Andolana originals

ಜೂನ್ ಮೊದಲ ವಾರದಲ್ಲಿ ಕೊಡಗಿಗೆ ಮುಂಗಾರು

ನವೀನ್ ಡಿಸೋಜ

ಈ ಬಾರಿ ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆ

ವಾತಾವರಣ ಬದಲಾವಣೆಯಿಂದ ತಡವಾಗಿ ಪ್ರವೇಶ

ಮಡಿಕೇರಿ: ಈ ಬಾರಿ ಜೂನ್ ಮೊದಲ ವಾರದಲ್ಲಿ ಕೊಡಗು ಜಿಲ್ಲೆಗೆ ಮುಂಗಾರು ಪ್ರವೇಶಿಸಲಿದ್ದು, ಈ ವರ್ಷ ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೃಷಿ ಮತ್ತು ಜಲಮೂಲಗಳಿಗೆ ಅತ್ಯಂತ ಪ್ರಮುಖವಾಗಿರುವ ನೈಋತ್ಯ ಮುಂಗಾರು, ದಕ್ಷಿಣ ಭಾರತದತ್ತ ನಿಧಾನವಾಗಿ ಮುನ್ನಡೆಯುವ ಲಕ್ಷಣಗಳನ್ನು ತೋರುತ್ತಿದೆ. ಆದರೆ, ಭಾರತೀಯ ಹವಾಮಾನ ಇಲಾಖೆ ಇನ್ನೂ ಕೇರಳದಲ್ಲಿ ಇದರ ಅಧಿಕೃತ ಪ್ರವೇಶವನ್ನು ಘೋಷಿಸಿಲ್ಲ. ಐಎಂಡಿ ಈ ಹಿಂದೆ ಮೇ ೨೬ರ ಹೊತ್ತಿಗೆ ಮುಂಗಾರು ಆರಂಭವಾಗಬಹುದು ಎಂದು ಅಂದಾಜಿಸಿತ್ತು. ಇದು ಸಾಮಾನ್ಯ ದಿನಾಂಕವಾದ ಜೂನ್ ೧ಕ್ಕಿಂತ ಐದು ದಿನಗಳು ಮುಂಚಿತವಾಗಿತ್ತು. ಆದರೆ, ವಾತಾವರಣದಲ್ಲಾದ ಬದಲಾವಣೆಗಳಿಂದಾಗಿ ಅಧಿಕೃತ ಘೋಷಣೆ ವಿಳಂಬವಾಗಿದೆ.

ಮುಂಗಾರು ವಿಳಂಬವಾಗಿದ್ದರೂ, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಆರಂಭವಾಗಿದೆ. ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಮೈಸೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನೊಳಗೊಂಡ ದಕ್ಷಿಣ ಒಳನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗುತ್ತಿದೆ.

ಐಎಂಡಿ ಮುನ್ಸೂಚನೆ ಪ್ರಕಾರ, ಜೂನ್ ಆರಂಭದವರೆಗೆ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಿಡಿಲಿನ ಸಂದರ್ಭದಲ್ಲಿ ಗಾಳಿಯ ವೇಗವು ಗಂಟೆಗೆ ೪೦-೫೦ ಕಿ.ಮೀ ಇರಲಿದ್ದು, ಕೆಲವು ಜಿಲ್ಲೆಗಳಲ್ಲಿ ಗಂಟೆಗೆ ೭೦ ಕಿ.ಮೀ.ವೇಗದ ತೀವ್ರ ಗಾಳಿ ಬೀಸುವ ಸಾಧ್ಯತೆಯಿದೆ. ಒಳನಾಡಿನ ಕೆಲವು ಭಾಗಗಳಲ್ಲಿ ಒಂದು ಬಾರಿ ಮಳೆಯೂ ಆಗಬಹುದು ಎಂದು ಹೇಳಲಾಗಿದೆ.

ಹವಾಮಾನ ತಜ್ಞರ ಪ್ರಕಾರ, ಅರಬ್ಬಿ ಸಮುದ್ರದಿಂದ ತೇವಾಂಶ ಭರಿತ ಗಾಳಿ ಹೆಚ್ಚಾಗುತ್ತಿರುವುದು ಮತ್ತು ಮುಂಗಾರು ಪೂರ್ವ ವಾತಾವರಣದ ಬದಲಾವಣೆಗಳೇ ಈ ಮಳೆಗೆ ಕಾರಣವಾಗಿದೆ. ಈ ಬೆಳವಣಿಗೆಗಳು ಕೇರಳದಲ್ಲಿ ಮುಂಗಾರು ಅಧಿಕೃತವಾಗಿ ಆರಂಭವಾದ ನಂತರ ಕರ್ನಾಟಕಕ್ಕೆ ಮುನ್ನಡೆಯಲು ಪೂರಕ ವಾತಾವರಣವನ್ನು ಸೃಷ್ಟಿಸುತ್ತಿವೆ. ಕೊಡಗು ಜಿಲ್ಲೆಗೆ ಜೂನ್ ಮೊದಲ ವಾರದಲ್ಲಿ ಮುಂಗಾರುಪ್ರವೇಶದ ನಿರೀಕ್ಷೆ ಹೊಂದಲಾಗಿದೆ. ಈ ಬಾರಿ ಉಷ್ಣಾಂಶ ಹೆಚ್ಚಿರಲಿದ್ದು, ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆ ಇರಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಎಚ್ಚರ ವಹಿಸಿ..!: 

ಗುಡುಗು ಮತ್ತು ಭಾರೀ ಮಳೆಯ ಸಂದರ್ಭದಲ್ಲಿ, ವಿಶೇಷವಾಗಿ ನೀರು ನಿಲ್ಲುವ ಮತ್ತು ಟ್ರಾಫಿಕ್ ಜಾಮ್ಆಗುವ ನಗರ ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯಿಂದ  ಇರುವಂತೆ ಅಧಿಕಾರಿಗಳು ಸೂಚಿಸಿದ್ದಾರೆ. ಸಿಡಿಲು ಬಡಿಯುವ ಸಮಯದಲ್ಲಿ ಮರಗಳ ಕೆಳಗೆ ಅಥವಾ ವಿದ್ಯುತ್ ಕಂಬಗಳ ಬಳಿ ಆಶ್ರಯ ಪಡೆಯದಂತೆ ಜನರಿಗೆ ಎಚ್ಚರಿಕೆ ನೀಡಲಾಗಿದೆ.

ಎಲ್‌ನಿನೋ ಆತಂಕ..!: 

ಪೆಸಿಫಿಕ್ ಮಹಾಸಾಗರದಲ್ಲಿ ಎಲ್‌ನಿನೋ ಪ್ರಭಾವವನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಎಲ್‌ನಿನೋ ಎಂಬುದು ಪೆಸಿಫಿಕ್ ಮಹಾಸಾಗರದ ಮೇಲ್ಮೈ ನೀರು ಬೆಚ್ಚಗಾಗುವ ಒಂದು ಹವಾಮಾನ ಪ್ರಕ್ರಿಯೆಯಾಗಿದೆ. ಇದು ಸಾಮಾನ್ಯವಾಗಿ ಭಾರತದ ಮುಂಗಾರು ದುರ್ಬಲಗೊಳ್ಳಲು, ವಾಡಿಕೆಗಿಂತ ಕಡಿಮೆ ಮಳೆಯಾಗಲು ಮತ್ತು ದೀರ್ಘಕಾಲದ ಒಣ ಹವೆಗೆ ಕಾರಣವಾಗುತ್ತದೆ. ಹಿಂದಿನ ವರ್ಷಗಳಿಗೆ ಹೋಲಿಸಿದರೆ ಪ್ರಸ್ತುತ ಎಲ್‌ನಿನೋ ಪ್ರಭಾವ ದುರ್ಬಲವಾಗಿದೆ ಮತ್ತು ಹಿಂದೂ ಮಹಾಸಾಗರದ ವಾತಾವರಣವು ಮುಂಗಾರು ಮಳೆಗೆ ಪೂರಕವಾಗಿದೆ ಎಂದು ಹವಾಮಾನ ಸಂಸ್ಥೆಗಳು ತಿಳಿಸಿವೆ. ಕೆಲವು ಜಾಗತಿಕ ಹವಾಮಾನ ವರದಿಗಳ ಪ್ರಕಾರ, ಮುಂಗಾರು ಹಂಗಾಮಿನ ಮುಂದಿನ ದಿನಗಳಲ್ಲಿ ಇದು ತಟಸ್ಥ ಹಂತಕ್ಕೆ ಬರಲಿದೆ. ಇದರಿಂದ ದಕ್ಷಿಣ ಭಾರತದ ಮಳೆಯ ಮೇಲಾಗುವ ನಕಾರಾತ್ಮಕ ಪ್ರಭಾವ ಕಡಿಮೆಯಾಗಬಹುದು.

” ನೈಋತ್ಯ ಮುಂಗಾರು ದಕ್ಷಿಣ ಭಾರತದತ್ತ ನಿಧಾನವಾಗಿ ಮುನ್ನಡೆಯುವ ಲಕ್ಷಣಗಳನ್ನು ತೋರಿಸುತ್ತಿದೆ. ಮುಂಗಾರು ವಿಳಂಬವಾದರೂ ಅರಬ್ಬಿ ಸಮುದ್ರದಿಂದ ತೇವಾಂಶ ಭರಿತ ಗಾಳಿ ಹೆಚ್ಚಾಗುತ್ತಿದೆ ಮತ್ತು ಮುಂಗಾರು ಪೂರ್ವ ವಾತಾ ವರಣದ ಬದಲಾವಣೆಯಿಂದ ಹಲವೆಡೆ ಮುಂಗಾರು ಪೂರ್ವ ಮಳೆಯಾಗುತ್ತಿದೆ. ಜೂನ್ ಮೊದಲ ವಾರದಲ್ಲಿ ಕೊಡಗಿಗೆ ಮುಂಗಾರು ಪ್ರವೇಶಿಸುವ ಸಾಧ್ಯತೆ ಇದೆ. ಈ ಬಾರಿ ಮಳೆಯ ಪ್ರಮಾಣ ವಾಡಿಕೆಗಿಂತ ಕಡಿಮೆ ಇರಲಿದ್ದು, ರೈತರು ಕಡಿಮೆ ನೀರಿನ ಅವಶ್ಯವಿರುವ ಬೆಳೆಯನ್ನು ಬೆಳೆಯಬೇಕಿದೆ.”

-ಡಾ.ಜಿ.ವಿ.ಸುಮಂತ್ ಕುಮಾರ್, ಸಹ ಸಂಶೋಧಕ, ಹವಾಮಾನ ವಿಭಾಗ (ನಾಗನಹಳ್ಳಿ)ಮೈಸೂರು

 

 

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ | ರಾಜ್ಯ ವಿಧಾನ ಮಂಡಲ ಅಧಿವೇಶನ ಸದ್ಬಳಕೆಗೆ ದಾರಿ ಯಾವುದಯ್ಯ!?

ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…

10 hours ago

ಓದುಗರ ಪತ್ರ | ಹಿಂದಿ ಶಿಕ್ಷಕರ ನೇಮಕಾತಿ ಏಕಿಲ್ಲ?

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…

10 hours ago

ಓದುಗರ ಪತ್ರ | ಕನ್ನಡ ಚಿತ್ರ; ಟಿಕೆಟ್‌ಗಳಲ್ಲಿ ಆಂಗ್ಲ ಹೆಸರು !

ಮಲ್ಟಿಪ್ಲೆಕ್ಸ್‌ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್‌ನಲ್ಲಿ ಚಿತ್ರದ…

10 hours ago

ಓದುಗರ ಪತ್ರ | ಮತದಾರರ ಕರಡು ಪಟ್ಟಿಯ ತಪ್ಪುಗಳನ್ನು ಸರಿಪಡಿಸಿ

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್‌ಐಆರ್ ಬಗ್ಗೆ ಹಲವಾರು ಅನುಮಾನ…

10 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವೈಡ್‌ ಆಂಗಲ್‌ | ಕಳಚಿದ ಚಲನಚಿತ್ರ ಪತ್ರಿಕೋದ್ಯಮದ ಹಿರಿಯ ಕೊಂಡಿ ಶ್ರೀಕೃಪಾ

ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…

10 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 28  ಶುಕ್ರವಾರ

10 hours ago