Andolana originals

ಸಿಮ್ಸ್‌ ಆಸ್ಪತ್ರೆಯಲ್ಲಿ ಸದ್ಯದಲ್ಲೇ ಎಂಆರ್‌ಐ ಸೇವೆ

ಫೆ. ೧೮ರಂದು  ವೈದ್ಯಕೀಯ ಶಿಕ್ಷಣ ಸಚಿವರಿಂದ ಸೇವೆಗೆ ಸಮರ್ಪಣೆ

ಪ್ರಸಾದ್ ಲಕ್ಕೂರು
ಚಾಮರಾಜನಗರ: ನಗರದ ಹೊರವಲಯದ ಯಡ ಬೆಟ್ಟದ ತಪ್ಪಲಿನಲ್ಲಿರುವ ಚಾಮರಾಜನಗರ ಸರ್ಕಾರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಸಿಮ್ಸ್) ಬೋಧನಾ ಆಸ್ಪತ್ರೆಯಲ್ಲಿ ರೋಗಿಗಳಿಗೆ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ಶೀಘ್ರ ಲಭ್ಯವಾಗಲಿದೆ.

ಫೆ. ೧೮ರಂದು ನಗರದಲ್ಲಿ ನಡೆಯುವ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಸಮಾವೇಶಕ್ಕೆ ಆಗಮಿಸುವ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್ ಅವರಿಂದ ಉದ್ಘಾಟಿಸಿ ಸಾರ್ವಜನಿಕರ ಸೇವೆಗೆ ಸಮರ್ಪಿಸಲಾಗುತ್ತದೆ.

ಬೋಧನಾ ಆಸ್ಪತ್ರೆಯಲ್ಲಿ ಈಗಾಗಲೇ ಎಂ. ಆರ್. ಐ. ಸ್ಕ್ಯಾನಿಂಗ್ ಯಂತ್ರೋಪಕರಣಗಳನ್ನು ಅಳವಡಿಸಲಾಗಿದ್ದು, ಸಿವಿಲ್ ಕೆಲಸಗಳನ್ನು ಸಹ ಮುಗಿಸಲಾಗಿದೆ. ಪ್ರಾಯೋಗಿಕ ಕಾರ್ಯ ನಡೆಸಿ ರೋಗಿಗಳ ಸೇವೆಗೆ ಸಜ್ಜುಗೊಳಿಸಲಾಗಿದೆ.

ವೈದ್ಯಕೀಯ ಶಿಕ್ಷಣ ಇಲಾಖೆಯ ನಿರ್ದೇಶಕರು ೪ ಕೋಟಿ ರೂ. ವೆಚ್ಚದಲ್ಲಿ ಎಂಆರ್‌ಐ ಸ್ಕ್ಯಾನಿಂಗ್ ಘಟಕ ವನ್ನು ಸಿಮ್ಸ್ ಬೋಧನಾ ಆಸ್ಪತ್ರೆಯಲ್ಲಿ ಸ್ಥಾಪಿಸುವ ಟೆಂಡರ್ ಅನ್ನು ಯುನೈಟೆಡ್ ಇಮೆಜಸ್ ಸಂಸ್ಥೆಗೆ ನೀಡಿದ್ದರು. ಸಂಸ್ಥೆ ಈಗಾಗಲೇ ಯಂತ್ರೋಪಕರಣಗಳನ್ನು ಜೋಡಿಸಿದ್ದು ಸಂಬಂಧಪಟ್ಟ ಇಂಜಿನಿಯರ್ ಎಲ್ಲವನ್ನೂ ಪರಿಶೀಲಿಸಿ ಹೋಗಿದ್ದಾರೆ.

೧. ೫ ಟೆಸ್ಲಾ ಸಾಮರ್ಥ್ಯದ ಅತ್ಯಾಧುನಿಕ ಸ್ಕ್ಯಾನಿಂಗ್ ಯಂತ್ರೋಪಕರಣ ಅಳವಡಿಸಲಾಗಿದೆ. ಅಪಘಾತಕ್ಕೆ ಒಳಗಾಗಿ ತಲೆಗೆ ಪೆಟ್ಟು ಬಿದ್ದು ಮೆದುಳಿಗೆ ತೊಂದರೆಯಾ ಗಿದ್ದರೆ ಮತ್ತು ಬೆನ್ನು ಉರಿಗೆ ಪೆಟ್ಟಾಗಿದ್ದರೆ ಎಂಆರ್‌ಐ ಸ್ಕ್ಯಾನಿಂಗ್ ಮಾಡಿ ನಿಖರ ಕಾರಣ ಕಂಡುಹಿಡಿದು ಚಿಕಿತ್ಸೆ ನೀಡಲು ಸಾಧ್ಯವಾಗಲಿದೆ ಎಂದು ಸಿಮ್ಸ್ ನಿರ್ದೇಶಕರು ತಿಳಿಸಿದ್ದಾರೆ.

ಸರ್ಕಾರಿ ವೈದ್ಯಕೀಯ ಕಾಲೇಜಿನ ೭೦೦ ಹಾಸಿಗೆಗಳ ಹುದೊಡ್ಡ ಈ ಬೋಧನಾ ಆಸ್ಪತ್ರೆಯಲ್ಲಿ ಎಲ್ಲ ಸೌಲಭ್ಯಗಳು ಸಿಗಬೇಕು ಎಂಬ ಉದ್ದೇಶದಿಂದ ಸಿಟಿ ಸ್ಕ್ಯಾನ್, ಅಟ್ಟ್ರಾ ಸೌಂಡ್ ಸ್ಕ್ಯಾನ್, ಎಕ್ಸ್‌ರೇ ಘಟಕಗಳನ್ನು ತೆರೆಯಲಾಗಿದೆ. ಎಂಆರ್‌ಐ ಸ್ಕ್ಯಾನಿಂಗ್ ಪ್ರಾರಂಭಿಸುವುದು ಮಾತ್ರ ಬಾಕಿಯಿದೆ.

ಜಿಲ್ಲೆಯ ವ್ಯಾಪ್ತಿಯಲ್ಲಿ ಅಪಘಾತಗಳಾಗಿ ತಲೆಗೆ ಬಲವಾಗಿ ಪೆಟ್ಟಾದವರನ್ನು, ಪಾರ್ಶ್ವವಾಯುಗೆ ತುತ್ತಾದವ ರನ್ನು, ಬೆನ್ನು ಉರಿ ಸಮಸ್ಯೆಗೆ ಒಳಗಾದವರನ್ನು ಎಂಆರ್‌ಐ ಸ್ಕ್ಯಾನ್ ಮಾಡಿಸಿಕೊಂಡು ಬರುವಂತೆ ಮೈಸೂರಿಗೆ ಕಳುಹಿಸಲಾಗುತ್ತಿತ್ತು. ಅಲ್ಲಿಂದ ಸ್ಕ್ಯಾನಿಂಗ್ ವರದಿ ಬಂದ ಬಳಿಕ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಜಿಲ್ಲಾ ಮಟ್ಟದ ಬಹುದೊಡ್ಡ ಬೋಧನಾ ಆಸ್ಪತ್ರೆಯಲ್ಲಿ ಪ್ರಮುಖವಾದ ಎಂಆರ್‌ಐ ಸ್ಕ್ಯಾನಿಂಗ್ ಸೌಲಭ್ಯ ವಿರಲಿಲ್ಲ. ಇದನ್ನು ಆರಂಭಿಸಬೇಕೆಂಬ ಸಾರ್ವಜನಿಕರ ಕೂಗು ಬೋಧನಾ ಆಸ್ಪತ್ರೆ ಪ್ರಾರಂಭವಾದಗಿನಿಂದಲೂ ಇತ್ತು.

ಪಕ್ಕದ ಕೊಡಗು ಜಿಲ್ಲೆಯಲ್ಲಿ ಈ ಸೌಲಭ್ಯ ಲಭ್ಯವಾಗುತ್ತಿದೆ. ಇಷ್ಟೊತ್ತಿಗಾಗಲೇ ಈ ಸೌಲಭ್ಯ ಸಿಮ್ಸ್ ಆಸ್ಪತ್ರೆಯಲ್ಲಿ ಲಭಿಸಬೇಕಿತ್ತು ತಾಂತ್ರಿಕ, ಆಡಳಿತಾತ್ಮಕ ಕಾರಣಗಳು, ಅನುದಾನ ಬಿಡುಗಡೆ ವಿಳಂಬವಾದ ಕಾರಣ ಮುಂದೂಡಿಕೆ ಆಗಿತ್ತು.

ಎಸ್ಸಿ, ಎಸ್ಟಿ, ಎಬಿಆರ್‌ಕೆ ಕಾರ್ಡುದಾರರಿಗೆ ಉಚಿತ
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಕಾರ್ಡ್ ಹೊಂದಿರುವ ರೋಗಿ ಮತ್ತು ಪರಿಶಿಷ್ಟ ಜಾತಿ, ಪ. ಪಂಗಡಗಳ ರೋಗಿಗಳಿಗೆ ಎಂಆರ್‌ಐ ಸ್ಕ್ಯಾನ್ ಉಚಿತವಾಗಿರುತ್ತದೆ. ಉಳಿದವರು ಸರ್ಕಾರ ನಿಗದಿ ಮಾಡಿರುವ ಸೇವಾ ಶುಲ್ಕವನ್ನು ಪಾವತಿಸಿ ಸೇವೆ ಪಡೆದುಕೊಳ್ಳಬಹುದು. ಎಂಆರ್‌ಐ ಸ್ಕ್ಯಾನಿಂಗ್ ಕಡು ಬಡವರು, ಮಧ್ಯಮ ವರ್ಗದ ಜನರಿಗೆ ದುಬಾರಿಯಾ ಗಿದೆ. ಅಲ್ಲದೆ ಮೈಸೂರಿನ ಆಸ್ಪತ್ರೆಗಳಿಗೆ ತೆರಳಿ ಮಾಡಿಸಿ ಕೊಂಡು ಬರುವುದು ಮತ್ತಷ್ಟು ಆರ್ಥಿಕ ಹೊರೆಯಾಗಿತ್ತು.

ಆಂದೋಲನ ಡೆಸ್ಕ್

Recent Posts

ಖಾಸಗಿ ಶಾಲೆಗಳಲ್ಲಿ ಕಡ್ಡಾಯವಾಗಿ ಕನ್ನಡ ಕಲಿಸದೇ ಹೋದರೆ ಕ್ರಮ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ರಾಜ್ಯದ ಎಲ್ಲಾ ಮಾದರಿ ಬೋರ್ಡ್‌ಗಳು ಕಡ್ಡಾಯವಾಗಿ ಕನ್ನಡ ಭಾಷೆ ಕಲಿಸಬೇಕು. ಇಲ್ಲದೇ ಹೋದರೆ ಅಂತಹ ಶಾಲೆಗಳ ಮೇಲೆ ಕ್ರಮ…

6 hours ago

ಹನೂರು| ರಸ್ತೆಯಲ್ಲಿ ಹುಲಿ ದರ್ಶನ: ವಿಡಿಯೋ ವೈರಲ್‌

ಹನೂರು: ತಾಲೂಕಿನ ಮಿಣ್ಯಂ ಗ್ರಾಮದಿಂದ ಹನೂರಿಗೆ ಆಗಮಿಸುತ್ತಿದ್ದ ಪ್ರಯಾಣಿಕರಿಗೆ ಅರಣ್ಯ ವ್ಯಾಪ್ತಿಯಲ್ಲಿ ಹುಲಿರಾಯ ದರ್ಶನ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ…

7 hours ago

ಶೀಘ್ರದಲ್ಲೇ ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ: ರಹೀಂ ಖಾನ್‌

ಬೆಳಗಾವಿ: ಆದಷ್ಟು ಬೇಗ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲಾಗುತ್ತದೆ ಎಂದು ಸಚಿವ ರಹೀಂ ಖಾನ್‌ ತಿಳಿಸಿದರು. ವಿಧಾನಪರಿಷತ್‌ ಕಲಾಪದಲ್ಲಿ…

7 hours ago

ಎಚ್‌ಡಿಕೆ ಹುಟ್ಟುಹಬ್ಬ: ಮಂಡ್ಯದಲ್ಲಿ ಕಾರ್ಯಕರ್ತರಿಂದ ಅದ್ಧೂರಿ ಆಚರಣೆ

ಮಂಡ್ಯ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಂಡ್ಯ ಜಿಲ್ಲೆಯ ಜೆಡಿಎಸ್‌ ಕಾರ್ಯಕರ್ತರು ಅದ್ಧೂರಿಯಾಗಿ ಆಚರಣೆ ಮಾಡಿದರು. ಮದ್ದೂರಿನಲ್ಲಿ ಮಾಜಿ…

7 hours ago

ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ: ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಿಷ್ಟು.!

ಬೆಳಗಾವಿ: ಕೋಳಿ ಮೊಟ್ಟೆ ಸೇವಿಸಿದರೆ ಕ್ಯಾನ್ಸರ್‌ ಬರುವ ವದಂತಿ ಎಲ್ಲೆಡೆ ಹಬ್ಬಿರುವ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್‌ ಪ್ರತಿಕ್ರಿಯೆ…

7 hours ago

ಮಳವಳ್ಳಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಆಗಮನ

ಮಳವಳ್ಳಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಮಳವಳ್ಳಿಯಲ್ಲಿ ನಡೆಯಲಿರುವ ಸುತ್ತೂರಿನ ಆದಿ ಜಗದ್ಗುರು ಶ್ರೀ ಶಿವರಾತ್ರಿ ಶಿವ ಯೋಗಿಗಳರವರ 1066ನೇ ಜಯಂತಿ…

8 hours ago