Andolana originals

ಓದುಗರ ಪತ್ರ | ಕಮಲ್ ಹಾಸನ್ ತಮ್ಮ ಹೇಳಿಕೆ ಹಿಂಪಡೆಯಲಿ

ಬಹುಭಾಷಾ ನಟ ಕಮಲ್ ಹಾಸನ್ ಒಬ್ಬ ವೈಚಾರಿಕ ಪ್ರಜ್ಞೆಯುಳ್ಳವರಾಗಿದ್ದು, ತಮ್ಮ ಸಿನಿಮಾದ ಆಡಿಯೋ ಬಿಡುಗಡೆ ಕಾರ್ಯಕ್ರಮವೊಂದರಲ್ಲಿ ಭಾಷಣ ಮಾಡುವ ವೇಳೆ ಕನ್ನಡದ ಖ್ಯಾತ ನಟ ಶಿವರಾಜ್ ಕುಮಾರ್ ಅವರ ಮುಂದೆಯೇ ಕನ್ನಡ ಭಾಷೆಯು ತಮಿಳಿನಿಂದ ಹುಟ್ಟಿದ್ದು ಎಂದು ಹೇಳುವ ಮೂಲಕ ತಮಿಳು ಭಾಷೆ ಕನ್ನಡ ಭಾಷೆಯ ತಾಯಿ ಎನ್ನುವ ಅರ್ಥದಲ್ಲಿ ಹೇಳಿಕೆ ನೀಡಿದ್ದಾರೆ.

ಈ ಹೇಳಿಕೆಯಿಂದಾಗಿ ಕರ್ನಾಟಕದ ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಅಲ್ಲದೆ ಈ ವಿಷಯವಾಗಿ ನಾನು ಕ್ಷಮೆ ಯಾಚಿಸುವುದಿಲ್ಲ,ಅದನ್ನು ಪ್ರೀತಿಯಿಂದ ಹೇಳಿದ್ದೇನೆ ಎಂದು ತಮ್ಮ ಹೇಳಿಕೆಯನ್ನು ಸಮರ್ಥಿಸಿ ಕೊಂಡಿದ್ದಾರೆ. ತಮ್ಮ ಮಾತೃಭಾಷೆಯ ಮೇಲಿನ ಅಭಿಮಾನ ಮೆರೆಯು ವುದ್ದಕ್ಕಾಗಿ ಮತ್ತೊಂದು ಭಾಷೆಯ ಜನರ ಭಾವನೆಗಳಿಗೆ ಧಕ್ಕೆ ತರುವುದು ಕಮಲ್ ಹಾಸನ್‌ಗೆ ಶೋಭೆ ತರುವುದಿಲ್ಲ. ಇದು ಅತ್ಯಂತ ಖಂಡನೀಯ ಮತ್ತು ವಿಷಾದನೀಯ ಸಂಗತಿ . ಇದರ ಬಗ್ಗೆ ಕನ್ನಡ ಚಿತ್ರರಂಗದ ನಟರು ಮೌನ ಮುರಿಯಬೇಕಿದೆ. ಕಮಲ್ ಹಾಸನ್ ಕೂಡಲೇ ತಮ್ಮ ಹೇಳಿಕೆ ಹಿಂಪಡೆದು ಕನ್ನಡಿಗರ ಕ್ಷಮೆಯಾಚಿಸಬೇಕು.

– ಎಂ. ಪಿ. ದರ್ಶನ್ ಚಂದ್ರ. ಮುಕ್ಕಡಹಳ್ಳಿ, ಚಾಮರಾಜನಗರ

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

11 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

12 hours ago