ಓದುಗರ ಪತ್ರ
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಯ ದರ್ಶನ ಸೇವೆಗಳ ಶುಲ್ಕಗಳನ್ನು ಹೆಚ್ಚಿಸಲಾಗಿದ್ದು. ರೂ. 300 ರಿಂದ ರೂ. 550 ಹಾಗೂ ಆಷಾಢ ಶುಕ್ರವಾರದ ವಿಶೇಷ ದರ್ಶನಕ್ಕಾಗಿ 2000 ರೂ. ಟಿಕೆಟ್ ದರ ನಿಗದಿಪಡಿಸಿರುವುದು ಸರಿಯಲ್ಲ. ಚಾಮುಂಡಿ ಬೆಟ್ಟದಲ್ಲಿ ಮೂಲಭೂತ ಸೌಕರ್ಯಗಳಿಲ್ಲದೆ ಪ್ರವಾಸಿಗರು ಬೇಸರ ವ್ಯಕ್ತಪಡಿಸುತ್ತಿದ್ದಾರೆ.
ಈಗಾಗಲೇ ನೀರಿನ ಕಂದಾಯ, ವಿದ್ಯುತ್, ಸ್ಟ್ಯಾಂಪ್ ಪೇಪರ್, ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ, ಆಸ್ತಿ ನೋಂದಣಿ ಮುದ್ರಾಂಕ ಶುಲ್ಕ, ಜಮೀನು ಮತ್ತು ನಿವೇಶನಗಳ ತೆರಿಗೆಗಳನ್ನು ಏರಿಸಲಾಗಿದ್ದು ಇದರಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ. ಸರ್ಕಾರ ಕೂಡಲೇ ೨೦೦೦ ರೂ. ದುಬಾರಿ ಟಿಕೆಟ್ ವಿಶೇಷ ದರ್ಶನವನ್ನು ರದ್ದುಗೊಳಿಸಿ ಪ್ರತಿಯೊಬ್ಬರಿಗೂ ಭೇದ ಭಾವವಿಲ್ಲದೆ ದರ್ಶನ ಸಿಗುವಂತೆ ವ್ಯವಸ್ಥೆ ಕಲ್ಪಿಸಬೇಕಾಗಿದೆ.
– ಎನ್.ಪಿ.ಪರಶಿವಮೂರ್ತಿ, ನಂಜೀಪುರ, ಸರಗೂರು ತಾ
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…
ಟ್ರಾಫಿಕ್ ನಿಯಮ ಉಲ್ಲಂಘಿಸಿ ದಂಡ ಪಾವತಿಸದೆ ಬಾಕಿ ಉಳಿಸಿಕೊಂಡಿರುವವರಿಂದ ಹಣ ವಸೂಲಿ ಮಾಡಲು, ಆ ದಂಡದ ಮೊತ್ತವನ್ನು ಅವರ ಮನೆ…
ತನ್ನ ಪ್ರಾಣವನ್ನೇ ಒತ್ತೆಯಿಟ್ಟು ದುಬೈನಿಂದ ಇಸ್ರೇಲ್‌ನ ಅವೀವ್‌ಗೆ ತೆರಳುತ್ತಿದ್ದ -ದುಬೈ ವಿಮಾನ ಹೈಜಾಕ್ ತಪ್ಪಿಸಿದ ಭಾರತೀಯ ಪೈಲಟ್ ಕ್ಯಾಪ್ಟನ್ ಸ್ಮಿತ್…
ಡಾ . ಚೇತನ ಗುರುರಾಜು, ಮುಖ್ಯ ಶಿಕ್ಷಕಿ, ಅರಿವು ವಿದ್ಯಾಸಂಸ್ಥೆ, ಮೈಸೂರು ಸಾಮಾಜಿಕ ಮಾಧ್ಯಮಗಳ ಬಲೆಗೆ ಸಿಲುಕಿವೆ ಹಲವು ದೇಶಗಳು…
ಸ್ವಾವಲಂಬನೆಯ ಸಂಕೇತ ಮಹಾತ್ಮ ಗಾಂಧೀಜಿ ಮಹಾತ್ಮ ಗಾಂಧೀಜಿ ಅವರು ಭಾರತದ ಸ್ವಾತಂತ್ರ್ಯ ಹೋರಾಟದ ಮಹಾನ್ ನಾಯಕ ಹಾಗೂ ರಾಷ್ಟ್ರಪಿತ ಎಂದು…
ಪರಶುರಾಮ್, ನಿರ್ದೇಶಕರು, ಒಡನಾಡಿ ಸೇವಾ ಸಂಸ್ಥೆ ಗಾಂಧಿ ವಿಚಾರಗಳನ್ನು ಸಂವಾದದ ಮೂಲಕ ಮುನ್ನಡೆಸಲು ಸಾಧ್ಯವೇ? ಅಥವಾ ಅನುಸರಿಸಲು ಸಾಧ್ಯವಾಗದಿರುವ ನಡೆಯನ್ನು…