Andolana originals

ದಸರಾ ಕ್ರೀಡಾಕೂಟ; ಈ ಬಾರಿ ಏಕ ಮಾದರಿ ಆಟೋಟ

ಜಿ. ತಂಗಂ ಗೋಪಿನಾಥಂ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಯುವ ಸಂಭ್ರಮ, ಯುವ ದಸರಾ ಯುವಜನರ ಅಚ್ಚುಮೆಚ್ಚು ಕಾರ್ಯಕ್ರಮಗಳು ಎಂಬುದು ನಿಸ್ಸಂಶಯ. ಅವುಗಳ ಹೊರತಾಗಿ ದಸರಾ ಕ್ರೀಡಾಕೂಟವು ಯುವ ಸಮೂಹವನ್ನು ಸೂಜಿಗಲ್ಲಿನಂತೆ ಸೆಳೆಯುತ್ತದೆ. ಇಲ್ಲಿ ಗೆಲ್ಲಲೇಬೇಕು ಎಂಬುದು ಪ್ರತಿಯೊಬ್ಬ ಕ್ರೀಡಾಪಟುವಿನ ಕನಸು, ಏಕೆಂದರೆ ಮುಂದಿನ ಕ್ರೀಡಾ ಹಾದಿಯಲ್ಲಿ ಅದೊಂದು ಮೈಲಿಗಲ್ಲು ಆಗುತ್ತದೆ.

ಕ್ರೀಡಾಕೂಟದಲ್ಲಿ ಓಟದ ಸ್ಪರ್ಧೆಯಲ್ಲಿ ಗೆದ್ದವರು ಒಲಿಂಪಿಕ್ಸ್‌ನಲ್ಲೂ ಸ್ಪಽಸಿದ ಉದಾಹರಣೆಗಳಿವೆ. ಅ. ೩ರಿಂದ ೬ರವರೆಗೆ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ನಡೆಯಲಿದ್ದು, ಇದಕ್ಕಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಕಲ ಸಿದ್ಧತೆ ನಡೆಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕ್ರೀಡಾಕೂಟಕ್ಕೆ ಚಾಲನೆ ನೀಡಲಿದ್ದಾರೆ. ಕಳೆದ ವರ್ಷ ಪ್ರಥಮ ಬಾರಿಗೆ ರಾಜ್ಯ ಮಟ್ಟದ ಪ್ರತಿಭಾನ್ವೇಷಣಾ ದಸರಾ ಕ್ರೀಡಾಕೂಟ ‘ಸಿಎಂ ಕಪ್’ ಹಾಗೂ ರಾಜ್ಯ ಮಟ್ಟದ ದಸರಾ ಕ್ರೀಡಾಕೂಟ ‘ಸಿಎಂ ಕಪ್’ ಎಂಬ ಹೆಸರಿನಲ್ಲಿ ಎರಡು ಮಾದರಿಯಲ್ಲಿ ಕ್ರೀಡಾಕೂಟ ೧೦ ದಿನಗಳ ಕಾಲ ನಡೆದಿತ್ತು.

ಆದರೆ, ಈ ಬಾರಿ ನಾಲ್ಕು ದಿನಗಳ ಕಾಲ ರಾಜ್ಯ ಮಟ್ಟದ ಒಂದು ಮಾದರಿಯ ಕ್ರೀಡಾಕೂಟವನ್ನು ಹಮ್ಮಿಕೊಳ್ಳಲಾಗಿದೆ. ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದ ಜೊತೆಗೆ ಮೈಸೂರು ವಿಶ್ವವಿದ್ಯಾಲಯದ ಸ್ಪೋರ್ಟ್ಸ್ ಪೆವಿಲಿಯನ್ ಸೇರಿದಂತೆ ವಿವಿಧೆಡೆ ಕ್ರೀಡಾ ಸ್ಪರ್ಧೆಗಳನ್ನು ಆಯೋಜಿಸಲು ಸಿದ್ಧತೆ ನಡೆದಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ, ಮೈಸೂರು, ಬೆಳಗಾವಿ ಎಂಬ ೫ ಕ್ರೀಡಾ ವಿಭಾಗಗಳನ್ನು ರಚಿಸಲಾಗಿದೆ. ಈ ವಿಭಾಗಗಳಲ್ಲಿ ಉತ್ತಮ ಪ್ರದರ್ಶನ ತೋರಿದ ಕ್ರೀಡಾಪಟುಗಳು ಇಲ್ಲಿ ಪ್ರಶಸ್ತಿಗಾಗಿ ಸೆಣೆಸಲಿದ್ದಾರೆ.

ಗುಂಪು ಸ್ಪರ್ಧೆ: ಜಿಮ್ನಾಸ್ಟಿಕ್, ವಾಲಿಬಾಲ್, ಕಬಡ್ಡಿ, ಖೋ-ಖೋ, ಶಟಲ್ ಬ್ಯಾಡ್ಮಿಂಟನ್, ಬಾಸ್ಕೆಟ್ ಬಾಲ್, ಹ್ಯಾಂಡ್ ಬಾಲ್, ಟೇಬಲ್ ಟೆನಿಸ್, ಟೆನಿಸ್, ಫುಟ್ಬಾಲ್, ಬ್ಯಾಡ್ಮಿಂಟನ್, ಹಾಕಿ ಪಂದ್ಯಾವಳಿ. (ಪುರುಷ ಮತ್ತು ಮಹಿಳೆಯರಿಗೆ ಪ್ರತ್ಯೇಕ).

ಅಥ್ಲೆಟಿಕ್ಸ್: ೧೦೦, ೨೦೦, ೪೦೦, ೮೦೦, ೧,೫೦೦ ಮೀಟರ್ ಓಟ, ಉದ್ದ ಜಿಗಿತ, ಎತ್ತರ ಜಿಗಿತ, ಗುಂಡು ಎಸೆತ, ಟ್ರಿಪಲ್ ಜಂಪ್, ಜಾವೆಲಿನ್ ಥ್ರೋ, ಡಿಸ್ಕಸ್ ಥ್ರೋ, ೪೧೦೦ ಮೀ. ಹಾಗೂ ೪೪೦೦ ಮೀ. ರಿಲೇ ಸ್ಪರ್ಧೆಗಳು ನಡೆಯಲಿವೆ.

ಪುರುಷರಿಗೆ ೫,೦೦೦ ಮೀ. ಓಟ, ೧೧೦ ಮೀ. ಹರ್ಡಲ್ಸ್ ನಡೆಯಲಿದೆ. ಮಹಿಳೆಯರಿಗೆ ೩,೦೦೦ ಮೀ. ಓಟ, ೧೦೦ ಮೀ. ಹರ್ಡಲ್ಸ್ ಓಟ ನಡೆಯಲಿದೆ.

ಈಜು ಸ್ಪರ್ಧೆ: ೧೦೦, ೨೦೦, ೪೦೦ ಮೀ. ಫ್ರೀ ಸ್ಟೈಲ್, ೧೦೦, ೨೦೦ ಮೀ. ಬ್ಯಾಕ್ ಸ್ಟ್ರೋಕ್, ೧೦೦ ಮೀ. ಬಟರ್ -, ೧೦೦, ೨೦೦ ಮೀ. ಬ್ರೆಸ್ಟ್ ಸ್ಟ್ರೋಕ್, ೨೦೦ ಮೀ. ಇಂಡುವಿಜಲ್ ಮಿಡ್ಲೆ, ೪೧೦೦ ಮೀ. ಫ್ರೀಸ್ಟೈಲ್ ರಿಲೇ ಇರುತ್ತದೆ. ಮೇಲಿನ ಇಷ್ಟು ಸ್ಪರ್ಧೆಗಳು ತಾಲ್ಲೂಕು, ಜಿಲ್ಲೆ, ವಿಭಾಗ ಮತ್ತು ರಾಜ್ಯ ಮಟ್ಟದಲ್ಲಿ ನಡೆಯಲಿವೆ. ಸೈಕ್ಲೋಥಾನ್, ದೇಹದಾರ್ಢ್ಯ ಹಾಗೂ ಮ್ಯಾರಾಥಾನ್ ಸ್ಪರ್ಧೆ ತಾಲ್ಲೂಕು, ಜಿಲ್ಲೆ ಮತ್ತು ವಿಭಾಗ ಮಟ್ಟದಲ್ಲಿ ನಡೆಯುವುದಿಲ್ಲ. ಬದಲಾಗಿ ಮೈಸೂರಿನಲ್ಲಿ ರಾಜ್ಯ ಮಟ್ಟದ ಸ್ಪರ್ಧೆ ನಡೆಯಲಿದೆ.

ಸ್ಪರ್ಧೆಗಳ ವಿವರ:೩,೫೦೦ ಸ್ಪರ್ಧಿಯಾಗಿ ಪ್ರತಿ ವಿಭಾಗದಿಂದ ೯೦೦ ಕ್ರೀಡಾಪಟುಗಳು ಸೇರಿದಂತೆ ಒಟ್ಟು ೫ ವಿಭಾಗಗಳಿಂದ ೩,೫೦೦ ಸ್ಪರ್ಧಿಗಳುಈ ಕ್ರೀಡಾಕೂಟದಲ್ಲಿ ಪ್ರತಿಭೆಯನ್ನು ಪ್ರದರ್ಶಿಸಲಿದ್ದಾರೆ. ಅಥ್ಲೆಟಿಕ್ಸ್, ಗುಂಪು ಮಾದರಿ ಸೇರಿದಂತೆ ಬರೋಬ್ಬರಿ ೨೭ ಕ್ರೀಡೆಗಳಲ್ಲಿ ಸ್ಪರ್ಧೆಗಳು ನಡೆಯಲಿವೆ. ೩ ಕೋಟಿ ರೂ. ಅನುದಾನ ಈ ಬಾರಿಯ ದಸರಾ ಕ್ರೀಡಾಕೂಟಕ್ಕೆ ಒಟ್ಟು ೬ ಕೋಟಿ ರೂ. ಅನುದಾನ ಕೋರಿ ಕ್ರೀಡಾ ಇಲಾಖೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿತ್ತು. ಸರ್ಕಾರ ಸದ್ಯ ಶೇ. ೫೦ ರಷ್ಟು ಅಂದರೆ, ೩ ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಸೆ. ೨೬, ೨೭ರಂದು ಜಿಲ್ಲಾ ಮಟ್ಟದ ಕ್ರೀಡಾಕೂಟ ಮೈಸೂರು ಜಿಲ್ಲೆಯ ೯ ತಾಲ್ಲೂಕುಗಳಲ್ಲಿ ನಡೆದ ೨೦೨೪-೨೫ನೇ ಸಾಲಿನ ತಾಲ್ಲೂಕು ಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟದ ವೈಯಕ್ತಿಕ ಸ್ಪರ್ಧೆಯಲ್ಲಿ ಪ್ರಥಮ ಮತ್ತು ದ್ವಿತೀಯ ಸ್ಥಾನ ಹಾಗೂ ಗುಂಪು ಕ್ರೀಡೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳಿಗೆ, ಜಿಲ್ಲಾ ಮಟ್ಟದ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಸೆ. ೨೬ ಮತ್ತು ೨೭ರಂದು ನಗರದ ಚಾಮುಂಡಿವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ. ಇಲ್ಲಿನ ವಿಜೇತರನ್ನು ವಿಭಾಗೀಯ ಮಟ್ಟದ ಸ್ಪರ್ಧೆಗೆ ಆಯ್ಕೆ ಮಾಡಲಾಗುತ್ತದೆ. ಅದರಲ್ಲಿ ಜಯ ಗಳಿಸಿದವರಿಗೆ ದಸರಾ ಕ್ರೀಡಾಕೂಟದಲ್ಲಿ ಭಾಗಿಯಾಗಲು ಅವಕಾಶ ನೀಡಲಾಗುತ್ತದೆ.

ಪ್ರಸಕ್ತ ಸಾಲಿನ ದಸರಾ ಕ್ರೀಡಾಕೂಟಕ್ಕೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಕಲ ಸಿದ್ದತೆ ನಡೆಸುತ್ತಿದ್ದು, ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣ, ಮೈಸೂರು ವಿವಿಯ ಸ್ಪೋರ್ಟ್ಸ್ ಪೆವಿಲಿಯನ್ ಸೇರಿದಂತೆ ವಿವಿಧೆಡೆ ಅ. ೩ ರಿಂದ ೬ ರವರೆಗೆ ರಾಜ್ಯ ಮಟ್ಟದ ಸ್ಪರ್ಧೆಗಳು ನಡೆಯಲಿವೆ. ೩,೫೦೦ ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದು, ಕ್ರೀಡಾಕೂಟಕ್ಕೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳುತ್ತಿದ್ದೇವೆ. ? ಭಾಸ್ಕರ್ ನಾಯಕ್, ಸಹಾಯಕ ನಿರ್ದೇಶಕ

 

ಜಿ ತಂಗಂ ಗೋಪಿನಾಥಂ

ಮೂಲತಃ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಗೋಪಿನಾಥಂ ಗ್ರಾಮದವನಾದ ನಾನು ಸದ್ಯ,‌ ಮೈಸೂರಿನಲ್ಲಿ ನೆಲೆಸಿದ್ದೇನೆ. 2019ರಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಮಹಾರಾಜ ಕಾಲೇಜಿನಲ್ಲಿ ಬಿಎ ( ಇತಿಹಾಸ, ಐಚ್ಛಿಕ ಕನ್ನಡ, ಪತ್ರಿಕೋದ್ಯಮ ) ಪದವಿಯನ್ನು ಮುಗಿಸಿದ್ದೇನೆ. ನಂತರ 2021ರಲ್ಲಿ‌ ಮೈಸೂರು ವಿಶ್ವವಿದ್ಯಾನಿಲಯದ‌ಲ್ಲಿ ಎಂಎ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ‌ 2 ವರ್ಷಗಳ ‌ಕಾಲ ಅನುಭವ ಪಡೆದುಕೊಂಡಿದ್ದೇನೆ. ವಿಜಯವಾಣಿ ಪತ್ರಿಕೆಯಲ್ಲಿ ಚಾಮರಾಜನಗರ ಜಿಲ್ಲಾ ಸಹಾಯಕ ವರದಿಗಾರನಾಗಿ ಕೆಲಸ ಮಾಡಿದ್ದೇನೆ. ಕಳೆದ 8 ತಿಂಗಳಿಂದ ಮೈಸೂರಿನ ಆಂದೋಲನ‌ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

Recent Posts

ಮೈಸೂರಿನಲ್ಲಿ ಮಾಗಿ ಉತ್ಸವ: ಸಂಗೀತದ ಹೊನಲು ಹರಿಸಿದ ವಿಜಯ್‌ ಪ್ರಕಾಶ್‌

ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್‌ ಪ್ರಕಾಶ್‌ ಅವರು…

8 hours ago

ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ

ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…

9 hours ago

ರೈತರಿಗೆ ಮತ್ತೊಂದು ಸಂಕಷ್ಟ: ಈ ಬಾರಿ ಮಾವಿನ ಇಳುವರಿ ಭಾರೀ ಇಳಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…

9 hours ago

ಬಂಡೀಪುರದಲ್ಲಿ ಮತ್ತೊಂದು ಕಾಡಾನೆ ಸಾವು

ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…

10 hours ago

ಪ್ರಮುಖ ಆಕರ್ಷಣೀಯ ಕೇಂದ್ರವಾಗಿ ಹೊರಹೊಮ್ಮಿದ ಅಯೋಧ್ಯೆ ರಾಮಮಂದಿರ

ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್‌ಮಹಲನ್ನು ಹಿಂದಿಕ್ಕಿ ನಂಬರ್‌ ಒನ್‌ ಪಟ್ಟ ಪಡೆದಿದೆ. ಈ ಮೂಲಕ ಈಗ…

10 hours ago

ಪ್ರವಾಸಿಗರಿಗೆ ಬಿಗ್‌ ಶಾಕ್: ನಂದಿಗಿರಿಧಾಮದಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್‌

ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್‌ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್‌ ಶಾಕ್‌ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…

10 hours ago