Mysore
25
mist

Social Media

ಶನಿವಾರ, 19 ಅಕ್ಟೋಬರ್ 2024
Light
Dark

ಓದುಗರ ಪತ್ರ: ಬರ್ಬರ ಹತ್ಯೆಗಳಿಗೆ ಕೊನೆ ಎಂದು?

ಶ್ರದ್ಧಾ ವಾಕರ್ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿ ಇರಿಸಿದ್ದ ಪ್ರಕರಣ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿತ್ತು. ಪ್ರೇಯಸಿಯನ್ನೇ ಇಷ್ಟೊಂದು ಅಮಾನುಷವಾಗಿ ಕೊಲೆ ಮಾಡಿದ ಈ ಪ್ರಕರಣ ಭಾರೀ ಸಂಚಲನವನ್ನೇ ಮೂಡಿಸಿತ್ತು. ಇಂತಹ ಪ್ರಕರಣ ಜನರ ಮನಸ್ಸಿನಿಂದ ಮಾಸುವ ಮುನ್ನವೇ ಈಗ ಬೆಂಗಳೂರಿನಲ್ಲಿಯೂ ಅಂತಹದ್ದೇ ಭೀಕರ ಹತ್ಯೆ ನಡೆದಿರುವುದು ನಾಗರಿಕ ಸಮಾಜಕ್ಕೆ ಆಘಾತವನ್ನು ಉಂಟು ಮಾಡಿದೆ.

ಇತ್ತೀಚಿನ ದಿನಗಳಲ್ಲಿ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ, ಕೊಲೆ ಪ್ರಕರಣಗಳು ಹೆಚ್ಚುತ್ತಿವೆ. ಕೌಟುಂಬಿಕ ಕಲಹಗಳಿರಲಿ, ಪ್ರೀತಿ-ಪ್ರೇಮದ ಪ್ರಕರಣಗಳಿರಲಿ ಅಲ್ಲಿ ಬಲಿ ಯಾಗುವುದು ಮಾತ್ರ ಹೆಣ್ಣು ಮಕ್ಕಳಾಗಿರುತ್ತಾರೆ. ಸಣ್ಣ ಪುಟ್ಟ ಮನಸ್ತಾಪಗಳಿಗೂ ಯುವಕರು ಕೊಲೆ ಮಾಡುವಷ್ಟರ ಮಟ್ಟಿಗೆ ಹೋಗುತ್ತಾರೆ ಎಂದರೆ ಅವರ ಮನಸ್ಥಿತಿ ಎಂತಹದ್ದು ಎಂಬುದು ತಿಳಿಯುತ್ತದೆ. ಬೆಂಗಳೂರಿನಲ್ಲಿ ಈಗ ಅಂತಹದ್ದೇ ಕೊಲೆ ನಡೆದಿದೆ. ಮಹಾಲಕ್ಷಿ ಎಂಬ ಮಹಿಳೆಯನ್ನು ೫೦ಕ್ಕೂ ಅಽಕ ತುಂಡುಗಳಾಗಿ ಕತ್ತರಿಸಿ ಫ್ರಿಡ್ಜ್‌ನಲ್ಲಿಟ್ಟು ಪಾತಕಿ ತನ್ನ ಕ್ರೌರ್ಯವನ್ನು ಮೆರೆದಿದ್ದಾನೆ. ದೇಶದಲ್ಲಿ ಈ ಹಿಂದೆ ನಡೆದಿದ್ದ ಕೊಲೆಯನ್ನೇ ಆಧರಿಸಿ ಈ ಪಾತಕಿ ಕೊಲೆ ಮಾಡಿದ್ದಾನೆ ಎಂದರೆ ಆತನಿಗೆ ಕಾನೂನಿನ ಭಯವಿಲ್ಲ ಎಂಬುದು ತಿಳಿಯುತ್ತದೆ. ಶ್ರದ್ಧಾ ವಾಕರ್ ಪ್ರಕರಣದ ಆರೋಪಿಗೆ ಅಂದೇ ಕಠಿಣ ಶಿಕ್ಷೆಯಾಗಿದ್ದರೆ ಇಂದು ಇಂತಹ ಘಟನೆಗಳು ಮರುಕಳಿಸುತ್ತಿರಲಿಲ್ಲ. ಆದ್ದರಿಂದ ಸರ್ಕಾರ ಕೊಲೆ ಅಪರಾಧಿಗಳಿಗೆ ಕಠಿಣ ಶಿಕ್ಷೆ ವಿಧಿಸುವ ಮೂಲಕ ಮುಂದಿನ ದಿನಗಳಲ್ಲಿ ಇಂತಹ ಕೃತ್ಯಗಳು ನಡೆಯದಂತೆ ಎಚ್ಚರವಹಿಸಬೇಕು.

 

Tags: