Andolana originals

ಶುಚಿತ್ವವಿಲ್ಲದ ಬಹುಗ್ರಾಮ ಕುಡಿಯುವ ನೀರಿನ ಘಟಕ

ನಿರ್ವಹಣೆ ಇಲ್ಲದೆ ಕಲುಷಿತ ನೀರು ಪೂರೈಕೆ ಆರೋಪ; ಸಾಂಕ್ರಾಮಿಕ ಕಾಯಿಲೆ ಭೀತಿ 

ಗುಂಡ್ಲುಪೇಟೆ: ತಾಲ್ಲೂಕಿನ ಕುರುಬರಹುಂಡಿ ಬಳಿ ಇರುವ ನೀರಿನ ಘಟಕದಿಂದ ನೂರಾರು ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಯಾಗುತ್ತಿದ್ದು, ಈ ಘಟಕದಲ್ಲಿ ಕಳೆದ ಒಂದು ವರ್ಷದಿಂದ ಸರಿಯಾಗಿ ನಿರ್ವಹಣೆ ಮಾಡದೇ ಇರುವುದರಿಂದ ಘಟಕದಿಂದ ಕೆಸರು ಮಿಶ್ರಿತ ನೀರು ಪೂರೈಕೆಯಾಗುತ್ತಿದ್ದು, ಜನರು ಆತಂಕಕ್ಕೆ ಒಳಗಾಗಿದ್ದಾರೆ.

ಕೆಲವು ದಿನಗಳಿಂದ ಕೆಂಪು ಮತ್ತು ಬೂದು ಮಿಶ್ರಿತ ನೀರು ಪೂರೈಕೆಯಾಗುತ್ತಿದ್ದು ಈ ನೀರನ್ನು ಜನರು ನೇರವಾಗಿ ಕುಡಿಯಲು, ಅಡುಗೆ ಮಾಡಲು ಬಳಸುತ್ತಿರುವುದರಿಂದ ಜನರಿಗೆ ವಾಂತಿ, ಭೇದಿ ಕಾಣಿಸಿಕೊಳ್ಳುವ ಲಕ್ಷಣಗಳಿವೆ. ಇದು ಸಾಂಕ್ರಾಮಿಕ ರೋಗಕ್ಕೂ ತಿರುಗುವ ಸಾಧ್ಯತೆ ಇದೆ. ಆದ್ದರಿಂದ ಬಹುಗ್ರಾಮ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಎಚ್ಚೆತ್ತುಕೊಂಡು ಸಮಸ್ಯೆ ಬಗೆಹರಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.

ಸರ್ಕಾರ ಕೋಟ್ಯಂತರ ರೂ. ವೆಚ್ಚದಲ್ಲಿ ಮನೆ ಮನೆಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಯೋಜನೆ ರೂಪಿಸಿದೆ. ಆದರೆ, ಶುದ್ಧ ನೀರು ಪೂರೈಕೆಯಾಗದೆ ಜನರ ಆರೋಗ್ಯ ಹದಗೆಟ್ಟರೆ ಯಾರು ಹೊಣೆ ಎಂಬ ಪ್ರಶ್ನೆ ಉದ್ಭವಿಸಿದೆ.

ಇದನ್ನು ಓದಿ: ಟಿಎಪಿಸಿಎಂಎಸ್ ಸದಸ್ಯರಿಗೆ ಮತಹಕ್ಕು ಕಳೆದುಕೊಳ್ಳುವ ಭೀತಿ

ಇದರ ಜೊತೆಗೆ ಪ್ರತಿ ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳಿಗೂ ಆಯಾ ಪಿಡಿಒಗಳು ಭೇಟಿ ನೀಡಿ ನೀರಿನ ಟ್ಯಾಂಕ್ ಪರಿಶೀಲಿಸಿ ತಿಂಗಳಿಗೊಮ್ಮೆಯಾದರೂ ಸ್ವಚ್ಛತೆ ಮಾಡಿಸಬೇಕು. ಅಲ್ಲದೆ ಈ ಬಗ್ಗೆ ಇಒ ಮಟ್ಟದಲ್ಲಿ ತಾಲ್ಲೂಕಿನ ನೀರುಗಂಟಿಗಳ ಸಭೆ ಕರೆದು ಟ್ಯಾಂಕ್‌ಗಳ ಶುಚಿತ್ವಕ್ಕೆ ಸೂಚಿಸಬೇಕೆಂಬ ಒತ್ತಾಯ ಕೇಳಿಬಂದಿದೆ.

” ಗುರುವಾರವೇ ಇಂಜಿನಿಯರ್ರನ್ನು ಕಳಿಸಿ ಪರಿಶೀಲಿಸಲಾಗುವುದು. ಅಲ್ಲಿ ಬೈಪಾಸ್ ಲಿಂಕ್ ನೀಡಿರುವುದರಿಂದ ಮಣ್ಣು ಸೇರಿಕೊಂಡಿರಬಹುದು. ಕೂಡಲೇ ಪೂರೈಕೆ ಸ್ಥಗಿತಗೊಳಿಸಿ, ಶುದ್ಧ ನೀರು ಬರುವಂತೆ ಕ್ರಮ ವಹಿಸಲಾಗುವುದು.”

-ಸಹನ, ಎಇಇ, ಬಹುಗ್ರಾಮ

” ಕುಡಿಯುವ ನೀರಿನ ಯೊಜನೆ ಮತ್ತು ನೈರ್ಮಲ್ಯ ಇಲಾಖೆ ನೀರು ಕೆಂಪು ಮತ್ತು ಬೂದು ಬಣ್ಣ ಮಿಶ್ರಿತವಾಗಿ ಬರುತ್ತಿದ್ದು ಗ್ರಾಮೀಣ ಜನರ ಮನೆಯಲ್ಲಿ ಕುಡಿಯಲು, ಅಡುಗೆಗೆ ಆ ನೀರನ್ನೇ ಬಳಸುವುದರಿಂದ ಆರೋಗ್ಯ ಸಮಸ್ಯೆ ಎದುರಾಗುವ ಆತಂಕವಿದೆ. ಕುರುಬರ ಹುಂಡಿ ಬಳಿ ದೊಡ್ಡ ನೀರಿನ ಘಟಕದ ನಿರ್ವಹಣೆ ಸರಿಯಾಗಿ ಮಾಡುತ್ತಿಲ್ಲ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು.”

-ಮಹೇಶ್, ಸ್ಥಳೀಯರು

-ಮಹೇಂದ್ರ ಹಸಗೂಲಿ

ಆಂದೋಲನ ಡೆಸ್ಕ್

Recent Posts

ಹನೂರು| ಕಾಡಾನೆ ದಾಳಿಗೆ ಬೆಳೆ ನಾಶ: ಆತ್ಮಹತ್ಯೆ ಎಚ್ಚರಿಕೆ ನೀಡಿದ ಅನ್ನದಾತ

ಹನೂರು: ಜಮೀನಿನಲ್ಲಿ ಬೆಳೆದಿರುವ ತರಕಾರಿ ಬೆಳೆಗಳನ್ನು ಕಾಡಾನೆಗಳ ಹಿಂಡು ಕಳೆದ ಮೂರು ದಿನಗಳಿಂದ ರಾತ್ರಿ ವೇಳೆ ದಾಳಿ ನಡೆಸಿ ಬೆಳೆ…

28 mins ago

ಬ್ಯಾಡ್ಮಿಂಟನ್‌ ಅಂಗಳಕ್ಕೆ ಸೈನಾ ನೆಹ್ವಾಲ್‌ ವಿದಾಯ

ಹೈದರಾಬಾದ್: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅವರು ಅಂತರರಾಷ್ಟೀಯ ಪಂದ್ಯಾವಳಿಗೆ ನಿವೃತ್ತಿ ಘೋಷಿಸಿದ್ದಾರೆ. ಗಾಯದ ಸಮಸ್ಯೆಯಿಂದ ಬಳಲುತ್ತಿದ್ದ…

40 mins ago

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್‌ ನಬಿನ್‌ ಅಧಿಕಾರ ಸ್ವೀಕಾರ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ನಿತಿನ್ ನಬಿನ್ ಅವರು ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರ ಹರ್ಷೋದ್ಘಾರದ ನಡುವೆ…

57 mins ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ

ಮೈಸೂರು: ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನ ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಶಹಬಾಜ್‌ ಎಂಬಾತನೇ ಕೊಲೆಯಾದ ಯುವಕನಾಗಿದ್ದಾನೆ.…

1 hour ago

ಎಚ್.ಡಿ.ಕೋಟೆ: ಕಬಿನಿ ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆ ಪ್ರತಿಭಟನೆ

ಎಚ್.ಡಿ.ಕೋಟೆ: ಕಬಿನಿ ಜಲಾಶಯವನ್ನು ಉಳಿಸುವಂತೆ ಒತ್ತಾಯಿಸಿ ರೈತ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಯಿತು. ಎಚ್.ಡಿ.ಕೋಟೆ ತಾಲ್ಲೂಕು ಕಚೇರಿ ಮುಂದೆ ಜಮಾಯಿಸಿದ ರೈತ…

1 hour ago

ಈಗಿರುವ ಬಿಜೆಪಿ ನಾಯಕರಿಗೆ ಮೆಚ್ಯುರಿಟಿ ಇಲ್ಲ: ಸಚಿವ ಭೋಸರಾಜು ವ್ಯಂಗ್ಯ

ಮಡಿಕೇರಿ: ವಿಪಕ್ಷ ನಾಯಕ ಆರ್.ಅಶೋಕ್ ಅವರಿಗೆ ಮೆಚ್ಯುರಿಟಿ ಇಲ್ಲ ಅಂತಾ ಬಿಜೆಪಿಯವರೇ ಹೇಳುತ್ತಾರೆ ಎಂದು ಸಚಿವ ಭೋಸರಾಜು ವ್ಯಂಗ್ಯವಾಡಿದ್ದಾರೆ. ಅಬಕಾರಿ…

2 hours ago