Andolana originals

ಮಂಜಿನ ನಗರಿಯತ್ತ ಪ್ರವಾಸಿಗರ ದಂಡು

  • ವಿವಿಧ ಕಾರಣಗಳಿಂದ ಕೊಡಗಿನತ್ತ ಮುಖ ಮಾಡಿದ ಪ್ರವಾಸಿಗರು
  • ಪ್ರವಾಸಿ ತಾಣಗಳಿಗೆ ಭೇಟಿ ನೀಡುವವರ ಸಂಖ್ಯೆ ಏರಿಕೆ

ಮಡಿಕೇರಿ: ಪೆಹಲ್ಗಾಮ್ ದಾಳಿ, ಆಪರೇಷನ್ ಸಿಂಧೂರ, ಶಾಲಾ ಮಕ್ಕಳಿಗೆ ರಜೆ ಇರುವ ಕಾರಣಗಳಿಂದ ಕೊಡಗು ಜಿಲ್ಲೆಯತ್ತ ಪ್ರವಾಸಿಗರು ಮುಖ ಮಾಡುತ್ತಿದ್ದು, ಪ್ರವಾಸಿಗರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆ ಕಂಡಿದೆ.

ಪೆಹಲ್ಗಾಮ್ ಉಗ್ರರದಾಳಿ, ಭಾರತದ ಆಪರೇಷನ್ ಸಿಂಧೂರ ಪ್ರತಿದಾಳಿ, ಸರಣಿ ಬ್ಲಾಕ್‌ಔಟ್‌ಗಳು ಉತ್ತರ ಭಾರತದ ಇತರೆ ರಾಜ್ಯಗಳ ಪ್ರವಾಸೋದ್ಯಮದ ಮೇಲೂ ಪರಿಣಾಮ ಬೀರಿವೆ.

ಗೋವಾ, ಮಂಗಳೂರು, ಪಾಂಡಿಚೇರಿ, ಕನ್ಯಾಕುಮಾರಿಯಂತಹ ಕಡಲ ತೀರದಲ್ಲಿ ಬಿಸಿಲು ಹೆಚ್ಚಿರುವುದರಿಂದ ತಂಪಾಗಿರುವ ಪಶ್ಚಿಮ ಘಟ್ಟ ಪ್ರದೇಶಗಳನ್ನೇ ಪ್ರವಾಸಿಗರು ಆಯ್ದುಕೊಳ್ಳುತ್ತಿರುವುದು ವಿಶೇಷ. ಅದರಲ್ಲಿಯೂ ಕರ್ನಾಟಕದ ಮಲೆನಾಡು ಜಿಲ್ಲೆಗಳಲ್ಲಿ ಪ್ರಾಕೃತಿಕ ಪ್ರವಾಸಿತಾಣಗಳತ್ತ ಪ್ರವಾಸಿಗರು ಒಲವು ತೋರುತ್ತಿದ್ದು, ಅತಿಥಿ ಸತ್ಕಾರಕ್ಕೆ ಹೆಸರಾಗಿರುವ ಕೊಡಗು ಈ ತಾಣಗಳ ಪೈಕಿ ಅತಿ ಹೆಚ್ಚು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ದಕ್ಷಿಣ ಭಾತರದ ಪಶ್ಚಿಮ ಘಟ್ಟ ಸಾಲುಗಳಲ್ಲಿನ ಬಹುತೇಕ ಜಿಲ್ಲೆಗಳಲ್ಲಿಯೂ ಅಕರ್ಷಕ ಪ್ರಕೃತಿ ತಾಣಗಳಿವೆ. ಆದರೆ ಹೆಚ್ಚು ಪ್ರವಾಸಿಗರು ಕೊಡಗನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಕಾರಣ ಇಲ್ಲಿನ ತಂಪಾದ ವಾತಾವರಣ. ಪೂರ್ವ ಮುಂಗಾರು ಉತ್ತಮವಾಗಿ ಆಗುತ್ತಿರುವುದರಿಂದ ಈಗ ಕೊಡಗಿನಲ್ಲಿ ತಂಪಾದ ವಾತಾವರಣ ಕಂಡುಬರುತ್ತಿದೆ.

ಮತ್ತೊಂದೆಡೆ ಹೋಂ ಸ್ಟೇಗಳಲ್ಲಿ ಈ ಹಿಂದೆ ಇದ್ದ ಸಮಸ್ಯೆಗಳು ಬಹುತೇಕ ದೂರಾಗಿದ್ದು, ಅನಽಕೃತ ಹೋಂ ಸ್ಟೇಗಳು ಕಡಿಮೆಯಾಗಿವೆ. ಒಂದಷ್ಟು ಅನಽಕೃತ ಹೋಂ ಸ್ಟೇಗಳಿದ್ದರೂ ಬಹುತೇಕ ಮಾಲೀಕರು ಪ್ರವಾಸೋದ್ಯಮ ಇಲಾಖೆಯಲ್ಲಿ ನೋಂದಣಿ ಮಾಡಿಸಿಕೊಂಡು ಶಿಸ್ತುಬದ್ಧವಾಗಿ ನಿರ್ವಹಣೆ ಮಾಡುತ್ತಿದ್ದಾರೆ. ಇದರಿಂದ ಟೂರಿಸಂ ಪ್ಲಾಟ್ ಫಾರಂಗಳಲ್ಲಿ ಕೊಡಗು ಪ್ರವಾಸಕ್ಕೆ ಆದ್ಯತೆ ನೀಡಲಾಗುತ್ತದೆ. ಜಿಲ್ಲೆಯಲ್ಲಿರುವ ಹೆಚ್ಚಿನ ಹೋಂ ಸ್ಟೇ ಮತ್ತು ರೆಸಾರ್ಟ್‌ಗಳು ಉತ್ತಮ ರೇಟಿಂಗ್ ಮತ್ತು ರಿವ್ಯೂಗಳೊಂದಿಗೆ ಪ್ರವಾಸಿಗರಿಗೆ ಉತ್ತಮ ಸೇವೆ ನೀಡುತ್ತಿವೆ.

೨೦೨೪ ಏಪ್ರಿಲ್‌ನಿಂದ ಮೇ ೨ನೇ ವಾರದವರೆಗೆ ಒಟ್ಟಾರೆ ೧೧. ೬೫ ಲಕ್ಷ ಪ್ರವಾಸಿಗರು ಜಿಲ್ಲೆಗೆ ಭೇಟಿ ನೀಡಿದ್ದರು. ಈ ಬಾರಿ ಪ್ರವಾಸಿ ತಾಣಗಳಿಗೆ ಭೇಟಿ ನೀಡಿದವರ ಸಂಖ್ಯೆಯೇ ೧೧. ೯೫ ಲಕ್ಷದಷ್ಟಿದ್ದು, ರೆಸಾರ್ಟ್‌ಗಳಲ್ಲಿದ್ದವರು, ಹೋಂ ಸ್ಟೇಗಳಲ್ಲಿ ಕಳೆದ ಬಾರಿಗಿಂತ ಈ ಬಾರಿ ಅಂದಾಜು ೨. ೫ ಲಕ್ಷ ಪ್ರವಾಸಿಗರು ಹೆಚ್ಚುವರಿಯಾಗಿ ಭೇಟಿ ನೀಡಿದ್ದಾರೆ. ೧೫ ದಿನಗಳಲ್ಲಿಯೇ ಪ್ರವಾಸಿಗರ ಭೇಟಿಯಲ್ಲಿ ೧. ೫ಲಕ್ಷ ಹೆಚ್ಚಾಗಿದೆ ಎಂದು ಪ್ರವಾಸೋದ್ಯಮ ಇಲಾಖೆ ಮಾಹಿತಿ ನೀಡಿದೆ.

ಟ್ರಾವಲ್ ಏಜೆಂಟ್‌ಗಳು ಮತ್ತು ಆನ್‌ಲೈನ್ ಬುಕ್ಕಿಂಗ್ ಆಪ್‌ಗಳ ಮೂಲಕ ತಿಂಗಳ ಮೊದಲೇ ಬುಕ್ ಮಾಡಿದ್ದ ಉತ್ತರದ ಪ್ರವಾಸ ರದ್ದಾಗಿದೆ. ಆದರೆ ಬಹುತೇಕ ಟ್ರಾವಲ್ ಏಜೆಂಟ್‌ಗಳು ರದ್ದಾದ ಪ್ರವಾಸದ ಬುಕ್ಕಿಂಗ್ ಹಣ ಹಿಂದಿರುಗಿಸುವ ಬದಲು ಅವರಿಗೆ ದಕ್ಷಿಣದ ಆಯ್ಕೆ ನೀಡುತ್ತಿದ್ದಾರೆ. ಹೀಗಾಗಿ ಯೋಜಿತ ಪ್ರವಾಸವನ್ನು ರದ್ದುಗೊಳಿಸುವ ಬದಲು ಪ್ರವಾಸಿಗರು ಉತ್ತರದ ಬದಲು ದಕ್ಷಿಣವನ್ನು ಆಯ್ಕೆ ಮಾಡಿಕೊಂಡು ಇತ್ತ ಬರುತ್ತಿದ್ದಾರೆ. ಇದರಿಂದ ದಕ್ಷಿಣ ಭಾರತದ ಬಹುತೇಕ ಪ್ರವಾಸಿತಾಣಗಳಲ್ಲಿ ಪ್ರವಾಸಿಗರ ಹರಿವು ಹೆಚ್ಚಳವಾಗಿದೆ.

ಆಂದೋಲನ ಡೆಸ್ಕ್

Recent Posts

ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್:‌ ಸಚಿವ ಮುನಿಯಪ್ಪ

ಬೆಂಗಳೂರು: ಹಳ್ಳಿಗಳಲ್ಲಿ ಗೃಹ ಬಳಕೆಯವರಿಗೆ 45 ದಿನಕ್ಕೆ ಒಂದು ಸಿಲಿಂಡರ್ ಪೂರೈಕೆ ಮಾಡಲಾಗುತ್ತದೆ ಎಂದು ಆಹಾರ ಮತ್ತು ನಾಗರಿಕ ಸರಬರಾಜು…

5 mins ago

ಹನೂರು| ಕಾಡಾನೆ ದಾಳಿ: ಆಟೋ ಜಖಂ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಂಚಾಪುರ ಗ್ರಾಮದಿಂದ ಒಡೆಯರ ಪಾಳ್ಯ ಗ್ರಾಮಕ್ಕೆ ವ್ಯಾಪಾರ ಮಾಡಲು…

1 hour ago

ಪಶ್ಚಿಮ ಏಷ್ಯಾದಲ್ಲಿ ಹೆಚ್ಚಾದ ಉದ್ವಿಗ್ನತೆ: ಮನ್‌ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ ಹೇಳಿದ್ದಿಷ್ಟು.!

ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವಂತೆ ಭಾರತೀಯ ನಾಗರಿಕರು ಒಗ್ಗಟ್ಟಾಗಿರುವಂತೆ ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ. ಪ್ರಧಾನಿ ನರೇಂದ್ರ…

2 hours ago

ಆರೋಗ್ಯ ಕೇಂದ್ರದ ಮುಂಭಾಗವೇ ವಾಹನಗಳ ಪಾರ್ಕಿಂಗ್:‌ ಸಾರ್ವಜನಿಕರಿಗೆ ಕಿರಿಕಿರಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಪ್ರಾಥಮಿಕ ಆರೋಗ್ಯ ಕೇಂದ್ರದ…

2 hours ago

ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ನಿವಾಸಿಗಳಿಂದ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಹೂಗ್ಯಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭೋವಿ ಸಮುದಾಯದ ಕಾಲೋನಿಗೆ…

2 hours ago

ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು: ಸಿಎಂ ಸಿದ್ದರಾಮಯ್ಯ

ಮೈಸೂರು: ನ್ಯಾಯ ವಿತರಣೆಯಲ್ಲಿ ಪೊಲೀಸರು ರಾಜಿಯಾಗಬಾರದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಘಟಕದ 46ನೇ ತಂಡದ ಸಿವಿಲ್‌ ಪೊಲೀಸ್‌…

3 hours ago