕರ್ತವ್ಯಕ್ಕೆ ತಡವಾಗಿ ಆಗಮಿಸುವುದು ಹಾಗೂ ಅವಽ ಮುಗಿಯುವ ಮುನ್ನವೇ ನಿರ್ಗಮಿಸುವಂತಹ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿದ್ದು, ರೋಗಿಗಳಿಗೆ ಸರಿಯಾದ ಚಿಕಿತ್ಸೆ ದೊರಕದೇ ಪರದಾಡುತ್ತಿದ್ದು ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುತ್ತಾರೆ ಎಂಬ ಆರೋಪಗಳು ಕೇಳಿಬಂದಿವೆ. ಹಾಗಾಗಿ ಇದನ್ನೆಲ್ಲಾ ಅರಿತು ಆರೋಗ್ಯ ಇಲಾಖೆ ಮೊಬೈಲ್ ಆಧಾರಿತ ಹಾಜ ರಾತಿಯನ್ನು ಅನುಷ್ಠಾನಗೊಳಿಸಿದೆ.

– ಪ್ರಶಾಂತ್‌ ಎಸ್.‌

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕೆರೆ, ಕಟ್ಟೆಗಳ ಹೂಳೆತ್ತಿಸಿ

ಮಳೆಗಾಲದಲ್ಲಿ ಕೆರೆ ಕಟ್ಟೆಗಳು ತುಂಬಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನಾಹುತಗಳೇ ಸೃಷ್ಟಿಯಾಗುತ್ತವೆ. ನಗರ ಪ್ರದೇಶಗಳಲ್ಲಿ ಇರುವ ಕೆರೆಗಳ ಹೂಳೆತ್ತಿ…

2 mins ago

ಓದುಗರ ಪತ್ರ: ಪ್ರಜಾಪ್ರಭುತ್ವ ಎಂಬ ಮೃಷ್ಟಾನ್ನ ಭೋಜನ ಶಾಲೆ!

ಭ್ರಷ್ಟಾಚಾರವೇ ಇಲ್ಲದ ವ್ಯವಸ್ಥೆ ನಿರ್ಮಾಣ ಮಾಡುವುದು ಇನ್ನು ತುಂಬಾ ಕಷ್ಟಕರವಾದ ಕೆಲಸ ಎಂದು ನಿವೃತ್ತ ಲೋಕಾಯುಕ್ತ ನ್ಯಾಯ ಮೂರ್ತಿ ಎನ್.ಸಂತೋಷ್…

4 mins ago

ಓದುಗರ ಪತ್ರ: ಡಿಜಿಟಲ್ ತಂತ್ರಜ್ಞಾನ ಸದ್ಬಳಕೆಯಾಗಲಿ

ಇಂದು ಡಿಜಿಟಲ್ ತಂತ್ರಜ್ಞಾನ ಹೆಚ್ಚಾಗಿ ಬಳಕೆಯಾಗುತ್ತಿದ್ದು, ಇದರಿಂದಾಗಿ ಶಿಕ್ಷಣ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಆನ್ಲೈನ್ ತರಗತಿಗಳು, ಯೂಟ್ಯೂಬ್ ಶಿಕ್ಷಣ…

6 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಪೈರೆಸಿ ವಿರುದ್ಧ ಚಿತ್ರೋದ್ಯಮ ಯುದ್ಧ ಸನ್ನದ್ಧ!?

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ೨೦೨೬ರ ಆರಂಭದ ವೇಳೆ ಹಲವು ಬೆಳವಣಿಗೆಗಳು. ೨೦೨೫ರ ಕೊನೆಯ ಶುಕ್ರವಾರ ತೆರೆ ಕಂಡ ೨ ಚಿತ್ರಗಳ…

9 mins ago

ಸಿದ್ದಾಪುರ ವ್ಯಾಪ್ತಿಯಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣ

ಕೃಷ್ಣ ಸಿದ್ದಾಪುರ ಸಿಬ್ಬಂದಿ ಕೊರತೆ, ಜನಸಂಖ್ಯೆ ಆಧಾರದಲ್ಲಿ ಹೊಸ ಠಾಣೆ ಸ್ಥಾಪನೆ, ಹೆಚ್ಚಿನ ಸಿಬ್ಬಂದಿ ನಿಯೋಜನೆಗೆ ಆಗ್ರಹ  ಸಿದ್ದಾಪುರ:ಸಿದ್ದಾಪುರ ಪೊಲೀಸ್…

14 mins ago

ಮೈಮುಲ್ ಆಡಳಿತ ಮಂಡಳಿ ಚುನಾವಣೆಯತ್ತ ಎಲ್ಲರ ಚಿತ್ತ

ಕೆ.ಬಿ.ರಮೇಶನಾಯಕ ಮೈಸೂರು: ಮೈಸೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ(ಮೈಮುಲ್) ಆಡಳಿತ ಮಂಡಳಿಯ ಐದು ವರ್ಷಗಳ ಆಡಳಿತ ಮುಂದಿನ…

20 mins ago