ಬಹುಭಾಷಾ ನಟ ಕಮಲ್ ಹಾಸನ್ ಒಬ್ಬ ವೈಚಾರಿಕ ಪ್ರಜ್ಞೆಯುಳ್ಳವರಾಗಿದ್ದು, ತಮ್ಮ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವ ವೇಳೆ ಕನ್ನಡದ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಮುಂದೆಯೇ ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದ್ದು ಎಂದು ಹೇಳುವ ಮೂಲಕ ತಮಿಳು ಭಾಷೆ ಕನ್ನಡ ಭಾಷೆಯ ತಾಯಿ ಎನ್ನುವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ.
ಈ ಹೇಳಿಕೆಯಿಂದಾಗಿ ಕರ್ನಾಟಕದ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಅಲ್ಲದೆ ಈ ವಿಷಯವಾಗಿ ನಾನು ಕ್ಷಮೆ ಯಾಚಿಸುವುದಿಲ್ಲ,ಅದನ್ನು ಪ್ರೀತಿಯಿಂದ ಹೇಳಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿ ಕೊಂಡಿದ್ದಾರೆ. ತಮ್ಮ ಮಾತೃಭಾಷೆಯ ಮೇಲಿನ ಅಭಿಮಾನ ಮೆರೆಯು ವುದ್ದಕ್ಕಾಗಿ ಮತ್ತೊಂದು ಭಾಷೆಯ ಜನರ ಭಾವನೆಗಳಿಗೆ ಧಕ್ಕೆ ತರುವುದು ಕಮಲ್ ಹಾಸನ್‌ಗೆ ಶೋಭೆ ತರುವುದಿಲ್ಲ. ಇದು ಅತ್ಯಂತ ಖಂಡನೀಯ ಮತ್ತು ವಿಷಾದನೀಯ ಸಂಗತಿ . ಇದರ ಬಗ್ಗೆ ಕನ್ನಡ ಚಿತ್ರರಂಗದ ನಟರು ಮೌನ ಮುರಿಯಬೇಕಿದೆ. ಕಮಲ್ ಹಾಸನ್ ಕೂಡಲೇ ತಮ್ಮ ಹೇಳಿಕೆ ಹಿಂಪಡೆದು ಕನ್ನಡಿಗರ ಕ್ಷಮೆಯಾಚಿಸಬೇಕು.
– ಎಂ. ಪಿ. ದರ್ಶನ್ ಚಂದ್ರ. ಮುಕ್ಕಡಹಳ್ಳಿ, ಚಾಮರಾಜನಗರ





